Home Archive by category ರಾಜಕೀಯ (Page 48)

ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ

ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ 29 ಮಂದಿ ಶಾಸಕರ ಅಧಿಕೃತ ಪಟ್ಟಿ ಬಿಡುಗಡೆಗೊಂಡಿದೆ. 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ 2.ಆರ್.ಅಶೋಕ್- ಪದ್ಮನಾಭ ನಗರ 3.ಬಿ.ಸಿ ಪಾಟೀಲ್ – ಹಿರೇಕೇರೂರು 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು 6.ಉಮೇಶ್ ಕತ್ತಿ- ಹುಕ್ಕೇರಿ 7.ಎಸ್.ಟಿ.ಸೋಮಶೇಖರ್- ಯಶವಂತಪುರ

ಕೋವಿಡ್ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವ ಕೆಲಸವಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಕೊರೊನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು.ಅಕ್ಕ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಹೆಚ್ಚು ಜನ ಬರುತ್ತಾರೆ, ರಾಜ್ಯದ ಗಡಿಗಳಲ್ಲಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಹೆಚ್.ಡಿ.ರೇವಣ್ಣನವರು ಜೊತೆಗಿದ್ದರು.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ

ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ

ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ

ಆಗಸ್ಟ್ 1ರಂದು ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.

ಮಂತ್ರಿಮಂಡಲದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ನೀಡಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ

ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವ : ಕೇಂದ್ರ ಸಚಿವರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ

ಯುವ ಸಮೂಹಕ್ಕೆ ಉದ್ಯೋಗ ಒದಗಿಸಿ: ನೂತನ ಮುಖ್ಯಮಂತ್ರಿಗೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹ

ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್

ಬಿಎಸ್‌ವೈ ಅವರನ್ನ ಹಾಡಿಹೊಗಳಿದ ಪ್ರಧಾನಿ ನರೇಂದ್ರ ಮೋದಿ

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿಎಸ್‌ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಎಸ್‌ವೈಗೆ ಪಕ್ಷ ಮೇಲಿನ ಬದ್ಧತೆ ಅವರ್ಣನೀಯವಾಗಿದೆ. ಸಾಮಾಜಿಕ ನ್ಯಾಯ,