Home Archive by category ರಾಜಕೀಯ (Page 53)

ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಂತಹ ಅಭ್ಯರ್ಥಿ : ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ.

ಮತದಾನ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ : ಡಾ. ಮಂಜುನಾಥ ಭಂಡಾರಿ ಹೇಳಿಕೆ

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್

ಮತಪತ್ರಗಳ ವಿಂಗಡೆ ಕಾರ್ಯ ಪೂರ್ಣ : ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ

ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ

ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ

ರಾಜ್ಯ ‌ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಗಳಾಗಿ ಚಂದ್ರಕಲಾ ರಾವ್ , ಮಲ್ಲಿಕಾ ಪಕ್ಕಳ, ಜಾಯಿರಾ ಜುಬೈರ್ ನೇಮಕ

ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಹೊಸದಾಗಿ 17 ಮಂದಿ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಸೇರ್ಪಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಚಂದ್ರಕಲಾ ದೀಪಕ್ ರಾವ್ ಮತ್ತು ಮಲ್ಲಿಕಾ ಪಕ್ಕಳ ಹಾಗೂ ಸಾಯಿರಾ ಜುಬೇರ್ ಅವರು ಅವರು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ,

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಜನಸ್ವರಾಜ್ ಸಮಾವೇಶ

ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಸೂದೆ ಅಂಗೀಕಾರ ವಾಗಬೇಕಾ ದರೆ.ಎರಡೂ

ಕೃಷಿ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ : ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ

ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಾಧನೆಗೈದವರಿಗೆ ಸನ್ಮಾನ

ಸಾಧಕರಿಗೆ ಸಮ್ಮಾನ ಮಾಡಿದಾಗ ಅವರ ಸಾಧನೆಗೆ ಮತ್ತಷ್ಟು ಹುರುಪು ಬರುತ್ತದೆ ಹಾಗೂ ಇತರರಿಗೂ ಆಸಕ್ತಿ ಬರಲು ಕಾರಣವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಮಂಗಳೂರಿನಲ್ಲಿ ಕ್ರೀಡಾ ವಿಭಾಗ ಮತ್ತು ರಾಷ್ಟ್ರೀಯ ಸೇವಾಯೋಜನೆಯಲ್ಲಿ ಸಾಧನೆಗೈದವರನ್ನು ಸಮ್ಮಾನಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಧನೆ ಮಾಡಿ ರಾಜ್ಯಕ್ಕೆ ಇನ್ನಷ್ಟು ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು. ಹರಿಯಾಣದ ರೋಟಕ್‍ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿರಿಯ