Home ಕರಾವಳಿ Archive by category ಉಳ್ಳಾಳ (Page 35)

ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಪಿಜಿ ಮತ್ತು ಯುಜಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ

ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ. ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ,

ಕಲ್ಲಿಕೋಟೆಯಿಂದ ನೇಪಾಳಕ್ಕೆ ಬೈಕ್ ಯಾತ್ರೆ

ಉಳ್ಳಾಲ: ಡಬ್ಬದಲ್ಲಿ ಹಣವನ್ನು ಕೂಡಿಟ್ಟು, ಸಮಾಜಕ್ಕೆ ಸೌಹಾರ್ದದ ಸಂದೇಶ ಹಾಗೂ ಸಾಯುವ ಮುನ್ನ ಅನಿಸಿದ್ದನ್ನು ಸಾಧಿಸು ಅನ್ನುವ ಉದ್ದೇಶವನ್ನು ಮುಂದಿಟ್ಟು ಕೇರಳದ ಹವ್ಯಾಸಿ ಬೈಕ್ ರೈಡರ್‍ಗಳ ಒಂಭತ್ತು ಮಂದಿಯ ತಂಡ ಕಲ್ಲಿಕೋಟೆಯಿಂದ – ನೇಪಾಳ ಪ್ರವಾಸವನ್ನು ಆರಂಭಿಸಿದೆ. ಆ.27 ರಂದು ಪ್ರವಾಸವನ್ನು ಆರಂಭಿಸಿದ ತಂಡ ಇಂದು ದೇರಳಕಟ್ಟೆಯನ್ನು ತಲುಪಿದೆ. ಅಲ್ಲಿಂದ ಐದು ಬೈಕುಗಳಲ್ಲಿ ಪ್ರವಾಸ ಮುಂದುವರಿಸಿದ ತಂಡ ಇಂದು ಗೋಕರ್ಣ ತಲುಪಿ ಅಲ್ಲೇ ಉಳಿಯಲಿದೆ.

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್‌ ಐನಿಂದ ವಿರೋಧ: ವಿವಿ ಆವರಣದಲ್ಲಿ ಚಾಲನೆ ನೀಡುತ್ತಿದ್ದಂತೆ ಪ್ರತಿಭಟನೆ

ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳಾ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು ಧಿಕ್ಕಾರ ಘೋಷಣೆ ಕೂಗಿದ್ದಾರೆ. ತಕ್ಷಣ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸಿಎಫ್‌ಐ

ಕತ್ತು ಕೊಯ್ದ ಸ್ಥಿತಿಯಲ್ಲಿ ಕೋಣ ಪತ್ತೆ

ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ.ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು,

ಒಮಾನ್‌: ಕಡಲಲ್ಲಿ ಮುಳುಗಿ ಮೃತಪಟ್ಟ ಉಳ್ಳಾಲದ ಯುವಕರು

ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್‌ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೇಕಳ (25), ಉಳ್ಳಾಲ ಕೋಡಿ ನಿವಾಸಿ ಜಹೀರ್ (25) ಮೃತಪಟ್ಟವರು. ಒಮಾನ್‌ನಲ್ಲಿ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಯುವಕರು ದುಕ್ಕುಂ ಎಂಬ ಕಡಲ ತೀರಕ್ಕೆ ಶುಕ್ರವಾರ ಸಂಜೆ ವಿಹಾರಕ್ಕೆ ತೆರಳಿದ್ದರು. ರಿಜ್ವಾನ್ ಕಡಲಿನ ಅಲೆಯಲ್ಲಿ ಸಿಲುಕಿದ್ದು ಮುಳುಗುತ್ತಿದ್ದಾಗ ಜಹೀರ್

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದ ರಸ್ತೆ ಸಂಚಾರವನ್ನು

ಅಪ್ಘಾನಿಸ್ತಾನದಿಂದ ಮಂಗಳೂರಿಗೆ ಆಗಮಿಸಿದ ಡೆಮ್ಸಿ ಮೊಂತೆರೋ

ಉಳ್ಳಾಲ ಉಳಿಯದ ನಿವಾಸಿ ಮೆಲ್ವಿನ್ ಮೊಂತೇರೊ ಅಫ್ಘಾನಿಸ್ತಾನದಿಂದ ಕಳೆದ ವಾರ ಪಾರಾಗಿ ಬಂದಿದ್ದರು. ಇದೀಗ ಉದ್ಯೋಗಕ್ಕಾಗಿ ತೆರಳಿ ಸಿಕ್ಕಿಬಿದ್ದಿದ್ದ ಮೆಲ್ವಿನ್ ಸಹೋದರ ಡೆಮ್ಸಿ ಮೊಂತೆರೊ ಕೂಡ ಇಂದು ಅಪ್ಘನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಸಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಕಾಬೂಲಿನ ಮಿಲಿಟರಿ ಬೇಸ್ ನಲ್ಲಿ ಇಕೊಲೊಗ್ ಇಂಟರ್ನ್ಯಾಷನಲ್ ಕಂಪನಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೆಮ್ಸಿ ಮೊಂತೆರೊ ಇಂದು ಉಳ್ಳಾಲದ ಉಳಿಯದಲ್ಲಿರುವ ತನ್ನ

ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ

ದಿ.ಇದಿನಬ್ಬ ಮಗನ ಮನೆಗೆ ಎನ್.ಐ.ಎ ದಾಳಿ ಪ್ರಕರಣ : ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮನೆಗೆ ಮುತ್ತಿಗೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ