Home Archive by category ರಾಜ್ಯ

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ : ರಾಜೇಶ್ ಕಡಲಕೆರೆ

ಮೂಡುಬಿದಿರೆ : ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ ರಾಜೇಶ್ ಕಡಲಕೆರೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು sea plane , Heli taxi , joy ride , River Cruise

ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದ ಅವರು, ದುಬೈ ನಲ್ಲಿರುವ ಭಾರತೀಯರು

ಹಲವು ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಆದ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಹಲವು ದೇಶಗಳಿಗೆ ಸಂಕಷ್ಟ ಎದುರಾಗಿದೆ. ವಿಮಾನ ಸಂಚಾರ ಹಲವು ರದ್ದಾಗಿರುವುದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ. ದೆಹಲಿ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ

ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ : ಆಂಧ್ರಕ್ಕೆ ಭೇಟಿ ನೀಡಿದ ಅಧ್ಯಯನ ತಂಡ

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ ಪ್ರದೇಶಕ್ಕೆ ತೆರಳಿ 2 ದಿನಗಳ ಕಾಲ ಆಂಧ್ರ ಸರಕಾರದ ವಿವಿಧ ಇಲಾಖೆಗಳ ಜೊತೆಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದೆ. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ರಾಜ್ಯ ನಿರ್ದೇಶಕರಾದ ಶ್ರೀಮತಿ ಕೆ.ಎಮ್

ಕಾರವಾರ: ಸಬ್ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಪಯಣ

ಕಾರವಾರ: ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಘಶೀರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು.ಗೋವಾದಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ನೌಕಾದಲದ ವಿಶೇಷ ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಬಂದಿಳಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಬರಮಾಡಿಕೊಂಡರು.ಬಳಿಕ

ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ: ಆರೋಗ್ಯ ಸೇವೆಗಳ ಆಯುಕ್ತಾಲಯದಿಂದ ಮಾರ್ಗಸೂಚಿ ಬಿಡುಗಡೆ

ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ ಆಗುತ್ತಿದ್ದು, ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇದೆ. ಹೀಗಾಗಿ ಆರೋಗ್ಯ ಸೇವೆಗಳ ಆಯುಕ್ತಾಲಯವು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಕಾಡಲಿದ್ದು, ಕೆಲವೊಮ್ಮೆ 3 ವಾರಗಳ ವರೆಗೂ ಮುಂದುವರಿಯುತ್ತದೆ. ಹೀಗಾಗಿ ಶೀತಜ್ವರ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ

ಎಲ್ ಕೆಜಿ, ಪಿಯುಸಿ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ: ಮಧು ಬಂಗಾರಪ್ಪ

ಅಪೌಷ್ಟಿಕತೆ ಹೋಗಲಾಡಿಸಿ ಮಕ್ಕಳ ಕಲಿಕೆಗೆ ನೆರವಾಗಲು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಹಾಗೂ ಪದವಿಪೂರ್ವ (ಪಿಯುಸಿ) ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ಓದುವ ಹಾಗೂ ಪಿಯುಸಿ ಓದುವ ಎಲ್ಲಾ ಮಕ್ಕಳಿಗೂ ನೆರವಾಗಲಿದೆ.

ಕಾರ್ಮಿಕ ವಿಮಾ ಯೋಜನೆಯ ಸೌಲಭ್ಯಗಳು ಸಿಗದ ಬಗ್ಗೆ ಸದನದ ಗಮನಕ್ಕೆ ತಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ರಾಜ್ಯದಲ್ಲಿ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿಯೂ ಕಾರ್ಮಿಕ ರಾಜ್ಯ ವಿಮಾ ಯೋಜನೆಯ ಆಸ್ಪತ್ರೆಗಳಿದ್ದು, ಮಾರಾಣಾಂತಿಕ ಖಾಯಿಲೆಗಳಿಗೆ ಬೇಕಾದ ಔಷಧೋಪಚಾರಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆಯೇ..? ಬಂದಿದ್ದಲ್ಲಿ ಕೈಗೊಂಡ ಕ್ರಮವೇನು ಹಾಗೂ ಕಳೆದ 2 ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರು ಸಹಜ ಹಾಗೂ ಕೆಲಸದ ಸ್ಥಳದಲ್ಲಿ ಮರಣ ಹೊಂದಿದ್ದಲ್ಲಿ ಅವಲಂಬಿತರಿಗೆ ಸರಕಾರ ನೀಡುಬಹುದಾದ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ- ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ

ಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು. ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ ಸಂಸ್ಥೆಯು ಜೇನನ್ನು ಬ್ರಾಂಡ್ ಮಾಡಿ ನಗರ ಮಾರುಕಟ್ಟೆಗೆ ತಲುಪಿಸುತ್ತಿದ್ದು, ಇದರಿಂದ ರೈತರಿಗೆ ಭಾರಿ