Home ಕರಾವಳಿ Archive by category ಉಳ್ಳಾಳ (Page 36)

ತಲಪಾಡಿ: ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಉಳ್ಳಾಲ: ಕೆರೆ ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ತಲಪಾಡಿ ನಾರ್ಲಪಡೀಲಿನಲ್ಲಿ ಇಂದು ಸಂಜೆ ಸಂಭವಿಸಿದೆ. ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಮೃತರು. ತಲಪಾಡಿ ಟೋಲ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜೇಶ್ ಅವರು ಎಂದಿನಂತೆ ಕಲ್ಲಿನ ಕೋರೆಯಲ್ಲಿ ಈಜಲು ತೆರಳಿದ್ದರು.

ಮುಡಿಪು: ಗೋಡೆ ಕೊರೆದು ಜ್ಯುವೆಲ್ಲರಿಯಿಂದ ಚಿನ್ನಾಭರಣ ದರೋಡೆ

ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಎನ್‌ಐಎ ದಾಳಿ : ಐಸಿಸ್ ಸಂಪರ್ಕ ಶಂಕೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು

ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ಜನತೆ

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್‌ಟಿಪಿಸಿಆರ್ ಟೆಸ್ಟ್‌ಗೆ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಬಸ್ ಮತ್ತು

ಉಳ್ಳಾಲದಲ್ಲಿ ಕಾರು ಚಾಲಕನ ಅವಾಂತರ: ಸರಣಿ ಅಪಘಾತ:ರಿಕ್ಷಾ ಚಾಲಕಗೆ ಗಾಯ

ಉಳ್ಳಾಲ: ಕಾರು ಚಾಲಕನ ಅವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರ ಸಮೀಪ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಹೋಂಡ ಸಿವಿಕ್ ಕಾರೊಂದು ಧಾವಿಸಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಢಿಕ್ಕಿ ಹೊಡೆದು ಬಳಿಕ ವೈದ್ಯ ವಿದ್ಯಾರ್ಥಿಗಳಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ಬದ್ಯಾರು ನಿವಾಸಿ

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ತಂಡದಿಂದ ಸೇವಾ ಕಾರ್ಯ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ

ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ

ಉಳ್ಳಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಉಳ್ಳಾಲದಲ್ಲಿ ಉಚಿತ ರಕ್ತದಾನ ಶಿಬಿರ

ಟೀಮ್ ಬಿ-ಹ್ಯೂಮನ್ ಹಾಗೂ ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರವು ಉಳ್ಳಾಲದ ಟಿಪ್ಪು ಸುಲ್ತಾನ್ ಕಾಲೇಜು ಅವರಣದಲ್ಲಿ ನಡೆಯಿತು. ಅವಿರತ ಬಿರುಗಾಳಿ ಹಾಗೂ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಸ್ಥಳೀಯ ಯುವಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಸುಮಾರು 100 ಯುನಿಟ್‌ಗಳಷ್ಟು ರಕ್ತವನ್ನು ಈ ಕಾರ್ಯಕ್ರಮದ ಮೂಲಕ ಸಂಗ್ರಹಿಸಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮೂಲಕ

ಬೆಂಕಿ ಅವಘಡ : ಎಸೆಸೆಲ್ಸಿ ವಿದ್ಯಾರ್ಥಿಗಳು ಸ್ಥಳಾಂತರ

ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಬೆಂಕಿ ಅವಘಡ ಸಂಭವಿಸಿದ ಲ್ಯಾಬ್ ಇದ್ದ ಕಟ್ಟಡದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರನ್ನೆಲ್ಲಾ ಡ್ಯುಟಿಯಲ್ಲಿದ್ದ ಶಿಕ್ಷಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಸರ್ವಿಸ್

ಕೋವಿಡ್ ಹಿನ್ನೆಲೆ ತಲಪಾಡಿ ಗಡಿಭಾಗದಲ್ಲಿ ತೀವ್ರಗೊಂಡ ತಪಾಸಣೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ