ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಇಂದ್ರಾಣಿ ಹೊಳೆ ತುಂಬಿ ಹರಿಯುತ್ತಿದ್ದು,ಇದರಿಂದಾಗಿ ಶಿಥಿಲಗೊಂಡಿದ್ದ ಕಾಲು ಸೇತುವೆ ಒಂದು ಭಾಗ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ. ಮಠದ ಬೆಟ್ಟು ,ಕೊಪ್ಪರ ತೋಟಕ್ಕೆ ಸಂಪರ್ಕಿಸುವ ಕಾಲು ಸಂಕವಾಗಿದ್ದು,ಹಲವು ಸಮಯಗಳಿಂದ ಶಿಥಿಲವಸ್ಥೆಗೊಂಡಿತ್ತು.ಶನಿವಾರ ಮಧ್ಯಾಹ್ನ ಕಾಲು ಸೇತುವೆ ಯ ಒಂದು ಭಾಗ ಕುಸಿದು
ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿಯ ರಸ್ತೆ ಡೈವರ್ಷನ್ ಬಳಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರೊಂದು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರನ್ನು ಅದಮಾರಿನ ಕೆಮುಂಡೇಲು ನಿವಾಸಿ ಡ್ಯಾನಿಶ್ ಡಿಸೋಜ (50) ಎಂದು ಗುರುತಿಸಲಾಗಿದೆ. ಇವರು ಅದಮಾರು ಶಿಕ್ಷಣ ಸಂಸ್ಥೆಯ ವಾಹನದ ಚಾಲಕನಾಗಿದ್ದು, ಬೆಳಿಗ್ಗೆ ಪಡುಬಿದ್ರಿಗೆ ದಿನಬಳಕೆ ಸಾಮಗ್ರಿ
ಪಡುಬಿದ್ರಿಯ ಕಾರ್ಕಳ ರಸ್ತೆಯ ತಿರುವಲ್ಲಿ, ಟ್ಯಾಂಕರ್ ಚಾಲಕನ ಅವಸರದ ಚಾಲನೆಯಿಂದಾಗಿ ಕಂಟೈನರ್‌ವೊಂದಕ್ಕೆ ಡಿಕ್ಕಿಯಾದ ಪರಿಣಾಮ ರಸ್ತೆ ತಿರುವಲ್ಲಿದ್ದ ರಿಂಗ್ ಹಾಗೂ ವಾಹನಗಳೆರಡು ಒಂದಕ್ಕೊಂದು ಅಂಟಿಕೊಂಡ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು ಕಡೆಯಿಂದ ಬಂದ ಕಂಟೈನರ್ ಜಂಕ್ಷನ್‌ನಲ್ಲಿ ಕಾರ್ಕಳ ರಸ್ತೆಗೆ ತಿರುಗುತ್ತಿದ್ದ ವೇಳೆ, ಹಿಂದಿನಿಂದ ಇಂಧನ ಏರಿಕೊಂಡು ಬಂದ ಟ್ಯಾಂಕರ್ ಚಾಲಕ, ಟ್ಯಾಂಕರನ್ನು
ಉಡುಪಿ: ಬೀದಿ ಶ್ವಾನವೊಂದು ಕಾಲಿಗೆ ಗಾಯಗೊಳಗಾಗಿ ಕೆಲವು ವರ್ಷಗಳಿಂದ ಉಡುಪಿ ಮಿತ್ರ ಆಸ್ಪತ್ರೆ ಬಳಿ ಅಸಹಾಯಕ ಸ್ಥಿತಿಯಲ್ಲಿ ದಿನಗಳ ಕಳೆಯುತಿತ್ತು. ಶ್ವಾನದ ಅಸಹಾಯಕ ಪರಿಸ್ಥಿತಿ ಕಂಡು ಮರುಗಿದ ಪ್ರಾಣಿ ಪ್ರೀಯರಾದ, ಅನೀಶ್, ಭರತ್, ಸುಮನಾ, ನಿಖಿತಾ ಪೂಜಾರಿ, ಮಂಜುಳ ಕರ್ಕೆರಾ ಅವರು ಶ್ವಾನವನ್ನು ವಶಕ್ಕೆ ಪಡೆದು, ಖಾಸಗಿ ಪಶು ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ ಒಳಪಡಿಸಿದರು. ಆ ಬಳಿಕ ಮಣಿಪಾಲದ ಶ್ವಾನ ಪುರ್ವಸತಿ ಕೇಂದ್ರದಲ್ಲಿ ಆಶ್ರಯ ಒದಗಿಸಿದರು. ಬಬಿತಾ ಮಧ್ವರಾಜ್
ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಾಪುವಿನಲ್ಲಿ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದರು. “ಈ ಕೊಲೆಯ ಕುರಿತು ವಿಸ್ತ್ರತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರನ್ನು ಒತ್ತಾಯಿಸಲಾಗಿದೆ ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಪ್ರಯತ್ನ
ತೆಂಕ ಎರ್ಮಾಳು ತೊಟ್ಟಂ ಪ್ರದೇಶದ ಕೃಷಿ ಚಟುವಟಿಕೆ ನಡೆಸಿದ ಹತ್ತಾರು ಎಕ್ರೆ ಕೃಷಿ ಭೂಮಿ ಯುಪಿಸಿಎಲ್ ಕಂಪನಿಯ ನಿರ್ಲಕ್ಷ್ಯದಿಂದ ಮುಳುಗಡೆಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ. ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನ ವಿರೋಧದ ನಡುವೆಯೂ ಅಸ್ಥಿತ್ವಕ್ಕೆ ಬಂದ ಈ ಕಂಪನಿಯ ಪೈಪ್‌ಲೈನ್ ತೆಂಕ ಎರ್ಮಾಳಿನ ತೊಟ್ಟಂ ಬಳಿ ಸಮುದ್ರಕ್ಕೆ ಸಂಪರ್ಕ ಹೊಂದಿದ ಬಳಿಕ, ಆ ಭಾಗದ ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪ್ರದೇಶದ ಮಳೆ ನೀರು ಸಮುದ್ರ ಸೇರಲು ಈ ಪೈಪ್ ಲೈನ್
ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಖಾಸಗಿ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಸುಮಾರು 8೦೦ ಟನ್ ಸಿಲಿಕಾ ಮರಳನ್ನು ಕಾಪು ತಹಶಿಲ್ದಾರ್ ಪ್ರತಿಭಾ ಆರ್. ತಂಡ ದಾಳಿ ನಡೆಸಿ ವಶಕ್ಕೆ ಪಡೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಭೂ ಮತ್ತು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ. ಗಿರೀಶ್ ಎಂಬಾತ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ಸಿಲಿಕಾ ಮರಳು ದಾಸ್ತಾನು ಮಾಡಿದ ಬಗ್ಗೆ ಮಾಹಿತಿ ತಿಳಿದ ಕಾಪು ತಹಶಿಲ್ದಾರ್ ತಂಡ ದಾಳಿ ನಡೆಸಿದೆ. ತಂಡದಲ್ಲಿ ಕಾಪು ಆರ್.
ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೆಂಟ್ ಲೈನ್ ಕೊರೋನಾ ವಾರಿಯರ್ಸ್ ಪತ್ರಕರ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರಿಗೆ ಕಾಪು-ಕಳತ್ತೂರು ಸಮಾಜ ಸೇವಾ ವೇದಿಕೆ ವತಿಯಿಂದ ಮಾಸ್ಕ್,ಛತ್ರಿ,ಸ್ಯಾನಿಟೈಸರ್ ಸೇರಿದಂತೆ ಸುಮಾರು25 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮುಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ, ಕೊರೊನಾ
ಕಾರ್ಕಳ : ಕೋವಿಡ್ ಸಂಕಷ್ಟದ ಕಾಲದಲ್ಲಿ ದೇಶದ ಜನರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಿರುವ ಪತ್ರಕರ್ತರು ಕೋವಿಡ್ ಮುಂಚೂಣಿ ಕಾರ್ಯಕರ್ತರಾಗಿದ್ದು, ಮಾಧ್ಯಮದ ಮಂದಿಯೂ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರಿಗೂ ಸೂಕ್ತ ಸೌಲಭ್ಯ, ಸಹಕಾರ ಕಲ್ಪಿಸುವುದು ಅನಿವಾರ್ಯವಾಗಿದೆ” ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಭಿಪ್ರಾಯಪಟ್ಟರು. ಅವರು, ಕಾರ್ಕಳ ಪ್ರವಾಸಿ ಮಂದಿರದಲ್ಲಿ ಅವರು ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ
ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಕಾರ್ಕಳದ ಸ್ಥಳೀಯ ಪೆಟ್ರೋಲ್ ಬಂಕ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರಕಾರದಿಂದ ಜನ ವಿರೋಧಿ ನೀತಿಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತವಾಗಿ ಏರಿಸಿ ಶತಕವನ್ನು ದಾಟಿಸಿದ್ದಾರೆ. ಇದು ಬಿಜೆಪಿ ಸರಕಾರದ ಸಾಧನೆಯ ವಿಷಯವಾಗಿದೆ. ಮೊದಲೇ