Home Archive by category ಹಾನಿ (Page 10)

ಉಳ್ಳಾಲ: ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ – ಹಣ್ಣು ಹಂಪಲು ಅಂಗಡಿಗಳು ಭಸ್ಮ

ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್

ಬೈಂದೂರು: ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ದುರ್ಮರಣ

ಬೈಂದೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಸಲೀಂ (38) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ

ರೆಮಲ್ ಚಂಡಮಾರುತದ ಕಾರಣದಿಂದಾಗಿ ಮಿಜೋರಾಂ, ಅಸ್ಸಾಂಗಳಲ್ಲೂ ಭಾರೀ ಮಳೆ ಹಾಗೂ ಭೂಕುಸಿತದಿಂದ 31 ಮಂದಿ ಮರಣ

ರೆಮಲ್ ಚಂಡಮಾರುತದ ಕಾರಣದಿಂದಾಗಿ ಮಿಜೋರಾಂ, ಅಸ್ಸಾಂಗಳಲ್ಲೂ ಭಾರೀ ಮಳೆ ಹಾಗೂ ಭೂಕುಸಿತದಿಂದ 31 ಮಂದಿ ಮರಣ ಹೊಂದಿದ್ದಾರೆ. ಮಿಝೋರಾಂನಲ್ಲಿ 27 ಮತ್ತು ಅಸ್ಸಾಂನಲ್ಲಿ ನಾಲ್ವರು ಮೃತರಾಗಿದ್ದಾರೆ. ಐಜ್ವಾಲ್ ಹೊರವಲಯದ ಗಣಿ ಕುಸಿತದಲ್ಲಿ ಹದಿನಾಲ್ಕು ಜನರು ಸತ್ತಿದ್ದಾರೆ. ಲಿಮೆನ್, ಸಲೇ, ಫ್ಯಾಲಗ್, ಬಬಾಲ್ ಮೊದಲಾದ ಕಡೆ 13 ಜನ ಎಂದು 27 ಮಂದಿ ಮರಣಿಸಿದ್ದಾರೆ. ಐಜ್ವಾಲ್ ಗಣಿ ಕುಸಿತದಲ್ಲಿ 12 ಮಂದಿ ನಾಪತ್ತೆಯಾಗಿದ್ದು, ಕುಸಿದ ಮಣ್ಣುಗಳಡಿ ಅವರಿಗಾಗಿ ಹುಡುಕಾಟ

ಶಿರ್ವ: ಸಿಡಿಲಾಘತಕ್ಕೆ ಯುವಕ ಬಲಿ

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘತಕ್ಕೆ ಕಾಲೇಜು ವಿದ್ಯಾರ್ಥಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ ಶಿರ್ವ ಎಂ ಎಸ್ ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಪೂಜಾರಿ (20 )ಮೃತಪಟ್ಟವರು. ಕಳೆದ ರಾತ್ರಿ ಸ್ನಾನ ಮಾಡಲು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ. ನೆಲಕ್ಕೆ ಬಿದ್ದಿದ್ದ ಅವರನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ -ಕಂಟೈನರ್,ಇನ್ನೋವಾ ಡಿಕ್ಕಿ- ತಾಯಿ, ಮಗ ದುರ್ಮರಣ

ನೆಲ್ಯಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಯಿ ಸಪೀಯಾ, ಮಗ ಸಫೀಕ್ ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ

ಹೆಜಮಾಡಿ : ಹೆದ್ದಾರಿಯಂಚಿಗೆ ಮೀನಿನ ನೀರು ಚೆಲ್ಲಿದ ವಾಹನ -ಗ್ರಾ.ಪಂ.ನಿಂದ 5 ಸಾವಿರ ದಂಡ

ಹೆಜಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದಾರಿ ಇಕ್ಕೆಲಲ್ಲಿ ಭಟ್ಕಳ ಮೂಲದ ಮೀನಿನ ವಾಹನವೊಂದರಿಂದ ದುರ್ನಾತ ಬೀರುವ ಮೀನಿನ ನೀರನ್ನು ಚೆಲ್ಲಿದ ತಪ್ಪಿಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ. ನೀರು ಚೆಲ್ಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಗ್ರಾ.ಪಂ. ಸದಸ್ಯರು ಸಹಿತ ಸ್ಥಳೀಯ ಟೋಲ್ ಸಿಬ್ಬಂದಿಗಳು ಸೇರಿ ಲಾರಿಯನ್ನು ತಡೆದು, ಸ್ಥಳೀಯವಾಗಿ ಎಚ್ಚರಿಕಾ ಫಲಕದಲ್ಲಿ ನಮೋದಿಸಿದಂತೆ ಗ್ರಾ.ಪಂ.ಐದು ಸಾವಿರ ವಿಧಿಸಿದ್ದು , ಮುಂದೆ

ಬಂಟ್ವಾಳ: ರಸ್ತೆ ಬದಿಯೇ ಡಂಪಿಂಗ್ ಯಾರ್ಡ್: ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದು ಅನಾಗರಿಕ ಪ್ರವೃತ್ತಿ

ಬಂಟ್ವಾಳ ತಾಲೂಕಿನ ಬಹುತೇಕ ಭಾಗಗಳಲ್ಲಿ ರಸ್ತೆ ಇಕ್ಕೆಲಗಳು, ಇಳಿಜಾರು ಗುಂಡಿಗಳು ಕಸ ಎಸೆಯುವ ತಾಣಗಳಾಗುತ್ತಿದೆ. ಕೊಳೆಯುವ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಾಹನಗಳಲ್ಲಿ ಬಂದು ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗುವ ಅನಾಗರಿಕ ಪ್ರವೃತ್ತಿ ಹೆಚ್ಚಾಗುತ್ತಿದೆ. ಮನೆ, ಅಂಗಡಿಗಳ ತ್ಯಾಜ್ಯಗಳು ರಸ್ತೆ ಬದಿಗಳಲ್ಲಿ ಎಸೆಯುತ್ತಿರುವ ಪರಿಣಾಮ ಸುತ್ತಮುತ್ತಲ ಪ್ರದೇಶ ದುರ್ವಾಸನೆ ಬೀರುತ್ತಿದೆ. ಜನರಲ್ಲಿ ಸ್ವಚ್ಚತೆಯ ಪರಿಕಲ್ಪನೆ ಕೇವಲ ಅಕ್ಟೋಬರ್ 2ರ ಸ್ವಚ್ಛತಾ

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ; ಕೃಷಿ ನಾಶ

ಕೊಕ್ಕಡದ ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ. ವರದಿ: ಪ್ರಶಾಂತ್ ನೆಲ್ಯಾಡಿ

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ- ಕೃಷಿ ನಾಶ

ಕೊಕ್ಕಡ : ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿದೆ. ಸುಡುಮದ್ದು