Home Archive by category ಹಾನಿ (Page 9)

ಸೂಜಿಕಲ್‌ಗುಡ್ಡೆ ಬಳಿ ಅಪಾಯದಲ್ಲಿರುವ ಮನೆಗಳು

ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ

ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮಕ್ಕೆ ಆಗ್ರಹ

ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಸುನೀಲ್ ಕುಮಾರ್ ಬಜಾಲ್ , ಪೊಲೀಸ್ ಇಲಾಖೆ ಹಾಗೂ ಆರ್ ಟಿ ಓ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲದ್ರೆ ಆರ್ ಟಿಓ ಕಚೇರಿ ಮುತ್ತಿಗೆ ಹಾಕುವ ಅನಿವಾರ್ಯ ಬರುತ್ತೆ ಎಂದು ಎಚ್ಚರಿಕೆ ನೀಡಿದ್ರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ

ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ ಜಲಾವೃತ

ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯ ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿಯ ಸಮಸ್ಯೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಮನೆಯವರನ್ನ ಸುರಕ್ಷಿತ

ಉಳ್ಳಾಲದ ಮದನಿ ನಗರದಲ್ಲಿ ನಡೆದ ದುರಂತ ಹಿನ್ನೆಲೆ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ

ಉಳ್ಳಾಲದ ಮದನಿ ನಗರದಲ್ಲಿ ಕಂಪೌoಡ್ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಜೊತೆಗೆ ಸ್ಪೀಕರ್ ಖಾದರ್ ಅವರ ಜೊತೆಗಿದ್ದರು.ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಗ್ರಾ.ಪಂ ಅಧಿಕಾರಿಗಳ ಮೂಲಕ ಅಪಾಯಕಾರಿ ಪಾಯಿಂಟ್‌ಗಳನ್ನು ಸರ್ವೇ ನಡೆಸಲು ಸೂಚಿಸಲಾಗಿದೆ. ತೀವ್ರತರದಲ್ಲಿ ಅಪಾಯ ಇರುವ ಸ್ಥಳಗಳಲ್ಲಿ ತುರ್ತು ಪರಿಹಾರ ಕ್ರಮಕ್ಕೆ ಆದೇಶಿಸಲಾಗಿದೆ.

ಬನ್ನೂರು : ಧರೆ ಕುಸಿತ ಮನೆಗೆ ಹಾನಿ

ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಾಸಕರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕರು ಬೆಂಗಳೂರಿನಲ್ಲಿದ್ದು ಘಟನಾ ಸ್ಥಳಕೆ ಶಾಸಕರ ಕಚೇರಿ ಸಿಬಂದಿಗಳು ಭೇಟಿ ನೀಡಿದ್ದು ಕುಟುಂಬಕ್ಕೆ ಕರೆಮಾಡಿದ ಶಾಸಕರು ಸಾಂತ್ವನ ಹೇಳಿದ್ದು ಸರಕಾರದಿಂದ ತಕ್ಷಣ ಪರಿಹಾರದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.

ಕಡಂದಲೆ : ಮನೆಯ ಮೇಲೆ ಮರ ಬಿದ್ದು ಹಾನಿ

ಮೂಡುಬಿದಿರೆ : ಕಡಂದಲೆ ಗ್ರಾಮ ವ್ಯಾಪ್ತಿಯ ಬಾರಬೆಟ್ಟುವಿನ ಅಣ್ಣಿ ಎಂಬವರ ಮನೆ ಮೇಲೆ ಬುಧವಾರ ಸಂಜೆ ಭಾರೀ ಗಾತ್ರದ ಮರವೊಂದು ಬಿರುಗಾಳಿಗೆ ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ. ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಸ್ಥಳಕ್ಕೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿನೇಶ್ ಕಂಗ್ಲಾಯಿ, ಪಿಡಿಓ ರಕ್ಷಿತಾ, ವಿಎ ಅನಿಲ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದರು.

ಪುತ್ತೂರು: ಶಾಂತಿಗೋಡಿನ ಪಂಜಿಗ ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿಗೆ ಹಾನಿ

ಪುತ್ತೂರು: ಕಳೆದ ಎರಡು ದಿನಗಳಿಂದ ಬೆಳ್ಳಿಪ್ಪಾಡಿ ಗ್ರಾಮ ಮತ್ತು ಶಾಂತಿಗೋಡು ಗ್ರಾಮದ ನಡುವೆ ಸುತ್ತಾಡುತ್ತಿರುವ ಕಾಡಾನೆಗಳೆರಡು ಇದೀಗ ಶಾಂತಿಗೋಡು / ಚಿಕ್ಕಮುಡ್ನೂರು ಗ್ರಾಮದ ನಡುವೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಂತಿಗೋಡು ಗ್ರಾಮದ ಪಂಜಿಗದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಬೆಳ್ಳಿಪ್ಪಾಡಿ ಕೊಡಿಮರದಿಂದ ಹೊಳೆ ದಾಟಿದ ಆನೆ ಅಲ್ಲಿಂದ ಬೆದ್ರಾಳ ತೋಡು ಮೂಲಕ ಚಿಕ್ಕಮುಡ್ನೂರು ಗ್ರಾಮದ ಧನ್ಯ ಕುಮಾರ್ ಜೈನ್ ಎಣಿಮೊಗರು ಅವರ ತೋಟದಲ್ಲಿ ಹೋಗಿದೆ.

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 49 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ಹೇಳಿವೆ. ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್

ಪುತ್ತೂರು: ಕಾಡಾನೆ ಹಾವಳಿ – ಸ್ಥಳಿಯರಲ್ಲಿ ಆತಂಕ

ಪುತ್ತೂರು : ಕಳೆದೊಂದು ವಾರದಿಂದ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರೇ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಮಂಗಳವಾರ ಬೆಳಿಗ್ಗೆ ಉಪ್ಪಿನಂಗಡಿ ಹೋಬಳಿ ಪ್ರವೇಶಿಸಿದೆ. ಜೂ 11 ರಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಪ್ಪಾಡಿ ಬಳಿ ಬಾರ್ತೋಲಿ ಎಂಬ ತೋಟದಲ್ಲಿ ಕಾಣಿಸಿಕೊಂಡಿದೆ. ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ

ಕುಂದಾಪುರ : ತ್ರಾಸಿ ಅಂಬಾ ಶೋ ರೂಂ ಗೆ ಆಕಸ್ಮಿಕ ಬೆಂಕಿ

ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು ಸಂಭವಿಸುತ್ತ ಇದ್ದರು, ಹೆಚ್ಚಿನ ಯಾವುದೇ ರೀತಿಯ ಸೌಲಭ್ಯ ಇಲ್ಲದೆ ಇರುವುದು ಅಗ್ನಿ ಅನಾಹುತದಲ್ಲಿ ನಷ್ಟ ಪ್ರಮಾಣ ಅಧಿಕವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಶೊ ರೂಂ ಇಡಿ ವ್ಯಾಪಿಸಿದ್ದು ಬೆಂಕಿ ನಂದಿಸಲು