Home Archive by category ಹಾನಿ (Page 4)

ಕುಂದಾಪುರ : ಸೌಪರ್ಣಿಕ ನದಿಯ ನೀರಿನ ಮಟ್ಟ ಹೆಚ್ಚಳ

ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ ಪ್ರದೇಶಗಳು ಮುಳುಗಡೆ ಭೀತಿಯಲ್ಲಿದೆ. ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿಗಳು ನೆರೆಯಿಂದ ಸಂಪೂರ್ಣ

ಆಯತಪ್ಪಿ ನದಿಗೆ ಬಿದ್ದ ವಿದ್ಯಾರ್ಥಿನಿಗೆ ಶೋಧ

ಬೈಂದೂರು : ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಾಸ್ಸಾಗುವಾಗ ಕಾಲುಸಂಕದಿಂದ ಆಕಸ್ಮಿಕ ಕಾಲು ಜಾರಿ ಹರಿಯುವ ನದಿಗೆ ಬಿದ್ದು ನಾಪತ್ತೆದ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಚಪ್ಪರಿಕೆ ಸರಕಾರಿ ಹಿ.ಪ್ರಾ.ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಮಂಗಳವಾರ ಸಂಜೆ 6 ಗಂಟೆ ತನಕ ಪತ್ತೆಯಾಗಿಲ್ಲ. ಸನ್ನಿಧಿ ಮೃತದೇಹ ಪತ್ತೆಗೆ ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರು, ಈಜುಪಟುಗಳು ಹಾಗೂ ಮುಳುಗು ತಜ್ಞರು ನಿರಂತರವಾಗಿ ಶೋಧ ಕಾರ್ಯದಲ್ಲಿ

ಕಾಲು ಸಂಕದಿಂದ ಬಿದ್ದು ಸನ್ನಿದಿ ನೀರುಪಾಲು

ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ನೀರು ಪಾಲಾಗಿದ್ದು ಹುಡುಕಾಟ ತೀವ್ರಗೊಂಡಿದೆ.ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ

ವಿಟ್ಲ: ಕಣಜದ ಹುಳುವಿನಿಂದ ದಾಳಿಗೊಳಗಾಗಿದ್ದ ವ್ಯಕ್ತಿ ಮೃತ್ಯು

ವಿಟ್ಲ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ

ಕೊಯನಾಡು ಬಳಿಯ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಬಿರುಕು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಬಳಿಯಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಮಧ್ಯೆ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿದ್ದು, ಮಾಣಿ-ಮೈಸೂರು ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಠಿಯಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಸದ್ಯ ಮುಂಜಾಗರೂಕತೆಯ ಕ್ರಮವಾಗಿ ಈ ಹೆದ್ದಾರಿಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಪರಿಶೀಲನೆ

ಸುಳ್ಯ ಮತ್ತು ಕಡಬ ತಾಲೂಕು ಭಾರೀ ಮಳೆ : ಜಿಲ್ಲಾಧಿಕಾರಿ ಭೇಟಿ

ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ,

ಏನೆಕಲ್ಲು: ಮಳೆಯ ಅವಾಂತರ: ದೇವಸ್ಥಾನದ ಕಾಂಪೌಂಡ್ ಕುಸಿತ

ನಿನ್ನೆ ಸುರಿದ ಭಾರೀ ಮಳೆಗೆ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹರಿಯುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನೀರು ದೇವಾಲಯದ ಒಳಂಗಾಣಕ್ಕೆ ಆವರಿಸಿತ್ತು. ನೀರಿನೊಂದಿಗೆ ಮಣ್ಣು ಹರಿದು ಬಂದು ದೇವಸ್ಥಾನದ ಒಳಾಂಗಣ ಮತ್ತು ಪರಿಸರ ಕೆಸರುಮಯವಾಗಿದೆ. ನೀರಿನಲ್ಲಿ ತೇಲಿಕೊಂಡು ಬಂದ ದೊಡ್ಡ ಗಾತ್ರದ ಮರದ ದಿಮ್ಮಿ ಹೊರಾಂಗಣದ ಕಾಂಪೌಂಡ್ ಬಳಿ ನಿಂತಿದೆ. ಕಾಂಪೌಂಡ್ ಕುಸಿದುಬಿದ್ದು ಅಪಾರ ನಷ್ಟ ಉಂಟಾಗಿರುವುದಾಗಿ ತಿಳಿದುಬಂದಿದೆ.

ಬೈಂದೂರು ಧಾರಾಕಾರ ಮಳೆ : ಸ್ಥಳದಲ್ಲಿ ಬೀಡುಬಿಟ್ಟ ಕಂದಾಯ ಇಲಾಖೆ, ಅಗ್ನಿಶಾಮಕ ದಳ

ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ ,ರಾಜ್ಯ ಹೆದ್ದಾರಿ ಸಂಪೂರ್ಣ , ಕೆಲವು ಶಾಲೆಯ ಎದುರುಗಡೆ ಮುಳುಗಡೆಯಾಗಿದೆ ಯಾವುದೇ ವಾಹನ ಸಂಚಾರ ಇಲ್ಲದೆ ಸ್ಥಗಿತಗೊಂಡಿದೆ. ಹಲವಾರು ಮನೆಗಳು ರಸ್ತೆ ಸಂಪರ್ಕವನ್ನೇ

ಸುಬ್ರಮಣ್ಯ: ಭಾರಿ ಮಳೆಗೆ ಗುಡ್ಡ ಕುಸಿದು ಇಬ್ಬರು ಮಕ್ಕಳ ದುರ್ಮರಣ

ಸುಬ್ರಹ್ಮಣ್ಯದ ಪರ್ವತಮುಖಿಯಲ್ಲಿ ಭಾರಿ‌ಮಳೆಗೆ ಮನೆ ಮೇಲೆ ಗುಡ್ಡಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ‌ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರದಾರ ಪರ್ವತಮುಖಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸುಮಾರು 7 ಗಂಟೆಗೆ ಭಾರಿ ಮಳೆಗೆ ಮನೆ ಮೇಲೆ ಗುಡ್ಡಕುಸಿದು ಮನೆ ಸಂಪೂರ್ಣ ಮಣ್ಣಿನಡಿ ಬಿದ್ದಿದ್ದು ಇದರಲ್ಲಿ ಕುಸುಮಧಾರ ಮತ್ತು ರೂಪಾಶ್ರೀ ದಂಪತಿಗಳ ಇಬ್ಬರು ಹೆಣ್ಣು ಮಕ್ಕಳಾದ ಐದನೇ ತರಗತಿ ವಿದ್ಯಾಭ್ಯಾಸ

ಕುಕ್ಕೆ ಸುಬ್ರಹ್ಮಣ್ಯ ಭಾರಿ ಮಳೆ ಹಿನ್ನೆಲೆ : ಕ್ಷೇತ್ರ ದರ್ಶನಕ್ಕೆ ನಿರ್ಬಂಧ

ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಿಕೊಡಲಾಗುತ್ತಿದೆ.ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ