ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಕಾಪು ಪೆಟ್ರೋಲ್ ಬಂಕ್‌ನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ವಿಭಿನ್ನವಾಗಿ ನಡೆದ ಪ್ರತಿಭಟನೆಯಲ್ಲಿ ಕ್ರಿಕೆಟ್ ಆಟಗಾರನ ಮಾದರಿ, ಕೇಕ್ ತುಂಡರಿಸುವುದು, ಮಹಿಳಾ ಕಾಂಗ್ರೆಸ್‌ನಿಂದ ತಟ್ಟೆ ಬಡೆಯುವ ಮೂಲಕ ಎಲ್ಲರ ಗಮನ ಸೆಳೆದರು. ಈ ಸಂದರ್ಭ
ಪ್ರಖ್ಯಾತ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯದ ವೈದ್ಯರು ವೃದ್ಧೆಯೊಬ್ಬರ ಕಣ್ಣಿನಿಂದ ಜೀವಂತ ಹುಳವನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ತೀವ್ರವಾದ ಕಣ್ಣು ನೋವಿನಿಂದ ಬಳಲುತ್ತಿದ್ದ 74 ವರ್ಷದ ವೃದ್ಧೆಯ ಕಣ್ಣಿನಿಂದ ವೈದ್ಯರಾದ ಡಾ. ಕೃಷ್ಣ ಪ್ರಸಾದ್ ಅವರ ತಂಡ ತುರ್ತು ಚಿಕಿತ್ಸೆ ನಡೆಸಿ ಈ ಹುಳ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ತೀವ್ರ ಕಣ್ಣು ನೋವಿನಿಂದ ಬಳಲುತ್ತಿದ್ದ ವೃದ್ಧೆ, ಜೂ 1 ರಂದು ಉಡುಪಿಯ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿದ್ದರು.
ಕುಂದಾಪುರ: ಸರ್ಕಾರ ಹೊರಡಿಸಿರುವ ನಿಯಮಗಳ ಪ್ರಕಾರವಾಗಿಯೇ ಲಸಿಕೆ ಹಂಚಿಕೆಯಾಗುತ್ತಿದೆ. ರಾಜಕೀಯ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ಕೆಲವರಿಗೆ ಬಿಜೆಪಿಯವರು ಲಸಿಕೆ ಕೊಡುತ್ತಿದ್ದಾರೆ ಎಂದು ಅನಿಸಿರಬಹುದು. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಲಸಿಕೆ ಹಂಚಿಕೆ ಪಾರದರ್ಶಕವಾಗಿಯೇ ನಡೆಯುತ್ತಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಮಂಗಳವಾರ ತಲ್ಲೂರು ಗ್ರಾ.ಪಂ ನಲ್ಲಿ ನಡೆದ ಕೋವಿಡ್ ಟಾಸ್ಕ್‌ಫೋರ್ಸ್ ಸಭೆಯ
ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ತೀರ್ಪು ಇಂದು ಪ್ರಕಟಗೊಂಡಿದ್ದು, ಮೂವರು ಪ್ರಮುಖ ಆರೋಪಿಗಳು ದೋಷಿಗಳೆಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದಾರೆ. ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ರಾಜೇಶ್ವರಿ ಶೆಟ್ಟಿ, ರಾಜೇಶ್ವರಿ ಶೆಟ್ಟಿ ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಆರೋಪಿಗಳಾಗಿದ್ದರು. ಆರೋಪಿಗಳು ದೋಷಿ ಎಂದು ನ್ಯಾಯಾಲಯ
ಕುಂದಾಪುರ: ಆಕಸ್ಮಾತ್ ಸೌಕೂರು ಏತ ನೀರಾವರಿ ಯೋಜನೆಯ ಮೂಲನಕ್ಷೆ ಬದಲಾವಣೆಯಾಗಿದೆ ಎಂದಾದರೆ ಈ ಬಗ್ಗೆ ಪರಿಶೀಲನೆ ಮಾಡೋಣ. ಕುಡಿಯಲು ಹಾಗೂ ಕೃಷಿಗೆ ನೀರು ನೀಡಲು ಸೌಕೂರು ಹಾಗೂ ಸಿದ್ದಾಪುರ ಎರಡು ಯೋಜನೆಗಳು ಆಗಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು. ಇಲ್ಲಿನ ಹೆಮ್ಮಾಡಿಯ ಜ್ಯೂವೆಲ್ ಪಾರ್ಕ್ನ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಆರೋಪಗಳ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ
ಕುಂದಾಪುರ: ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಅಥವಾ ಮುಖ್ಯಮಂತ್ರಿಗಳಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯಕ್ರಮದಲ್ಲಿ ದೇವರಾಜು ಅರಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಹೈಕಮಾಂಡ್ ನನಗೆ ಸಹಮತ ಕೊಟ್ಟು ನಾನೊಬ್ಬ
ಪಡುಬಿದ್ರಿ ಮಾರುಕಟ್ಟೆ ರಸ್ತೆಯಲ್ಲಿ ನಿರಂತರ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ಬೀದಿಬದಿ ವ್ಯಾಪಾರಿಗಳನ್ನು ಗ್ರಾ.ಪಂ. ಪಕ್ಕದ ಸರ್ಕಾರಿ ಶಾಲಾ ಮೈದಾನಕ್ಕೆ ಸ್ಥಳಾಂತರಿಸಿದ್ದರೂ.. ಅಂಗಡಿ ಹೊಂದಿರುವ ತರಕಾರಿ ವ್ಯಾಪಾರಿಗಳು ರಸ್ತೆಯಲ್ಲೇ ತರಕಾರಿಗಳನ್ನು ಇಟ್ಟು ವ್ಯಾಪಾರನಡೆಸುತ್ತಿರುವ ಬಗ್ಗೆ ಜನರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಮುಖ್ಯ ಮಾರುಕಟ್ಟೆಯ ರಸ್ತೆಗೆ ಅಂಟಿಕೊಂಡೇ
ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕಾನೂನು ಎಲ್ಲರಿಗೂ ಒಂದೇ.
ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಸಮೀಪದ ಕಟ್‌ಬೇಲ್ತೂರು ನಿವಾಸದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊಳವೆ ಬಾವಿಗೆ ಎನ್‌ಓಸಿ ಕೊಡಲು ನಿರಾಕರಿಸಲಾಗಿದೆ.
ಕುಂದಾಪುರ: ಯಡಮೊಗೆ ಸಾಮಾಜಿಕ ಕಾರ್ಯಕರ್ತನ ಮೇಲೆ ಕಾರು ಹತ್ತಿಸಿ ಕೊಲೆಗೈದ ಖೇದಕರ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪಂಚಾಯತ್ ಅಧ್ಯಕ್ಷನನ್ನು ಶಂಕರನಾರಾಯಣ ಪೊಲೀಸರು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ರಾತ್ರಿ ಸಾಮಾಜಿಕ ಕಾರ್ಯಕರ್ತ ಉದಯ್ ಗಾಣಿಗ (45) ಎಂಬವರ ಮೇಲೆ ಅವರ ಮನೆ ಎದುರಿನ ರಸ್ತೆಯಲ್ಲೇ ಕಾರು ಹರಿಸಿ ಅವರನ್ನು ಕೊಲೆಗೈಯ್ಯಲಾಗಿತ್ತು. ಉದಯ್ ಪತ್ನಿ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಶಂಕರನಾರಾಯಣ ಪೊಲೀಸರು