Home Archive by category ರಾಜಕೀಯ (Page 8)

ಸುಳ್ಯ: ದಿ. ಅಟಲ್ ಬಿಹಾರಿ ವಾಜಪೇಯಿ ಪುಣ್ಯ ದಿನ ಆಚರಣೆ

ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟಿನ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಮಾನ್ಯ ಶಾಸಕರು ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು

ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು“ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ

ಕುರ್ಚಿ ಉಳಿಸಿ ಬಜೆಟ್: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ‘ಕುರ್ಚಿ ಉಳಿಸಿ ಬಜೆಟ್’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ‘ಪೊಳ್ಳು ಭರವಸೆ’ಗಳನ್ನು ನೀಡಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ‘2024ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್‌ಗಳ

ಮಳೆಹಾನಿಗೆ ತುರ್ತು ಪರಿಹಾರ ಒದಗಿಸಲು ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಳಿಮಳೆ, ಕಡಲ್ಕೊರೆತ ಮತ್ತು ನೆರೆಯಿಂದ ಆಗಿರುವ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು ನಿರಂತರ ಮಳೆಯಿಂದ ನೆರೆ, ಪ್ರವಾಹದಿಂದ ಅನೇಕರ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿವೆ. ಕೆಲವು ಕಡೆಗಳಲ್ಲಿ ರಸ್ತೆ

ಮಂಗಳೂರು : ಡೆಂಗ್ಯೂ ಬಾದಿಸದಂತೆ ಎಚ್ಚರ ವಹಿಸಿ- ಡೆಂಗ್ಯೂ ನಿರ್ಮೂಲನೆ ಸಮಿತಿಯ ಸಭೆಯಲ್ಲಿ ಅಧಿಕಾರಿಗಳಿಗೆ ಮೇಯರ್ ಸೂಚನೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಗ್ಯೂ ನಿಮೂ೯ಲನೆ ಸಮಿತಿಯ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂ.ಪಿ.ಡಬ್ಲ್ಯೂ ಕಾಯ೯ಕತ೯ರು ಮನೆ ಮನೆ ಭೇಟಿ ನೀಡಿ ಮನೆಯ ಸುತ್ತ ಮುತ್ತಲುನಲ್ಲಿರುವ

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ – ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು

ಬಜ್ಪೆಯ ಸಮ್ಯತಾಳ ಕೈಚಳಕಕ್ಕೆ ಬೇಷ್ ಎಂದ ಸಂಸದ ಕೋಟ

ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ ಪ್ರತಿಭಾಪುರಸ್ಕಾರಕ್ಕೆ ಬಂದ ಸಮ್ಯತ ಆಚಾರ್ಯ ಉದ್ಘಾಟಕರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಯೋಗಿ ಮಿತ್ರ ಬೇಡಿರಾಂ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಯವರ ಮಿತ್ರ ಮತ್ತು ಬಿಜೆಪಿ ಮಿತ್ರ ಪಕ್ಷದ ಶಾಸಕ ಬೇಡಿರಾಂ ಪ್ರಶ್ನೆ ಪತ್ರಿಕೆ ಸೋರಿಕೆ ವ್ಯವಹಾರದ ವೀಡಿಯೋ ಜಾಲ ತಾಣದಲ್ಲಿ ಹರಿದಾಡುತ್ತಿದೆ.ಕೆಲವು ಯುವಕರು ಶಾಸಕ ಬೇಡಿರಾಂರಿಗೆ ಹಣ ಕೊಟ್ಟರೂ ಕೆಲಸ ಸಿಕ್ಕಿಲ್ಲ ಎಂದು ಜಾಲ ತಾಣದಲ್ಲಿ ಗೋಳು ತೋಡಿಕೊಂಡ ಮೇಲೆ ಬೇಡಿರಾಂ ಕರಾಮತ್ತು ಹೊರಬಿದ್ದಿದೆ. ಕಳೆದ ವರುಷ ರೈಲ್ವೆ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಬೇಡಿರಾಂ ಬಂಧನವಾಗಿತ್ತು. ಆದರೆ ದಿನದಲ್ಲೇ ಜಾಮೀನು ಪಡೆದು ಅವರು

ಮಂಗಳೂರು : ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ

ಸುಳ್ಯ : ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ- ಪರಿಹಾರ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಂಸದರು

ಮಂಗಳೂರು : ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಎಸ್‌ಎನ್‌ಎಲ್ ನೆಟ್ ವರ್ಕ್ ಸಮಸ್ಯೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಪರಿಹಾರದ ಕುರಿತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಚರ್ಚಿಸಿದರು. ಸುಳ್ಯ ತಾಲೂಕಿನ ತೊಡಿಕಾನದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ನೆಟ್‌ವರ್ಕ್