Home Archive by category ಹಾನಿ (Page 8)

ಮರಗಳು ಉರುಳಿಬಿದ್ದು `ಕೊಲ್ಯ ಕೆರೆ’ಗೆ ಹಾನಿ

ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ, ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ ಪರಿಣಾಮವಾಗಿ ಕೆರೆಯ ಬದಿಯಲ್ಲಿರುವ ರಸ್ತೆ

ದುಸ್ಥಿತಿಯಲ್ಲಿದೆ ಮಂಗಳೂರಿನ ನಂತೂರು ಬಸ್ ನಿಲ್ದಾಣ

ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ ಮಂಗಳೂರಲ್ಲಿ ಕಾಣಬಹುದು. ಹೌದು. ಮಂಗಳೂರು ನಗರದ ನಂತೂರು ಸಮೀಪದಲ್ಲಿರುವ ಬಸ್ ನಿಲ್ದಾಣ ಈಗಲೋ, ಆಗಲೋ ಬೀಳುವ ಸ್ಥಿತಿಯಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆಯ ಬಸ್ ನಿಲ್ದಾಣ ಹಲವಾರು ವರ್ಷಗಳಿಂದ

ರಸ್ತೆ ಗುಂಡಿ : ವಿದ್ಯಾರ್ಥಿಯಿಂದ ಅಳಿಲು ಸೇವೆ

ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡವಾಗಿ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಇದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹೆಕ್ಕಿ ತಂದು ಹೊಂಡ ಮುಚ್ಚುವ ಪ್ರಯತ್ನ ಮಾಡಿದ್ದಾನೆ.ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಯ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ

ಕಟಪಾಡಿ ಪೇಟೆ ಸರಣಿ ಅಪಘಾತ

ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರು ರಸ್ತೆಯಂಚಿನಲ್ಲಿ ನಿಲ್ಲಿಸಿದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ನಿಲ್ಲದೆ ಸ್ಕೂಟರ್ ಗೆ ಡಿಕ್ಕಿಯಾಗಿ ಪಕ್ಕದ ಪಾಸ್ಟ್ ಫುಡ್ ಅಂಗಡಿಯೊಳಗೆ ನುಗ್ಗಿದೆ. ಅಂಗಡಿಯಾತನಿಗೆ ಹಾಗೂ ಆಹಾರ ಸೇವಿಸುತ್ತಿದ್ದ

ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ ಓರ್ವ ,ಮೃತ್ಯು, ಇನ್ನೋರ್ವನಿಗೆ ಗಾಯ

ಉಳ್ಳಾಲ: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೊರಜಿಲ್ಲೆಯ ಕಾರ್ಮಿಕರಾಗಿದ್ದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ

ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಗೆಳೆಯನ ಸಾವಿಗೆ ನ್ಯಾಯ ಸಿಗುವಂತೆ ಪ್ರತಿಭಟನೆ

ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ದೇರೆಬೈಲ್ ಕೊಂಚಾಡಿಯ ಆತೀಶ್ ಶೆಟ್ಟಿ ಅವರು ರಸ್ತೆ ಹೊಂಡಾ ತಿಳಿಯದೆ

ಸ್ಕೂಟರ್‍ಗೆ ಟ್ಯಾಂಕರ್ ಢಿಕ್ಕಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಕಾಪು ಕಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಜಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಮೇಲೆ ನಡೆದಿದೆ. ಸ್ಕೂಟರ್ ಸವಾರ ಮಲ್ಲಾರು ಕೋಟೆ ರೋಡ್ ನಿವಾಸಿ ಜಾಫರ್ ಎಂಬವರ ಪುತ್ರ ಕಟಪಾಡಿ ಚಪ್ಪಲಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ಅಲ್ಪಾಜ್ (17). ಈತ ತನ್ನ ಸಹಪಾಠಿಯೊಂದಿಗೆ ಉಡುಪಿ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ವೇಳೆ ಹಿಂಬದಿ ಸವಾರ ಸ್ಕೂಟರಿಂದ

ಪಡುಬಿದ್ರಿ : ಪೆಟ್ ಶೋಪ್ ನಲ್ಲಿ ವಿದ್ಯುತ್ ಆಕಸ್ಮಿಕ ಸುಟ್ಟು ಕರಕಲಾದ ಹಕ್ಕಿ , ಮೀನು

ವಿದ್ಯುತ್ ಅವಘಢದಿಂದ ಮುಚ್ಚಿದ ಅಂಗಡಿಯ ಒಳಗೆ ಬೆಂಕಿ ಕಾಣಿಸಿಕೊಂಡು ಅಕ್ವೇರಿಯಂಗಳ ಸಹಿತ ವಿವಿಧ ಜಾತಿಗಳ ಹಕ್ಕಿ ಸಹಿತ ವಿವಿಧ ಜಾತಿಗಳ ಮೀನುಗಳು ಬೆಂಕಿಯಲ್ಲಿ ಸಿಲುಕಿ ಭಸ್ಮವಾದ ಘಟನೆ ನಡೆದಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಪಡುಬಿದ್ರಿ ಮುಖ್ಯ ಮಾರುಕಟ್ಟೆ ರಸ್ತೆಯ ಪೊಲೀಸ್ ಠಾಣಾ ಸಮೀಪದ ಗ್ರಾ.ಪಂ. ಕಟ್ಟಡದ ಅವಿಘ್ನ ಅಕ್ವೇರಿಯಂ ಮಾರಾಟದಂಗಡಿಯಲ್ಲಿ ಮುಂಜಾನೆ ಹೊಗೆ ಕಾಣಿಸಿಕೊಂಡಿದ್ದು ಇದನ್ನು ಕಂಡ ಸಾರ್ವಜನಿಕರು ಪೆÇಲೀಸರಿಗೆ ಮಾಹಿತಿ

ಕುಂದಾಪುರ : ಸೌಪರ್ಣಿಕ ನದಿಯ ನೀರಿನ ಮಟ್ಟ ಹೆಚ್ಚಳ

ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ ಪ್ರದೇಶಗಳು ಮುಳುಗಡೆ ಭೀತಿಯಲ್ಲಿದೆ. ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿಗಳು ನೆರೆಯಿಂದ ಸಂಪೂರ್ಣ ಜಲಾವೃತವಾಗಿದೆ. ಕುಡಿಯುವ ನೀರಿಗೆ ಜನರ ಆಹಾಕಾರ ಉಂಟಾಗಿದೆ. ನೆರೆ ನೀರು ಜೊತೆ ಕೆಲವೊಂದು ಹಾವುಗಳು

ಆಯತಪ್ಪಿ ನದಿಗೆ ಬಿದ್ದ ವಿದ್ಯಾರ್ಥಿನಿಗೆ ಶೋಧ

ಬೈಂದೂರು : ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಾಸ್ಸಾಗುವಾಗ ಕಾಲುಸಂಕದಿಂದ ಆಕಸ್ಮಿಕ ಕಾಲು ಜಾರಿ ಹರಿಯುವ ನದಿಗೆ ಬಿದ್ದು ನಾಪತ್ತೆದ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಚಪ್ಪರಿಕೆ ಸರಕಾರಿ ಹಿ.ಪ್ರಾ.ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಮಂಗಳವಾರ ಸಂಜೆ 6 ಗಂಟೆ ತನಕ ಪತ್ತೆಯಾಗಿಲ್ಲ. ಸನ್ನಿಧಿ ಮೃತದೇಹ ಪತ್ತೆಗೆ ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರು, ಈಜುಪಟುಗಳು ಹಾಗೂ ಮುಳುಗು ತಜ್ಞರು ನಿರಂತರವಾಗಿ ಶೋಧ ಕಾರ್ಯದಲ್ಲಿ