Home Archive by category ರಾಜಕೀಯ (Page 3)

ಬಿಜೆಪಿಗೆ ನನ್ನನ್ನು ಕೊಳ್ಳುವ ತಾಕತ್ತು ಇಲ್ಲ : ಪ್ರಕಾಶ್ ರಾಜ್

ಜಾಲ ತಾಣಗಳಲ್ಲಿ ಕೆಲವು ಬಿಜೆಪಿಗರು ನಟ ಪ್ರಕಾಶ್‌ರಾಜ್ ಬಿಜೆಪಿ ಸೇರುವುದಾಗಿ ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಉತ್ತರಿಸಿರುವ ಪ್ರಕಾಶ್ ರಾಜ್ ಅವರು ನನ್ನನ್ನು ಖರೀದಿಸುವಷ್ಟು ಸೈದ್ಧಾಂತಿಕ ಸಿರಿವಂತಿಕೆ ಹೊಂದಿಲ್ಲ ಎಂದು ಉತ್ತರಿಸಿದ್ದಾರೆ. ಬಿಜೆಪಿಯ ಖರೀದಿ ರಾಜಕಾರಣ ನಡೆಯಬಹುದು. ನನ್ನನ್ನು ಕೊಂಡುಕೊಳ್ಳುವ ಯೋಗ್ಯತೆ ಆ ಕಡೆ ಇಲ್ಲ ಎಂದೂ ಪ್ರಕಾಶ್ ರಾಜ್

ಮತ ಗರ್ಜನೆಯ ಗೃಹಿಣಿ

ಹದಿನೆಂಟನೆಯ ಲೋಕ ಸಭೆಗೆ ಚುನಾವಣೆ ಪ್ರಕ್ರಿಯೆ ಮುಂದುವರಿದಿದೆ. ಭಾರತದಲ್ಲಿ ಚುನಾವ್ ಎಂದರೆ ಆಯ್ಕೆ ಎಂಬ ಶಬ್ದದಿಂದ ಈ ಚುನಾವಣೆ ಎಂಬ ಶಬ್ದವನ್ನು ಕನ್ನಡದವರು ಎರವಲು ಪಡೆದುಕೊಂಡಿದ್ದಾರೆ. ಆಯ್ಕೆ, ಅಜಪು, ತೇರ್ವು, ತೇರ್ಗಡೆ ಮೊದಲಾದ ದ್ರಾವಿಡ ನುಡಿಗಳಿದ್ದು ಅವುಗಳಿಂದಲೇ ತಮ್ಮ ನುಡಿ ಟಂಕಿಸಿಕೊಳ್ಳಲಾಗದ ಶಬ್ದ ಬ್ರಹ್ಮರೆಲ್ಲ ಕನ್ನಡದಲ್ಲಿ ಬಂದು ಹೋಗಿದ್ದಾರೆ. ಅದು ಅಲ್ಲೇ ಇರಲಿ ಈ ಚುನಾವಣೆ ಎಲ್ಲಿ, ಯಾವಾಗ ಆರಂಭವಾಯಿತು; ಏಕೆ ಆರಂಭವಾಯಿತು ಎಂದು ತಿಳಿಯುವುದು

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,

ಕಾರ್ಕಳ : ಮತದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ

ಕಾರ್ಕಳ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ಕಾರ್ಕಳದ ಬಸ್ ನಿಲ್ದಾಣದಲ್ಲಿ ನಡೆಯಿತು. ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಹಾಗೂ ಪುರಸಭಾ ಮುಖ್ಯ ಅಧಿಕಾರಿ, ರೂಪಾ ಟಿ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆ ಉದ್ದೇಶಿಸಿ ಮಾತನಾಡಿದ ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಭಾರತ ಒಂದು ಪ್ರಪಂಚದಲ್ಲಿ ಅತಿ ಬಲಿಷ್ಠವಾದ

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ

ಉಡುಪಿ: ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ

ಉಡುಪಿ: ಏ.3ರಂದು ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್‌ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ