ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ
ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್ಗೆ ಮೂರನೇ ಬಾರಿಯೂ
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ
ಮಂಗಳೂರು: ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್, ಗೌರವ್ ಗೊಗಾಯ್, ಮೋಹನ್ ಮರ್ಕಮ್ ಅವರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಹೊಸ ರಾಜ್ಯಗಳಿಗೆ ವಿಸ್ತರಿಸಿಕೊಳ್ಳುವ ಆಮ್ ಆದ್ಮಿ ಪಕ್ಷದ ಪ್ರಯತ್ನವು ಜಮ್ಮು ಮತ್ತು ಕಾಶ್ಮೀರದಲ್ಲಿ ಫಲ ನೀಡಿದೆ.ದೋಡಾ ವಿಧಾನ ಸಭಾ ಕ್ಷೇತ್ರದಲ್ಲಿ ಮೆಹ್ರಾಜ್ iಲಿಕ್ ಅವರು ಎಎಪಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅವರು ಬಿಜೆಪಿಯ ಅಭ್ಯರ್ಥಿ ಗಜಯ್ ಸಿಂಗ್ ರಾಣಾರನ್ನು ಸೋಲಿಸಿದರು. ೩೬ರ ಮಲಿಕ್ ಅವರು ರಾಜ್ಯಪಾಲರ ಆಡಳಿತದ ಕಟು ಟೀಕಾಕಾರರಾಗಿ ಜನಪ್ರಿಯತೆ ಗಳಿಸಿದ್ದರು.
ನ್ಯಾಶನಲ್ ಕಾನ್ಫರೆನ್ಸ್‌ನ ನಾಯಕ ಓಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದನ್ನು ಇಂಡಿಯಾ ಮೈತ್ರಿ ಕೂಟವು ಸ್ಪಷ್ಟಪಡಿಸಿದೆ.ಶೇಖ್ ಅಬ್ದುಲ್ಲಾ, ಅವರ ಮಗ ಫಾರೂಕ್ ಅಬ್ದುಲ್ಲಾ ಹಾಗೂ ಮೊಮ್ಮಗ ಓಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದರು. ಈಗ ಅಲ್ಲಿ ಇಂಡಿಯಾ ಮೈತ್ರಿ ಕೂಟವು ಬಹುಮತ ಸಾಧಿಸಿದೆ; ಅದರಲ್ಲಿ ಎನ್‌ಸಿ ಬಹುತೇಕ ಸ್ಥಾನಗಳನ್ನು ಗೆದ್ದಿದೆ. ಈಗ ಓಮರ್ ಅಬ್ದುಲ್ಲಾರು ಜಮ್ಮು
ಪ್ರತಿಯೊಬ್ಬ ಮಹಿಳೆಯು ಹೋರಾಟದಲ್ಲಿ ತೊಡಗಿದ್ದು, ತನ್ನ ಹೋರಾಟದ ದಾರಿಯನ್ನು ಆಯ್ಕೆ ಮಾಡಿಕೊಂಡು, ಮುನ್ನಡೆಯಬೇಕು ಎಂದು ಹೊಸ ಶಾಸಕಿ ಕುಸ್ತಿಪಟು ವಿನೇಶಾ ಪೋಗಟ್ ಹೇಳಿದರು. ಇದು ಪ್ರತಿಯೊಬ್ಬ ಹುಡುಗಿಯ ಹೋರಾಟ. ಪ್ರತಿಯೊಬ್ಬ ಮಹಿಳೆಯು ತನ್ನ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ನನಗೆ ದಕ್ಕಿರುವ ಗೆಲುವು ಹೋರಾಟದ ಗೆಲುವಾಗಿದೆ, ಸತ್ಯದ ಗೆಲುವಾಗಿದೆ. ಈ ದೇಶ ನನಗೆ ನೀಡಿರುವ ಪ್ರೀತಿ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಹೊಸದಾಗಿ ವಿಧಾನಸಭೆ
ಮುಂಬೈ:ಲೋಕಸಭಾ ಉಪಚುನಾವಣೆ ಸಲುವಾಗಿ ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ. ಇಂದು ಅವರು ಬಿವಂಡಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿಯಾ ಬಗ್ಗೆ ಜಿಲ್ಲಾ ಅಧ್ಯಕ್ಷ ರಶೀದ್ ತಾಯಿರ್ ಮೊಮಿನ್ ಹಾಗೂ ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದಾರೆ. ಈ ಸಂದರ್ಭ ಪಕ್ಷದ ಮುಖಂಡರು ಐವನ್ ಡಿಸೋಜರವರನ್ನು ಆತ್ಮೀಯವಾಗಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು.
ಬೆಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ನಡೆಸಿದ ವಿವಿಧ ಅಕಾಡೆಮಿ ಅಧ್ಯಕ್ಷರುಗಳು ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿ ಆಹ್ವಾನ ನೀಡಿದರು .ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಅಕಾಡೆಮಿ, ಬ್ಯಾರಿ ಅಕಾಡೆಮಿ, ಅರೆ ಭಾಷೆ




























