Home Archive by category ಹಾನಿ

ಮೂಡುಬಿದಿರೆಯಲ್ಲಿ ಗಾಳಿ ಮಳೆಯ ಅವಾಂತರ

ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ

ಪುತ್ತೂರು: ಸರ್ವೆ ಗೌರಿ ಹೊಳೆ ಬಳಿ ನಾಪತ್ತೆಯಾಗಿದ್ದ ಸನ್ಮಿತ್‌ ಮೃತದೇಹ ಪತ್ತೆ

ಪುತ್ತೂರು: ಸರ್ವೆ ಗೌರಿ ಹೊಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್‌ (21) ಮೃತದೇಹ ಪತ್ತೆಯಾಗಿದೆ.ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್‌ ಕಾಣೆಯಾಗಿದ್ದು, ಆತನ ಸ್ಕೂಟರ್‌ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್‌ ತಂದೆ ಚಂದ್ರಗೌಡ ನೀಡಿದ ದೂರಿನಂತೆ ನಿನ್ನೆ ಬೆಳಿಗ್ಗಿನಿಂದಲೇ ಪೊಲೀಸರು ಮತ್ತು

ಮಳೆಹಾನಿಗೆ ತುರ್ತು ಪರಿಹಾರ ಒದಗಿಸಲು ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಳಿಮಳೆ, ಕಡಲ್ಕೊರೆತ ಮತ್ತು ನೆರೆಯಿಂದ ಆಗಿರುವ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು ನಿರಂತರ ಮಳೆಯಿಂದ ನೆರೆ, ಪ್ರವಾಹದಿಂದ ಅನೇಕರ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿವೆ. ಕೆಲವು ಕಡೆಗಳಲ್ಲಿ ರಸ್ತೆ

ಪಡುಮಾರ್ನಾಡು ರಸ್ತೆ, ಗದ್ದೆಗಳಲ್ಲಿ ಜಲಾವೃತ

ಮೂಡುಬಿದಿರೆ: ಮಂಗಳೂರು-ಕಾರ್ಕಳ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಎಸ್‌ಕೆಎಫ್ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಪೋಯ್ಯದ ಪಲ್ಕೆ ಬಳಿ ಪ್ರವಾಹದಿಂದ ರಸ್ತೆ ಹಾಗೂ ಗದ್ದೆಗೆ ನೀರು ನುಗ್ಗಿ ಹಾನಿ, ಕೆಂಪುಲು ಬಳಿ ಮಳೆಯಿಂದ ರಸ್ತೆಗೆ ಹಾನಿ, ಕೆಸರ್ ಗದ್ದೆ ವಿಕ್ಟರ್ ಮನೆ ಬಳಿ ಮಳೆಯ ಪ್ರವಾಹ ದಿಂದ ಮೋರಿ ಬ್ಲಾಕ್ ಆಗಿ ಜಮೀನಿಗೆ ನೀರು ಬಂದು ಹಾನಿಯಾಗಿದೆ. ಅಂಬೂರಿ ಬಳಿಯ ಕಿರಣ್

ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಕೃತಕ ನೆರೆ

ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಮೊಳಕಾಲ್ಮೂರು ಬಳಿ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಉಂಟಾಗಿದೆ. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಉಂಟಾದ ನೆರೆಯಿಂದ ಆತ್ರಾಡಿಯ ಭಾಗದ ನಿವಾಸಿಗಳ ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸದ ಹಿನ್ನೆಲೆಯಲ್ಲಿ ಮನೆಗೆ ಚರಂಡಿ ನೀರು ನುಗ್ಗಿದ ಪರಿಣಾಮ ಆತ್ರಾಡಿಯ ಸ್ಥಳೀಯ ಜನರು ಆಕ್ರೋಶಗೊಂಡಿದ್ದು, ಸಂಬಂಧಪಟ್ಟವರು ವ್ಯವಸ್ಥೆಯನ್ನು

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ,ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು,ಉಡುಪಿ ಜಿಲ್ಲೆಯ ಕೆಮ್ತೂರು ,ಬೊಳ್ಜೆ ಭಾಗ ಸಂಪೂರ್ಣ ಜಲಾವೃತಗೊಂಡಿದೆ. ಪಾಪನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಜಾಲಾವೃತಗೊಂಡಿದ್ದು, ಅಗ್ನಿ ಶಾಮಕ ದಳ ಸಿಬಂದಿಗಳು ರಬ್ಬರ್ ಮೂಲಕ ನೆರೆ ಸಂತ್ರಸ್ತರನ್ನ ರಕ್ಚಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆ ತಂದರೂ. ಮಳೆ ಪ್ರಮಾಣ ಜಾಸ್ತಿಯಾಗುತ್ತಿದ್ದು, ನದಿ ನೀರಿ ಮಟ್ಟ ಹೆಚ್ಚಾಗುತ್ತಿರುವುದು ಸ್ಥಳೀಯರ

ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ, ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ

ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣ,ರಸ್ತೆ ಸಂಚಾರ ಸಂಪೂರ್ಣ ಬಂದ್

ಶಿರೂರು ಟೋಲ್ ಗೇಟ್ ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿಂತಿರುವ ಲಾರಿ ಡ್ರೈವರ್ ಗಳ ಗೋಳು ಕೇಳುವವರೇ ಇಲ್ಲದಂತಾಗಿದೆ. ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನಲೆಯಲ್ಲಿ, ರಸ್ತೆ ಸಂಚಾರ ಸಂಪೂರ್ಣ ಬಂದ್ ಅಗಿರುವ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್‌ನಲ್ಲಿ ನೂರಾರು ಲಾರಿಗಳು ಸಾಲು ಸಾಲಾಗಿ ನಿಂತುಕೊಂಡಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಲಾರಿಗಳು ಇಲ್ಲೆ ಬಾಕಿಯಾಗಿದ್ದು, ಲಾರಿ ಡ್ರೈವರ್ ಗಳ ಕೈಯಲ್ಲಿದ್ದ ಹಣ ಹಾಗೂ ಆಹಾರ

ಕಾರ್ಕಳದ ಹಿಂದೂ ರುದ್ರಭೂಮಿಯ ಮೇಲ್ಚಾವಣಿಗೆ ಬಿದ್ದ ಮರ

ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ನಡೆದಿದೆ. ಮರ ಉರುಳಿ ಬಿದ್ದ ಪರಿಣಾಮವಾಗಿ ಅಂದಾಜು 50 ಸಾ. ರೂ. ನಷ್ಟ ಸಂಭವಿಸಿದೆ. ರೆಂಜಾಳ ಮತ್ತು ಸಾಣೂರು ಗ್ರಾಮದ ಮೃತದೇಹಗಳನ್ನು ಸುಡುವ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ರುದ್ರಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ರಾವ್,

ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ – ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಅಂಗಳಕ್ಕೆ ನುಗ್ಗಿದ ನೀರು

ನೆಲ್ಯಾಡಿ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳ ತನಕ ಬಂದಿದೆ. ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಅಂಗಳಕ್ಕೆ ಬಂದಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ