ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ
ಉಳ್ಳಾಲ: ಮನೆಗೆ ನುಗ್ಗಿದ ಕಳ್ಳರು ಲಕ್ಷ ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ವಿದೇಶದಲ್ಲಿ ವಾಸವಿರುವ ಸುಜಾತಾ ಎಂಬವರ ಮನೆಯಲ್ಲಿ ಕಳವು ನಡೆದಿದೆ.ಲಕ್ಷ ಬೆಲೆಬಾಳುವ ಮೂರು ಕಂಚಿನ ದೀಪಗಳನ್ನು ಕಳ್ಳರು ಕಳವು ನಡೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿರುವ ಬಗ್ಗೆ ತಿಳಿದು ಕಳ್ಳರು ಕೃತ್ಯ ಎಸಗಿದ್ದಾರೆ. ಹಿಂಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಸೊತ್ತುಗಳಿಗಾಗಿ ಹುಡುಕಾಡಿ ಬಳಿಕ ಏನೂ
ಉಳ್ಳಾಲ: ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಅವರು ಕುತ್ತಾರು ಕೊರಗಜ್ಜ ಕಟ್ಟೆಗೆ ಮಂಗಳವಾರ ಭೇಟಿ ನೀಡಿದರು. ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತ ಹಿನ್ನೆಲೆಯಲ್ಲಿ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿರುವ ನಟಿ ರಕ್ಷಿತಾ ಪ್ರೇಮ್, ಸದ್ಯ ಝೀ ಕನ್ನಡ ವಾಹಿನಿ ರಿಯಾಲಿಟಿ ಷೋನಲ್ಲಿ ಜಡ್ಜ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ರಕ್ಷಿತಾ
ಉಳ್ಳಾಲ: ಮಂಗಳೂರಿನ ನಂತೂರಿನಲ್ಲಿ ಕಾರ್ಯಚರಿಸುತ್ತಿರುವ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸೋಮೇಶ್ವರ ಕಡಲ ಕಿನಾರೆಯ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕ ಯು.ಟಿ ಖಾದರ್ ಸ್ವಚ್ಛ ಭಾರತ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಲೇಜಿನಲ್ಲಿ ಕಲಿತ ಪಾಠಗಳು ಆತನ ವ್ಯಕ್ತಿತ್ವ ರೂಪಿಸುತ್ತದೆ. ಅಲ್ಲಿ ಪಡೆದ ಶಿಕ್ಷಣವೇ ಅವರ ಮುಂದಿನ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆಯಾಗಬಲ್ಲದು.
ಉಳ್ಳಾಲ: ನಾಗುರಿ ಸಂಚಾರಿ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಲೇಡಿ ಹೋಂ ಗಾರ್ಡ್‍ಗೆ ಅಶ್ಲೀಲ ಹಾಗೂ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಹಳೇಕೋಟೆ ನಿವಾಸಿ ಮಹಮ್ಮದ್ ಹಾಸೀರ್ ಮತ್ತು ನಯೀಮ್ ಬಂಧಿತರು. ಇಬ್ಬರು ಕಾಲೇಜು ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಸೆ.25 ರಂದು ಉಳ್ಳಾಲದಿಂದ ಕಾಪಿಕಾಡುವಿಗೆ ರಾ.ಹೆ 66
ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಇದರ ಉದ್ಘಾಟನಾ ಸಮಾರಂಭ ಮುನ್ನೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು. ರಾಣಿಪುರ ಮೇರಿ ಚರ್ಚ್‌ನ ಧರ್ಮಗುರು ಜಯಪ್ರಕಾಶ್ ಡಿಸೋಜ ದೀಪ ಬೆಳಗಿಸಿ ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಸ್ಥೆಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸೇವೆಯ ಮೂಲಕ ಸಮಾಜದ ಅಭ್ಯುದಯಕ್ಕೆ ಒಂದು ಸಂಘಟನೆ. ಸೇವೆಯ ಆರಂಭದದಿಂದಲೇ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮಾಜದ ಅವಕಾಶಗಳನ್ನು ಪೂರೈಸಲು ಸಂಘಟನೆ ಶ್ರಮಿಸಲಿ ಎಂದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಸುರಿದ ಧಾರಾಕಾರ ಮಳೆಯಿಂದಾಗಿ ತೊಕ್ಕೊಟು ಫ್ಪೈಓವರ್ ಕೆಳಗಡೆಯ ಸರ್ವೀಸ್ ರಸ್ತೆಯು ನೀರಿನಿಂದ ಜಲಾವೃತಗೊಂಡಿತ್ತು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಇನ್ನು ಇದೇ ವೇಳೆ ರಸ್ತೆಯಲ್ಲಿ ನೀರು ತುಂಬಿದ್ದರಿಂದ ವ್ಯಕ್ತಿಯೋರ್ವ ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸುವ ದೃಶ್ಯ ಕಂಡುಬಂತು.
ಕೊಣಾಜೆ: ಬ್ಯಾರೀಸ್ ಗ್ರೂಪ್ ಆಯೋಜಿಸಿರುವ ‘ಗ್ರೀನ್ ವಾಕಥಾನ್ 2021’ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಮಂಗಳಾ ಸಭಾಂಗಣದ ಮುಂದೆ ಮುಂಜಾನೆ ಚಾಲನೆ ನೀಡಲಾಯಿತು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು ಸಪ್ತಾಹ’- ‘ಗ್ರೀನ್ ವಾಕಥಾನ್’ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಚಾಲನೆ ನೀಡಿದರು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು
ದೇರಳಕಟ್ಟೆ: ಅಸ್ಸಾಂ ಗೋಲಿಬಾರ್ ದೌರ್ಜನ್ಯ ಗ್ರಾಮಸ್ಥರ ಹತ್ಯೆ ಖಂಡಿಸಿ ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ದೇರಳಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ಡಿವೈ ಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಪ್ರತಿಭಟನೆ ಉದೇಶಿಸಿ ಮಾತನಾಡಿ ಅಸ್ಸಾಂ ದರಾಂಗ್ ಜಿಲ್ಲೆಯಲ್ಲಿ ಅಮಾನುಷವಾಗಿ ಪೆÇಲೀಸರು ನಾಗರಿಕನನ್ನು ಹತ್ಯೆ ನಡೆಸಿರುವುದು ಮಾನವ ಕುಲ ತಲೆತಗ್ಗಿಸಬೇಕಾದ ವಿಚಾರ. ಜನರ ಮನವೊಲಿಸದೆ ಭೂಮಿಯನ್ನು ಬಿಟ್ಟುಕೊಡಲು ಒತ್ತಡ ಹಾಕಿ ಕಸಿಯುವ ಪ್ರಯತ್ನ ನಡೆದಿದೆ ಎಂದು
ಉಳ್ಳಾಲ : ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ರಸ್ತೆ ದಾಟುವಾಗ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾರೆ















