Home Archive by category ರಾಜ್ಯ (Page 57)

ರಾಜೀನಾಮೆ ಸುಳಿವು ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ಕೇಂದ್ರದ ವರಿಷ್ಠರು ನೀಡುವ ಆದೇಶವನ್ನು ಚಾಚು ತಪ್ಪದೆ ಪಾಲಿಸುತ್ತೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ

ನರಗುಂದ ನವಲಗುಂದ ರೈತ ಬಂಡಾಯದ ಸ್ಮರಣೆ : ರೈತ ಸಮಾವೇಶ

ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತ ಸಮಾವೇಶ ನಡೆಯಿತು. ಸಮಾವೇಶದಲ್ಲಿ ದಿಲ್ಲಿ ರೈತ ಹೋರಾಟದ

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಸಚಿವ ಅರವಿಂದ ಲಿಂಬಾವಳಿ

ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು

ಜುಲೈ 26ರಿಂದ ಪದವಿ ತರಗತಿ ಆರಂಭ: ಸಿನಿಮಾ ಮಂದಿರ ತೆರೆಯೋದಕ್ಕೆ ಅನುಮತಿ

ರಾಜ್ಯ ಸರ್ಕಾರದಿಂದ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಸಿನಿಮಾ ಮಂದಿರಗಳನ್ನು ತೆರೆಯೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅನ್ ಲಾಕ್ 4.0 ಮಾರ್ಗಸೂಚಿಯಂತೆ ಹಲವು ತಿಂಗಳ ಬಳಿಕ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆದು, ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಅನ್ ಲಾಕ್ 4.0 ಮಾರ್ಗಸೂಚಿ ಕ್ರಮಗಳ ಜಾರಿ ಕುರಿತಂತೆ ಮಹತ್ವದ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಿನಿಮಾ

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ: ಅಣ್ಣಾಮಲೈ ವಿವಾದಿತ ಹೇಳಿಕೆ

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ ಎನ್ನುವ ಮೂಲಕ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಯಮತ್ತೂರಿನಿಂದ ಚೆನ್ನೈವರೆಗೆ ನಡೆದ ರೋಡ್ ಶೋನಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. “ಮಾಧ್ಯಮವು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂಬ ಚಿಂತೆಗಳನ್ನು ಮರೆತುಬಿಡಿ. ಮುಂದಿನ ಆರು ತಿಂಗಳಲ್ಲಿ ನಾವು ಮಾಧ್ಯಮದ ಮೇಲೆ ನಿಯಂತ್ರಣ ಮತ್ತು ಅವುಗಳನ್ನು ನಮ್ಮ ಅಡಿಯಲ್ಲಿ

ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದರು.ಈ ಕುರಿತು ಹೇಳಿಕೆ ನೀಡಿರುವ ಪದವಿ

ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಸುಮನ್ ತಲ್ವಾರ್‌ಗೆ ಮುಂಬಯಿ ಬಿಲ್ಲವರ ಅಸೋಸಿಯೇಷನ್‌ನಿಂದ ಗೌರವ

ಬಿಲ್ಲವ ಸಮಾಜದ ಕಣ್ಮಣಿ ಬಹುಭಾಷಾ ನಟ ಲೆಜೆಂಡ್ ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ-2021ಕ್ಕೆ ಭಾಜನರಾದ ಸುಮನ್ ತಲ್ವಾರ್ ಅವರನ್ನು ಇಂದು ಬಿಲ್ಲವರ ಅಸೋಸಿಯೇಷನ್ ಮುಂಬಯಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹರೀಶ್. ಜಿ ಅಮೀನ್, ಜೊತೆ ಕಾರ್ಯದರ್ಶಿ ಹರೀಶ್.ಜಿ.ಸಾಲ್ಯಾನ್, ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದರ್ಶಿ ಹರೀಶ್ ಶಾಂತಿ, ನಿಲೇಶ್ ಪೂಜಾರಿ ಪಲಿಮಾರ್ ಉಪಸ್ಥಿತರಿದ್ದರು.  

ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಗೆಹ್ಲೋಟ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗೆಹ್ಲೋಟ್ ಅವರು ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಗಿದ್ದರು. ರಾಷ್ಟ್ರಪತಿ ಭವನವು

ಜನರಿಗೆ ಆತಂಕ ಮೂಡಿಸುವ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ: ಕುಂದಾಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 

ಕುಂದಾಪುರ: ಕೆಆರ್‌ಎಸ್ ಅಣೆಕಟ್ಟಿನ ಮಾಮೂಲಿ ನಿರ್ವಹಣೆಯ ಕಾಮಗಾರಿಗಾಗಿ ಹಣ ಬಿಡುಗಡೆ ಆಗಿರಬಹುದು. ಬಿರುಕು ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳನ್ನು ನೀಡಲು ಪರಿಣಿತ ತಾಂತ್ರಿಕ ತಜ್ಙರ ವಿಭಾಗವೇ ಇದೆ. ಅವರ ವರದಿ ಹಾಗೂ ಸಲಹೆ ಆಧಾರದಲ್ಲಿಯೇ ಕಾಮಗಾರಿಗಳು ನಡೆಯುತ್ತದೆ. ಸುಮ್ಮನೆ ಜನರಿಗೆ ಆತಂಕ ಮೂಡಿಸುವುದು ಹಾಗೂ ಪ್ರಚಾರಕ್ಕಾಗಿ ಹೇಳಿಕೆ ನೀಡುವುದನ್ನು ಎಲ್ಲರೂ ನಿಲ್ಲಿಸುವುದು ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದು, ಹರಿ ಬಾಬು ಕಂಬಂಪತಿ ಅವರನ್ನು ಮಿಜೋರಾಂನ