ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೂಡುಬಿದಿರೆ : ಇಟ್ಟಿಗೆ, ಮರಳು ಮತ್ತು ಸಿಮೆಂಟಿನಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ. ಉನ್ನತ ಮಟ್ಟದಲ್ಲಿ ಪಕ್ಷವನ್ನು ಕಟ್ಟಲು ಮತ್ತು ಮತ ಬ್ಯಾಂಕ್ ಪರಿವರ್ತನೆಯಾಗಬೇಕಾದರೆ ಜನ ಸ್ಪಂದನೆ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಅವರು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಪುತ್ತಿಗೆ ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸರಕಾರಗಳು ಗ್ರಾ.ಪಂಗಳ ಮೂಲಕ 42 ವಿವಿಧ
ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು
ಹತ್ತನೆ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟಿಲ್ಲ ಎಂದು ಮಾಧ್ಯಮ ಗೋಷ್ಠಿಯಲ್ಲಿ ಸುಳ್ಳು ಹೇಳಿಕೆ ನೀಡಿದ ಸಚಿವ ರಾದ ಸುನಿಲ್ ಕುಮಾರ್, ಕೋಟ ಶ್ರೀ ನಿವಾಸ ಪೂಜಾರಿ ಸಾರ್ವಜನಿಕ ರಲ್ಲಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಮಿಥುನ್ ರೈ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ
ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಭಾರೀ ಮಳೆಗೆ ಹಾಳಾಗಿರುವ ಮೂಲಭೂತ ಸೌಕರ್ಯಗಳನ್ನು ಮರು ಸ್ಥಾಪಿಸಲು ತಾತ್ಕಾಲಿಕವಾಗಿ 500 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿಯ ಬಗ್ಗೆ ಮಣಿಪಾಲದ ಜಿ.ಪಂ ಸಭಾಂಗಣದಲ್ಲಿ ಇಂದು ನಡೆಸಿದ ಸಮಗ್ರ ಸಮೀಕ್ಷಾ ಸಭೆಯ ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಳೆಹಾನಿಯ
ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ
ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದೀಗ ಜನತೆಗೆ ತೊಂದರೆ ಉಂಟಾಗಿದೆ. ಅಧಿಕಾರಿಗಳು ತಪ್ಪು ಮಾಡಿದ್ದಲ್ಲಿ ಜನಪ್ರತಿನಿಧಿಗಳು ಕೇಳಬೇಕು, ಸಾಮಾನ್ಯ ಜನರಿಗೆ ನ್ಯಾಯ ಎಲ್ಲಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೂರ್ವ ಆಲೋಚನೆ, ಪೂರ್ವ ಯೋಜನೆ ಬೇಕು.ನಗರದಲ್ಲಿ ಚರಂಡಿ, ರಾಜಕಾಲುವೆಗಳ ಹೂಳೆತ್ತುವ ಕೆಲಸ ನಾಲ್ಕು ತಿಂಗಳ ಹಿಂದೆಯೇ ಆಗಬೇಕಿತ್ತು. ಮೇ ತಿಂಗಳಲ್ಲಿ ರಸ್ತೆ
“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು
ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು. ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವಿಡಿಯೋವನ್ನು ಆತನ ಸೋದರಿಗೆ ಕಳಿಸಲಾಗಿತ್ತು.



























