ಇತ್ತೀಚೆಗೆ ಉಡುಪಿಯ ಸಂತಕಟ್ಟೆ ಬಳಿ ನಡೆದ ದರೋಡೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಉಡುಪಿ ಪೊಲೀಸರಿಗೆ ಶಾಕ್ ಕಾದಿತ್ತು. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಅದರಲ್ಲಿ ಕಂಡ ದೃಶ್ಯಗಳನ್ನು ಕಂಡು ಪೊಲೀಸರು ಬೆಚ್ಚಿ ಬಿದ್ದಿದ್ದರು. ದಿಲ್ಲಿ ಕ್ರೈಮ್-2 ವೆಬ್ ಸೀರೀಸ್‌ನ ಕಚ್ಚಾ ಬನಿಯನ್ ಗ್ಯಾಂಗ್ ಮಾದರಿಯಲ್ಲೇ.. ಬರೀ ಚೆಡ್ಡಿ ಧರಿಸಿ, ಮೈಗೆ ಎಣ್ಣೆ
ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸಾರಸ್ವತಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೆÇಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಐದು
ಗಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಮಂಗಳವಾರ ತಡರಾತ್ರಿ ಪತ್ತೆಹಚ್ಚಿರುವ ಅಬಕಾರಿ ಪೊಲೀಸ್ರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಂದರ್ಭ ತಲಪಾಡಿ ಮಸೀದಿ ಬಳಿಯ ನಿವಾಸಿ ಸತೀಶ್ ತಲಪಾಡಿ, ಕುಂಜತ್ತೂರು ನಿವಾಸಿಗಳಾದ ನೌಷಾದ್ ಹಾಗೂ ಅನ್ಸೀಫ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಓರ್ವ ಪರಾರಿಯಾಗಿದ್ದಾನೆ ಎಂದು ಅಬಕಾರಿ ಪೊಲೀಸ್ರು ತಿಳಿಸಿದ್ದಾರೆ. ದಾಳಿ ವೇಳೆ ಸತೀಶ್ ತಲಪಾಡಿ ಮನೆಯಿಂದ ಲೀಟರ್ ಗಟ್ಟಲೆ
ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು
ಮಧ್ಯ ಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಓಡುತ್ತಿರುವ ರೈಲಿನಲ್ಲಿ 30ರ ಮಹಿಳೆಯ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಸಿಆರ್‍ಪಿ ಪಡೆಯವರು ಬಂಧಿಸಿ ಸಾತ್ನಾ ಪೆÇೀಲೀಸರಿಗೆ ಒಪ್ಪಿಸಿದರು. ಬಂಧಿತ ಆರೋಪಿ ಉತ್ತರ ಪ್ರದೇಶ ಮೂಲದ ಸದ್ಯ ಕಟ್ನಿ ನಿವಾಸಿ ಆಗಿರುವ 23ರ ಪಂಕಜ್ ಕುಶ್ವಾಹ. ಮೂತ್ರಾಲಯದ ಬಳಿ ಈ ಅತ್ಯಾಚಾರ ನಡೆದಿದೆ. ಸಾತ್ನಾದಲ್ಲಿ ರೈಲು ನಿಲ್ಲುತ್ತಲೇ ಮಹಿಳೆ ಕಂಡ ಸಿಆರ್‍ಪಿ ಪೇದೆಗಳನ್ನು ಕೂಗಿ ಕರೆದು ಆರೋಪಿಯನ್ನು ತೋರಿಸಿದ್ದಾಳೆ. ಓಡತೊಡಗಿದ
ಮೂರು ಜಿಲ್ಲೆಗಳ ಮೂವರು ಕಳ್ಳರು ಸೇರಿ ಕುಂದಾಪುರ ತಾಲೂಕಿನ ಶಂಕರನಾರಾಯಣದ ಗೋಳಿಕಟ್ಟೆಯಲ್ಲಿನ ಬಿಎಸ್ಎನ್ಎಲ್ ಟವರ್ ಹೊಕ್ಕು ಬ್ಯಾಟರಿ ಬಾಕ್ಸ್ ಕದ್ದಿದ್ದರು. ಮೂವರನ್ನೂ ಬಂಧಿಸಿದ ಪೋಲೀಸರು ಕುಂದಾಪುರ ನ್ಯಾಯಾಲಯದಲ್ಲಿ ನಿಲ್ಲಿಸಿ, ಜೈಲಿಗೆ ಕಳುಹಿಸಿದ್ದಾರೆ. ಉಡುಪಿ ಉದ್ಯಾವರ ಪಿತ್ರೋಡಿಯ 45ರ ಬಾಲಕೃಷ್ಣ, ಬಂಟ್ವಾಳ ಫರಂಗಿಪೇಟೆಯ 38ರ ಬದ್ರುದ್ದೀನ್, ಹೊನ್ನಾವರ ಕರ್ಕಿ ಮೂಲದ ಉಡುಪಿ ಲಕ್ಷ್ಮಿನಗರ ನಿವಾಸಿ 36ರ ಉಸ್ಮಾನ್ ಬಂಧಿತರು. ಅವರಿಂದ ಬ್ಯಾಟರಿ ಸಾಗಿಸಲು ಬಳಸಿದ
ಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ ೩೩ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ಬಜ್ಪೆ ಮೂಲದ ಕಿಶೋರ್ ಶೆಟ್ಟಿ(35) ಮತ್ತು ಫಿಲೀಪ್ ಮೇರಿ ಲೋಬೋ (34) ಎಂದು ಗುರುತಿಸಲಾಗಿದೆ.ನಿತೀಶ್ ಭಡಾರಿ(35), ಪ್ರೀತಿ ಲೋಬೋ(29) ಮತ್ತು ಹರೀಶ್(62)
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಮೀನುಗಾರಿಕ ಬೋಟಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ದುರ್ಘಟನೆಯು ಪಟಾಕಿಯ ಕಿಡಿಯಿಂದ ಸಂಭವಿಸಲಾಗಿದೆ ಎಂದು ಶಂಕಿಸಲಾಗಿದೆ. ಇದರಿಂದಾಗಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ನಾಲ್ವರ ಹತ್ಯೆ ಹಿಂದೆ ದರೋಡೆ ಕೃತ್ಯದ ಶಂಕೆ ವ್ಯಕ್ತವಾಗಿದೆ. ಹಬ್ಬದ ದಿನ ಈ ಸುದ್ದಿ ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ. ಮನೆಗೆ ನುಗ್ಗಿ ತಾಯಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಲಾಗಿದೆ. ಈ ಮನೆಯ ಯಜಮಾನ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಮನೆಯಲ್ಲಿದ್ದ ಮೂವರು ಮಕ್ಕಳು ಮತ್ತು ತಾಯಿಯನ್ನು ಚೂರಿಯಲ್ಲಿ ಇರಿದು ಕೊಲೆಗೈಯಲಾಗಿದೆ.
ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೆÇಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ದಾಸ್ ನಾಯಕ್ ಅವರ ಮನೆಯ ಬಾಗಿಲು ಮುರಿದು, ಬೆಡ್ ರೂಮ್ ನ ಅಲ್ಮೇರಾದಲ್ಲಿದ್ದ ಸುಮಾರು 66,36,300 ರೂ. ಮೌಲ್ಯದ ಅಂದಾಜು 1882 ಗ್ರಾಂ ತೂಕದ ಚಿನ್ನಾಭರಣ ಹಾಗೂ