ಸುರತ್ಕಲ್ ಮಾರ್ಕೆಟ್ ಕಳೆದ 5 ವರ್ಷದಿಂದ ಅಸ್ತಿಪಂಜರದಂತೆ ಉಳಿದಿದ್ದು, ಬಿಜೆಪಿ ಶಾಸಕರ ಅಭಿವೃದ್ಧಿಗೆ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವೈ.ರಾಘವೇಂದ್ರ ರಾವ್ ಅವರು , ಇಲ್ಲಿನ ಮಾರ್ಕೆಟ್ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ
ಕಾರ್ಕಳ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ವೇಗವನ್ನು ಹೆಚ್ಚಿಸಿದೆ. ಇಂದು ಕಾರ್ಕಳದಲ್ಲಿ 210 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಬೂತ್ ಮಟ್ಟದಲ್ಲಿ ಮತಯಾಚನೆಯಲ್ಲಿ ತೊಡಗಿದರು.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಕೋಮುಗಲಭೆಗಳಾಗಿವೆ. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ. ಜನತೆ ಮತ್ತೆ ಕೋಮುಗಲಭೆಯ ಪರಿಸ್ಥಿತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ದ.ಕ.ಜಿಲ್ಲೆಯಲ್ಲಿ ಒಂದು ಸ್ಥಾನವನ್ನೂ ಬಿಟ್ಟು ಕೊಡದಿದ್ದರೆ ಕೋಮುಗಲಭೆ ಆಗಲ್ಲ ಎಂದು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷ, ರಾಜ್ಯದ ಚುನಾವಣಾ ಸಹ ಪ್ರಭಾರಿಯಾಗಿರುವ ಅಣ್ಣಾಮಲೈ ಅವರು ಹೇಳಿದರು. ಮಾಡ್ನೂರು ಗ್ರಾಮದ ಕಾವು-ನನ್ಯದ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಗಾಂಧಿನಗರದ ಕಡ್ದಬೆಟ್ಟು ವಾಡ್ 9ನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಕಾರ್ಯಕರ್ತರ ಜತೆ ಮಾತುಕತೆ ನಡೆಸಿ ಮತದಾನ ಮಾಡುವಂತೆ ವಿನಂತಿಸಿದರು. ನಂತರ ಕಾರ್ಯಕರ್ತರು ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಪರವಾಗಿ ಮತಯಾಚಿಸಿದರು.ವಾಡ್ 9 ಸದಸ್ಯೆ ದಿವ್ಯಾ ಜಗದೀಶ್, ಮಂಡಲದ ಕೋಶಾಧಿಕಾರಿ ಹರೀಶ್ ಎಂ.ಕೆ, 64ನೇ ವಾರ್ಡಿನ ಬೂತ್ ಅಧ್ಯಕ್ಷ ವಸಂತ, 65ನೇ ವಾರ್ಡಿನ ಬೂತ್
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪರ್ಲಿಯ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರು ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಬಿ. ರಮಾನಾಥ ರೈ ಅವರ ಪರವಾಗಿ ಪ್ರಚಾರ ನಡೆಸಿದರು.
ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾದಿಂದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಗೆ ನೀಡುವ ಮೂಲಕ ಮತ್ತೊಮ್ಮೆ ಅವರನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ.” ಎಂದು ವೇದವ್ಯಾಸ ಕಾಮತ್
ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರು ಬೆಳ್ಮಣ್ ನಲ್ಲಿ ಪಾದಯಾತ್ರೆಯ ಮೂಲಕ ಮತಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಊರಿನವರು ಪಾಲ್ಗೊಂಡಿದ್ದರು.
ಕರಾವಳಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದಂತೆ ಎಲ್ಲಾ ಪಕ್ಷದ ಪ್ರಚಾರ ಕಾರ್ಯ ಭಾರದಿಂದ ಸಾಗುತ್ತಿದೆ.ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಪಲ್ಲತ್ತೂರು, ಪಡುವನ್ನೂರು, ಮುಂಡೂರುನಲ್ಲಿ ತನ್ನ ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ಕಾರ್ಯ ಹಾಗೂ ಮತಯಾಚನೆ ನಡೆಸಿದರು.
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಟಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್, ಎಪಿಎಂಸಿಯ ಮಾಜಿ ಅಧ್ಯಕ್ಷ ಪ್ರವೀಣ್ ಜೈನ್, ವಾಲ್ಪಾಡಿ ಗ್ರಾ.ಪಂ.
ಆರ್ಯಾಪು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಬ್ಬಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮನಾಥ ಶೆಟ್ಟಿ ಕಾವು, ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್ ನೇತಾರರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.




























