ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ “ಉಚ್ಚಿಲ ದಸರಾ ಉತ್ಸವ-2022″ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಹಾಗೂ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ. ಸಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿಯ ಸದಸ್ಯರ ಸಭೆ
ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ ನಿರಂತರ ನಡೆಯುವ ಬೆಲ್ಲದಪ್ಪ ಮತ್ತು ಪೆÇಟ್ಟಪ್ಪ ಸೇವೆಗಳು ಇಲ್ಲಿನ ವಿಶೇಷ ಸೇವೆ. ಈ ದಿನ ನಡೆಯುವುದು ಸಾರ್ವಜನಿಕ ಕಟ್ಟದಪ್ಪ(ಕಟಾಹಪೂಪ)ಸೇವೆ. ಪಡುಬಿದ್ರಿ ಗ್ರಾಮದ ಕಲ್ಲಟ್ಟೆ ಎಂಬ ಪ್ರದೇಶದಲ್ಲಿ
ಶ್ರಮ್ ಚಾರಿಟೇಬಲ್ ಟ್ರಸ್ಟ್ ರಿ ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ದೇವರಿಗೆ ವಿಶೇಷ ಬಾಳೆದಿಂಡಿನ ಗೋಪುರ ನಿರ್ಮಿಸಿ ವಿವಿಧ ಜಾತಿಯ ಹೂಗಳಿಂದ ಜಾತಿಯ ಅಲಂಕರಿಸಲಾಗಿತ್ತು.ಮಣೆಯ ಮೇಲೆ ಹೊಸ ಬಟ್ಟೆಯನ್ನು ಹಾಕಿ ಅದರ ಮೇಲೆ ಅಕ್ಕಿ ಹರಡಿ ಕಳಶ ಇಟ್ಟು ಅದಕ್ಕೆ ಕುಂಕುಮ, ಅರಿಸಿಣ ಹಚ್ಚಲಾಗಿತ್ತು, ಕಳಸದ ಮೇಲೆ ತೆಂಗಿನಕಾಯಿ ಇಟ್ಟು
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ, 122 ನೇ ಭಜನಾ ಸಪ್ತಾಹ ಮಹೋತ್ಸವವು, ನಾಗರ ಪಂಚಮಿಯಂದು ಶುಭಾರಂಭಗೊಂಡು, ದ್ವಾದಶಿ ಪರ್ಯಂತ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಊರ ಪರವೂರ ಭಜನಾ ಮಂಡಳಿಗಳಿಂದ ಅಹೋರಾತ್ರಿ 7 ದಿನಗಳ ಕಾಲ, ನಿರಂತರ ಭಜನೆ ಈ ಮಹೋತ್ಸವದಲ್ಲಿ ನಡೆಯಲಿದೆ. ಈ ಪ್ರಯುಕ್ತ ನಡೆದ ದೀಪ ಸ್ಥಾಪನಾ ಕಾರ್ಯಕ್ರಮ ವೈಭವದಿಂದ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು,
ಕಾಪು ಸಮೀಪದ ಮಜೂರಿನ ಗೋವರ್ಧನ ಭಟ್ ಅವರು ಜೀವಂತ ನಾಗರ ಹಾವಿಗೆ ತನು ಎರೆದು,ಆರತಿ ಬೆಳಗಿಸಿ ಮಂಗಳವಾರ ನಾಗರಪಂಚಮಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಪ್ರತೀ ವರ್ಷ ನಾಗರ ಪಂಚಮಿಯಂದು ತನ್ನ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆಯುವ ಗೋವರ್ಧನ ಭಟ್ ಅವರು ಈ ಬಾರಿ ಒಂದು ಹಾವಿಗೆ ಮನೆಯವರ ಜೊತೆಗೂಡಿ ತನು ಎರೆದು, ಪೂಜೆ ಮಾಡಿ, ನಾಗರ ಪಂಚಮಿ ಆಚರಿಸಿದರು. ಕಾಪು ಪರಿಸದಲ್ಲಿ ಅಪಾಯಕ್ಕೆ ಸಿಲುಕಿ ಗಾಯಗೊಳ್ಳುವ ನಾಗರ ಹಾವುಗಳನ್ನು ಮನೆಗೆ
ಬಂಟ್ವಾಳ: ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ. ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು
ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಯ ಪ್ರಯುಕ್ತ ವಿಶೇಷ ತೀರ್ಥ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿ ದೇವಸ್ಥಾನದ ತೀರ್ಥ ಬಾವಿಗಳಾದ ಶಂಖ, ಚಕ್ರ, ಗಧಾ, ಪದ್ಮ ಕೆರೆಗಳಿಗೆ ವೀಳ್ಯ ಅಡಿಕೆಯ ಭಾಗಿನ ಬಿಟ್ಟು ತೀರ್ಥ ನೀರು ಮಿಂದು ಪುನೀತರಾದರು. ದೇವರ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದರು. ಮಹಾಭಾರತ ಯುದ್ಧದ ಬಳಿಕ ಪಾಂಡವರು ತಮ್ಮ
ಬೈಂದೂರು: ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ರಕ್ಕಸ ಅಲೆಗಳ ಕಡಲ್ಕೊರೆತ ಸೌಪರ್ಣಿಕಾ ನದಿಯ ನೆರೆಹಾವಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗಿ ಸಾಕಷ್ಟು ಮುಗ್ಧ ಜೀವಗಳು ಮತ್ತು ಜಾನುವಾರುಗಳು ದಿನದಿಂದ ದಿನಕ್ಕೆ ಸಾವನ್ನಪ್ಪುತ್ತಿವೆ. ಅಪಘಾತಗಳು ಹೆಚ್ಚುತ್ತಿರುವುದರಿಂದ ಜನರು ಭೀತರಾಗಿದ್ದು ಸಂಕಷ್ಟದ ನಿವಾರಣೆಗೆ ಜುಲೈ 28ರಂದು ನಡೆಯುವ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಮಾರಸ್ವಾಮಿ ವರಾಹ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದರ
ಮಠಾಧೀಶರೇ ಆಗಲೀ..ಮಂತ್ರಿ ಮಾಗದರೇ ಆಗಲೀ ಅಧಿಕಾರದ ಪಿತ್ತ ನೆತ್ತಿಗೇರಿ ಎಲ್ಲವೂ ನಾನೇ, ಎಲ್ಲವೂ ನಾನು ನನ್ನಿಂದಲೇ ನಡೆಯಬೇಕು ಎಂಬ ಸರ್ವಾಧಿಕಾರ ಧೋರಣೆ ತಾಳಿದರೆ ಅವರ ಅವನತಿ ಆರಂಭವಾದಂತೆ ಎಂಬುದಾಗಿ ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧೀನದಲ್ಲಿ ನೂತನವಾಗಿ ನಿರ್ಮಿಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಶಿಲಾನ್ಯಾಸ ಕಾರ್ಯದಲ್ಲಿ ಭಾಗವಹಿಸಿ,
ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆದ ಈ ದೀಪೋತ್ಸವದಲ್ಲಿ ಗ್ರಾಮ ಹಾಗೂ ಸ್ಥಳೀಯ ಗ್ರಾಮಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸ್ವಯಂ ಪ್ರೇರಿತರಾಗಿ ಎಣ್ಣೆದೀಪ ಉರಿಸುವ ಮೂಲಕ ದೀಪೋತ್ಸವದಲ್ಲಿ ತಮ್ಮ ಅಳಿಲ ಸೇವೆ ಪೂರೈಸಿದ್ದಾರೆ. ಈ ಸಂದರ್ಭ