Home Archive by category ಹಾನಿ (Page 5)

ಮೂಡುಬಿದಿರೆ: ಲಾಡಿ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿದ ಬ್ಯಾನರ್ ಗೆ ಹಾನಿ – ಇಬ್ಬರ ಬಂಧನ

ಮೂಡುಬಿದಿರೆ: ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಅವರು ಲಾಡಿ ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ

ಪುತ್ತೂರು : ಬೈಕ್, ರಿಕ್ಷಾ ಅಪಘಾತ – ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುರ ಸಮೀಪ ಫೆ.4ರಂದು ರಾತ್ರಿ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.ಕೆಮ್ಮಿಂಜೆ ಬೈಲು ದಿ.ಪುರುಷೋತ್ತಮ ಎಂಬವರ ಪುತ್ರ ಚೇತನ್(46ವ)ರವರು ಮೃತಪಟ್ಟವರು. ಘಟನೆಯಿಂದ ಬೈಕ್‍ನಲ್ಲಿ ಸಹಸವಾರ ಮನೀಷ್(10ವ)ರವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್ ತೌಸಿಕ್ ಅವರು ಗಾಯಗೊಂಡಿದ್ದಾರೆ.

ಉಳ್ಳಾಲ: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಮತ್ತೊಬ್ಬ ಆರೋಪಿಗೆ ಶೂಟೌಟ್

ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ

MRPL launches State-of-the-Art Bitumen Production Train

Mangalore Refinery and Petrochemicals Limited (MRPL) announces the commissioning of its new Bitumen production train, powered by advanced ‘Biturox’ technology from the global leaders in Bitumen solutions, Pörner, Austria. Engineered by the premier Indian consulting firm Engineers India Limited (EIL), the additional train represents a major leap forward for MRPL

ಉಡುಪಿ : ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೇಳೆ ತಲೆಕೆಳಗಾಗಿ ಬಿದ್ದ ಕ್ರೈನ್

ನಾಲ್ಕಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ. ಇಲ್ಲಿನ ಏಕಮುಖ ಸಂಚಾರದಿಂದ ಜನರು ರೋಸಿ ಹೋಗಿದ್ದಾರೆ. ಸಾಕಷ್ಟು ಹೋರಾಟಗಳ ಬಳಿಕ ಇದೀಗ ಸೇತುವೆ ಕಾಮಗಾರಿ ಆಮೆ ಗತಿಯಲ್ಲಿ ಶುರುವಾಗಿದೆ. ಕಾಮಗಾರಿ ನಡೆಯುತ್ತಿರುವ ವೇಳೆ ಕ್ರೈನ್ ವೊಂದು ತಲೆಕೆಳಗಾಗಿ ಬಿದ್ದ ಘಟನೆ ನಡೆದಿದೆ. ಎಡಮಗ್ಗಲಿನ ಎತ್ತರದ ರಸ್ತೆಯಿಂದ ಬಲ ಮಗ್ಗುಲಿನಲ್ಲಿರುವ ತಗ್ಗು ರಸ್ತೆಗೆ, ಈ ಕ್ರೈನ್ ಬಿದ್ದಿದ್ದರೆ ಭಾರಿ ಅಪಾಯ

ಪುತ್ತೂರು : ಮಹಿಳೆಯ ತಲೆಬುರುಡೆ ಮತ್ತು ಎಲುಬುಗಳು ಪತ್ತೆ

ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ. ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ

ಉದ್ಯಾವರ : ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ: ಪ್ರವಾಸಿಗರಿಗೆ ಗಾಯ

ರಾಷ್ಟೀಯ ಹೆದ್ದಾರಿ 66ರ ಇಕ್ಕೆಲಲ್ಲಿ ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು

ಕಿನ್ನಿಗೋಳಿ : ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಧಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ‌ ನಡೆಸಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಕಟೀಲು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಗೊಂಡವರನ್ನು ಸ್ಧಳೀಯ ನಿವಾಸಿ ಲಿಗೋರಿ (58) ಎಂದು ಗುರುತಿಸಲಾಗಿದೆ.ಗಾಯಾಳು ಲಿಗೋರಿ ಹೈನುಗಾರರಾಗಿದ್ದು ದನಗಳಿಗೆ ಮೇವು ತರಲು ಹೋದಾಗ ಈ ಘಟನೆ ನಡೆದಿದ್ದು ಲಿಗೋರಿ ಅವರು ಧೈರ್ಯದಿಂದ ಚಿರತೆಯನ್ನು ಎದುರಿಸಿದ್ದು ಕೂಡಲೇ ಚಿರತೆ ಸ್ಧಳದಿಂದ

ನಾಟೆಕಲ್ :ಬಸ್-ಕಾರು ಅಪಘಾತ , ನಾಲ್ವರಿಗೆ ಗಾಯ

ನಾಟೆಕಲ್ : ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು ಮುರಿತಕ್ಕೊಳಗಾಗಿದ್ದರೆ, ಅರಾಫತ್ ಇನೋಳಿ ಎಂಬವರ ಕಾಲಿನ ಮೂಳೆಗಳು ಮುರಿತಕ್ಕೊಳಗಾಗಿದೆ. ಉಳಿದಂತೆ ಚಾಲಕ ಅಝ್ಮಾನ್, ಹ್ಯಾರೀಸ್ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುವ ಎನ್ .ಎಸ್ ಟ್ರಾವೆಲ್ಸ್ ಬಸ್ಸು ವಿರುದ್ಧ

ಮಂಗಳೂರು: ಲೋಟಸ್ ಬಿಲ್ಡರ್ಸ್‌ನ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಇಬ್ಬರ ಸೆರೆ

ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ. ಖ್ಯಾತ ಬಿಲ್ಡರ್ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಏರ್ಪೋರ್ಟಿನಿಂದ ಕಾರಿನಲ್ಲಿ ಬರುತ್ತಿರುವಾಗ ಈ ಯುವಕರ ಕಾರನ್ನು ಓವರ್ ಟೇಕ್ ಮಾಡಿ ಬಂದಿದ್ದರು. ಇದೇ ಕಾರಣಕ್ಕೆ ಕೋಪದಿಂದ ಕೊಟ್ಟಾರಿ ಅವರ