Home Archive by category ರಾಷ್ಟ್ರೀಯ (Page 3)

ಡಿಸೆಂಬರ್ 1 ರಿಂದ ಆರಂಭವಾಗಲಿದೆ ಡಿಜಿಟಲ್ ರೂಪಾಯಿ ವಹಿವಾಟು | ಏನಿದು ಡಿಜಿಟಲ್ ರೂಪಾಯಿ?

ಡಿಜಿಟಲ್‌ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ–ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಡಿಸೆಂಬರ್

ಕೊಲಂಬೊ : ಭಾರತೀಯ ಮೀನುಗಾರನ್ನುಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾದ ನೌಕಾಪಡೆಯು 24 ಮಂದಿ ಭಾರತೀಯ ಮೀನುಗಾರರನ್ನು ಸೋಮವಾರ ಸಂಜೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದೆ. ಅಲ್ಲದೆ ಐದು ಟ್ರಾಲರ್‌ಗಳನ್ನೂ ಅವರಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ನೌಕಾಪಡೆಯ ಅಧಿಕಾರಿಗಳು, ನೌಕಾಪಡೆ ಮತ್ತು ಶ್ರೀಲಂಕಾ ಕರಾವಳಿ ಕಾವಲು ಪಡೆಯು ಜಂಟಿ ಕಾರ್ಯಾಚರಣೆ ನಡೆಸಿ ಭಾರೀಯ ಮೀನುಗಾರರನ್ನು ಬಂಧಿಸಿದೆ. ಬಂಧಿತರನ್ನು ಕಂಕಸಂತುರೈ ಬಂದರಿಗೆ ಕರೆ

ಕಾಂತಾರ ಸಿನಿಮಾ ತಂಡಕ್ಕೆ ಕೋರ್ಟಿನಲ್ಲಿ ಗೆಲುವು ; ತೈಕ್ಕುಡಂ ತಕರಾರು ಅರ್ಜಿ ವಜಾ

ಕಾಂತಾರ ಸಿನಿಮಾದ ವರಾಹರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ವರಾಹಂ ರೂಪಂ ಹಾಡು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಜಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು, ತೈಕ್ಕುಡಂ ಬ್ರಿಡ್ಜ್ ಹಾಕಿದ್ದ ಅರ್ಜಿಯನ್ನೇ ವಜಾ ಮಾಡಿದೆ. ಕಾಂತಾರ ಸಿನಿಮಾ ದೇಶಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತೈಕ್ಕುಡಂ ಬ್ರಿಡ್ಜ್ ತಂಡದವರು ವರಾಹಂ ರೂಪಂ ಹಾಡಿನ ಬಗ್ಗೆ

500 KG ಗಾಂಜಾ ಇಲಿ ತಿಂದಿದೆ!’ ವಿಚಿತ್ರ ಹೇಳಿಕೆ ನೀಡಿದ ಯುಪಿ ಪೊಲೀಸರು

ಶೇರ್‌ಗಡ್‌ ಮತ್ತು ಹೈವೇ ಪೊಲೀಸ್ ಠಾಣೆಯ ಗೋದಾಮುಗಳಲ್ಲಿ ವಶಕ್ಕೆ ಪಡೆದು ಇರಿಸಿದ್ದ 500 ಕೆಜಿಗೂ ಹೆಚ್ಚು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್-1985 (ಎನ್‌ಡಿಪಿಎಸ್) ಅಡಿಯಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಉತ್ತರ ಪ್ರದೇಶದ ಮಥುರಾ ಪೊಲೀಸರು ವರದಿ ಸಲ್ಲಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಲಾದ ಪ್ರಕರಣದಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಒದಗಿಸುವಂತೆ ಮಥುರಾ

ಶಾಲೆಯಲ್ಲಿ ಇನ್ನು ಮುಂದೆ ಸಂವಿಧಾನ ದಿನಾಚರಣೆ

.ಪ್ರತಿ ವರ್ಷ ನವೆಂಬರ್ 26 ಈ ದಿನವನ್ನು ಭಾರತ ಸಂವಿಧಾನವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪತ್ರದಲ್ಲಿ ಸೂಚಿಸಿರುವಂತೆ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳ ಅರಿವನ್ನು ಮೂಡಿಸುವಂತಹ Know Your Constitution ಕಾರ್ಯಕ್ರಮವನ್ನು ಶಾಲಾ

ಇಂದಿನ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ರದ್ದು

ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಕೇಂದ್ರ ಸರ್ಕಾರದ ಸಂಧಾನದ ಬಳಿಕ ನವೆಂಬರ್ 19ರ ಇಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಬ್ಯಾಂಕಿಂಗ್ ಸಂಘಟನೆಗಳ ಪದಾಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಮುಂತಾದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಸಿಬ್ಬಂದಿ

Kantara 50 ದಿನ ಪೂರೈಸಿದ ‘ಕಾಂತಾರ’ : ಶೀಘ್ರದಲ್ಲಿ ಒಟಿಟಿಯಲ್ಲಿ ರಿಲೀಸ್

‘ಕಾಂತಾರ’ ಕನ್ನಡದಲ್ಲಿ ಬಿಡುಗಡೆಯಾಗಿ 50 ದಿನ ಪೂರ್ಣಗೊಂಡಿದೆ​. ‘ಕಾಂತಾರ’ ಚಿತ್ರದ ಒಟ್ಟಾರೆ ಮೇಕಿಂಗ್, ದಕ್ಷಿಣ ಕನ್ನಡ ಸೊಗಡು, ಕಂಬಳ ಮತ್ತು ಪ್ರಮುಖವಾಗಿ ಭೂತ ಕೋಲ ವಿಷಯ ಜನರಿಗೆ ಇಷ್ಟವಾಗಿದೆ. ಜೊತೆಗೆ ನಿರ್ದೇಶಕ ರಿಷಬ್​ ಶೆಟ್ಟಿ, ನಟಿ ಸಪ್ತಮಿ ಗೌಡ ಅಭಿನಯವನ್ನು ಅಭಿಮಾನಿಗಳು ಮೆಚ್ಚಿಕೊಂಡರು. ‘ಕಾಂತಾರ’ ಚಿತ್ರ ಕನ್ನಡದಲ್ಲಿ ರಿಲೀಸ್ ಆದ ಬಳಿಕ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗತೊಡಗಿತು. ಬಳಿಕ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೂ ಡಬ್ ಆಗಿ

Indira Gandhi Birth Anniversary : ಇಂದುಇಂದಿರಾ ಗಾಂಧಿಯವರ 105ನೇ ಜನ್ಮದಿನ.

ಇಂದು ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 105ನೇ ಜನ್ಮದಿನ. ಇಂದಿರಾ ಗಾಂಧಿಯವರು 1917ರಲ್ಲಿ ನವೆಂಬರ್ 19ರಂದು ಅಲಹಾಬಾದ್​​ನಲ್ಲಿ ಜನಿಸಿದರು. ಇಂದಿರಾ ಗಾಂಧಿ (Indira Gandhi) ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಗಳು. ಅವರ ತಾಯಿ ಕಮಲಾ ನೆಹರು ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನಾಯಕಿಯಾಗಿದ್ದರು. ಇಂದಿರಾ ಗಾಂಧಿಯವರು ತಮ್ಮ ತಂದೆ ಜವಾಹರಲಾಲ್ ನೆಹರು

ತೆಲುಗು ನಟ ಮಹೇಶ್ ಬಾಬು ತಂದೆ ನಿಧನ

ಅನಾರೋಗ್ಯದ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಭಾನುವಾರ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು.ತೆಲುಗು ಚಿತ್ರರಂಗದ ಮೊದಲ ಸೂಪರ್ ಸ್ಟಾರ್ ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಕೃಷ್ಣ 350 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕೊನೆಯ ಬಾರಿಗೆ 2016 ರಲ್ಲಿ ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡರು. ಕೃಷ್ಣ ಅವರ

ಮಿಸೆಸ್ ವರ್ಲ್ಡ್ ವೈಡ್ ಗ್ಲೋರಿ ಬ್ಯೂಟಿ ಕೀರಿಟ ವಿಜೇತೆ ಶ್ವೇತಾ ಮೌರ್ಯ

ಬೆಂಗಳೂರು ಮೂಲದ ಮೋಡೆಲ್ ಶ್ವೇತಾ ಮೌರ್ಯ ಅವರು ಇತ್ತೀಚೆಗೆ ಸಿಂಗಾಪುರದಲ್ಲಿ ನಡೆದ ಮಿಸೆಸ್ ವರ್ಲ್ಡ್ ವೈಡ್ 2022 ಅಂತರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಲ್ಲಿ ಮಿಸೆಸ್ ವರ್ಲ್ಡ್ ವೈಡ್ ಗ್ಲೋರಿ ಬ್ಯೂಟಿ ಕಿರೀಟವನ್ನು ಗೆದ್ದುಕೊಂಡಿದ್ದಾರೆ. ಸುಮಾರು 37ದೇಶಗಳ ಸ್ಪರ್ಧಿಗಳು ಈ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಶ್ವೇತಾ ಅವರು ಕರ್ನಾಟಕದ ಹಾಗೂ ಭಾರತದ ಅನೇಕ ಜನಪರ ಕಾಳಜಿ ಹಾಗೂ ಪರಿಸರ ಕಾಳಜಿಯ ಮ್ಯಾರಥಾನ್‌ಗಳ ಬ್ರಾಂಡ್ ಅಂಬಾಸಿಡರ್ ಆಗಿ