ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ
ಸುಪ್ರೀಂಕೋರ್ಟ್ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ಆತುರದಿಂದ ಸಲಿಂಗ ವಿವಾಹಕ್ಕೆ ಪ್ರಾತಿನಿದ್ಯ ಕೊಡಲು ಯೋಚಿಸಿರುವುದು ಇಡೀ ನಾಗರೀಕ ಸಮಾಜಕ್ಕೆ ನೋವಾಗಿದೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದರು. ಭಾರತದಲ್ಲಿ ವಿವಾಹಕ್ಕೆ ಶ್ರೇಷ್ಠ ಪ್ರಾಮುಖ್ಯತೆಯನ್ನು ಹೊಂದಿದ್ದು, ಕೌಟುಂಬಿಕ ಸಮಾಜವನ್ನು ನಿರ್ಮಿಸುವುದರದಲ್ಲಿ
ಕಾಂಗ್ರೆಸ್ ಗೆಲ್ಲುವುದೇ ಗ್ಯಾರೆಂಟಿ ಇಲ್ಲ, ಹೀಗಾಗಿ ಗ್ಯಾರೆಂಟಿಗಳನ್ನು ಕೊಡುತ್ತ ಹೋಗುತ್ತಾರೆ. ಇವು ಧಾರವಾಹಿಗಳಿದ್ದ ಹಾಗೆ, ವಾರ ವಾರ ಬಿಡುಗಡೆಯಾಗುತ್ತ ಹೋಗುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರೆಂಟ್ ಘೋಷಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆಯ ಭರವಸೆ ನೀಡಿದ್ದಾರೆ. ರಾಜ್ಯದ ಬಜೆಟ್ ಗಾತ್ರ
ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೇ ಮಹಿಳೆಯರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಒದಗಿಸಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದರು. ಕಾಂಗ್ರೆಸ್ ಈಗಾಗಲೇ ನಾಲ್ಕು ಭರವಸೆಗಳ ಗ್ಯಾರಂಟಿ ಕಾರ್ಡ್' ಅನ್ನು ಚುನಾವಣಾ ಪ್ರಣಾಳಿಕೆಯ ರೂಪದಲ್ಲಿ ಬಿಡುಗಡೆ ಮಾಡಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್‍ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ರಾಹುಲ್ ಅವರು ಮಹಿಳೆಯರಿಗೆಉಚಿತ ಬಸ್
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ದ ವೀಕ್ಷಣೆ ನಡೆಯಿತು. ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ಲಾಯಿಲ, ಉಜಿರೆ, ಧರ್ಮಸ್ಥಳ ಹಾಗೂನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಾದದ ವೀಕ್ಷಣೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಂಡಲ ಅಧ್ಯಕ್ಷ ಜಯಂತ
ಮಂಜೇಶ್ವರ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇರಳ ಪೆÇಲೀಸರು ಕೂಡಾ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.ಕರ್ನಾಟಕ ಭಾಗಕ್ಕೆ ವ್ಯಾಪಾರ, ಚಿಕಿತ್ಸೆ, ಶಿಕ್ಷಣ ಪ್ರವೇಶ ಸೇರಿದಂತೆ ವಿವಿದ ಉದ್ದೇಶಗಳಿಗಾಗಿ ಅನೇಕ ಜನರು ಕೇರಳದಿಂದ ಗಡಿ ದಾಟಿರವರು ಮರಳಿ ಬರುವಾಗ ದೊಡ್ಡ ಮೊತ್ತದ ಹಣ ಜೊತೆಯಾಗಿದ್ದರೆ ಸಾಕಷ್ಟು ದಾಖಲೆಗಳನ್ನು ಹೊಂದಿರಬೇಕು. ದಾಖಲೆಗಳ ಕೊರತೆಯಿಂದ
ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಸಾರ್ವಜನಿಕ ನಡೆದ ಸಭೆಯನ್ನು ದ್ದೇಶಿಸಿ ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಅವರು ಮಾತನಾಡಿ,
ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ
ದೇಶದ ಪ್ರಧಾನಿ ನರೇಂದ್ ಮೋದಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡುವ ಮುಖಾಂತರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದರು. ಪುತ್ತೂರಿನ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಿದರು. ಕೇಂದ್ರದ ಮೋದಿ ಸರಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಮಹಿಳೆಯರ




























