ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದು ಇಂದು ಅವರ ಶವವು ಕಾರ್ಕಳದ ಪುರಿಯ ಸಾರ್ವಜನಿಕ ಬಾವಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೃತಿನ್ ಶೆಟ್ಟಿ ಕಾಣೆಯಾಗಿರುವ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದರು. ಕಾಪು ಜನಾರ್ದನ ದೇವಸ್ಥಾನ
ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣ ಸೆಂಟ್ರಿoಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಜಾ ಹಿನ್ನೆಲೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ(15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ಮೂಲದವರಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ
ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ
ಮೂಡುಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ. ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್‌ನಿಂದ ಬೀಪಾತಿಮ್ಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು ಬರುತ್ತಿದ್ದ ಸಂದರ್ಭದಲ್ಲಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಸಂಪಿಗೆಯಲ್ಲಿ ಮೂಡುಬಿದಿರೆಯಿಂದ
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ
ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದು ಖಚಿತ
ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.ತಲಪಾಡಿ ಗ್ರಾಮದ ನಾರ್ಲ,ಪಡೀಲ್ ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ.ಫೈಝಲ್ ಇಂದು ಬೆಳಿಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ.ಮನೆಯಲ್ಲಿ ಫೈಸಲ್
ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯ ಮಧ್ವಗುತ್ತು ಎಂಬಲ್ಲಿ ಸಂಭವಿಸಿದೆ. ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರಾಗಿದ್ದಾರೆ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‍ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ
ಮೂಡುಬಿದಿರೆ: ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ