ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿಎಸ್‌ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ
ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ
ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಶಾಸಕಾಂಗದ ಪಕ್ಷದ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದು 2 ವರ್ಷದ ಸಂದರ್ಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದರು. ಅಲ್ಲದೇ ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದೀಗ ಬಿಎಸ್ ಯಡಿಯೂರಪ್ಪ ಅವರ ಸಿಎಂ ಸ್ಥಾನಕ್ಕೆ ನೀಡಿದಂತ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ
ಕೊನೆಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು ಬೀಳುಗಳನ್ನು ಹೇಳುವಾಗ ಭಾವುಕರಾದರು. ಇಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. 75 ವರ್ಷದ ಬಳಿಕ ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟ
ಆರು ಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಇಂದು ನಿಧನರಾದರು . ‘ ಜೇನುಗೂಡು ‘ ಚಿತ್ರವು ಜಯಂತಿ ಅವರು ನಾಯಕಿ ನಟಿಯಾಗಿ ನಟಿಸಿದ ಮೊದಲ ಸಿನಿಮಾ. ನಾಲ್ಕು ಬಾರಿ ಅತ್ಯುತ್ತಮ ನಟಿ ರಾಜ್ಯ ಪ್ರಶಸ್ತಿ ಪಡೆದಿದ್ದ ಜಯಂತಿ ಅವರು 500 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದರು. 1945 ರ ಜನವರಿ 6 ರಂದು ಜನಿಸಿದ್ದ ಜಯಂತಿ ಅವರ ಮೂಲ ಹೆಸರು ಕಮಲ ಕುಮಾರಿ ಎಂಬುದಾಗಿತ್ತು . ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಅವರ ಬೆಂಗಳೂರಿನ […]
ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿ ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ
ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು. ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ
ಆಲೂರು: ಆಲೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ತಾಲೂಕು ಪಾಳ್ಯ ಹೋಬಳಿ ಮಡಬಲು ಗ್ರಾಮದ ಚಂದ್ರಶೇಖರ್ ಎಂಬುವವರ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಢೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ. ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿಗಳು ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ


















