Home ಕರಾವಳಿ Archive by category ಕಾಸರಗೋಡು (Page 3)

ಮಂಜೇಶ್ವರ : ಶಾಲು ಗ್ರೈಂಡರ್ ಗೆ ಸಿಲುಕಿ ಗೃಹಿಣಿಯ ದಾರುಣ ಸಾವು

ಮಂಜೇಶ್ವರ : ಗೃಹಿಣಿಯೊಬ್ಬಳು ಮಕ್ಕಳನ್ನು ಶಾಲೆಗೆ ಕಳಿಸಲು ತಿಂಡಿ ತಯಾರಿಸುವ ತರಾತುರಿಯಲ್ಲಿ ಶಾಲ್ ಗ್ರೈಂಡರ್ ಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಉಪ್ಪಳ ಗೇಟ್ ಅಪ್ನಾ ಗಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಉಪ್ಪಳ ಗೇಟ್ ಅಪ್ನಾ ಗಲ್ಲಿ ನಿವಾಸಿ ಮುಂಬೈಯಲ್ಲಿ ಉದ್ಯಮಿಯಾಗಿರುವ ಇಬ್ರಾಹಿಂ ಎಂಬವರ ಪತ್ನಿ ಮೈಮೂನ

ಮಂಜೇಶ್ವರ: ದರೋಡೆಗೆ ಯತ್ನ ಪ್ರಕರಣ: ಪರಾರಿಯಾಗಿದ್ದ ಓರ್ವನ ಸೆರೆ

ಮಂಜೇಶ್ವರ: ಬ್ಯಾಂಕ್ ದರೋಡೆಗೈಯಲು ಹೊಂಚು ಹಾಕಿ ಮಾರಕಾಯುಧಗಳ ಸಹಿತ ಕಾರಿನಲ್ಲಿ ಸಂಚರಿಸುತ್ತಿರುವ ಮಧ್ಯೆ ಊರವರು ಬೆನ್ನಟ್ಟಿ ಹಿಡಿಯುವಾಗ ಪರಾರಿಯಾದ ನಾಲ್ಕು ಮಂದಿ ಆರೋಪಿಗಳ ಪೈಕಿ ಒಬ್ಬನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಕಾಸರಗೋಡು ಪರಿಸರವಾಸಿಯಾದ ಈತ ಹಲವು ಕಳವು ಪ್ರಕರಣಗಳಲ್ಲಿ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.2024 ಫೆಬ್ರವರಿ 8ರಂದು ಅಡ್ಯನಡ್ಕದ ಕರ್ನಾಟಕ ಬ್ಯಾಂಕ್‌ ಶಾಖೆ ಕಳವು ಪ್ರಕರಣದ ಆರೋಪಿಗಳಲ್ಲಿ ಈತನೂ

ಮಂಜೇಶ್ವರ: ಕುಖ್ಯಾತ ಕಳ್ಳರ ತಂಡದ ಸೆರೆ: ಠಾಣಾಧಿಕಾರಿ ಇ ಅನೂಪ್ ನೇತೃತ್ವದಲ್ಲಿ ಕಾರ್ಯಾಚರಣೆ

ಮಂಜೇಶ್ವರ : ಮಂಜೇಶ್ವರ ಠಾಣಾಧಿಕಾರಿ ಇ ಅನೂಪ್ ರವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಭಾನುವಾರ ಮುಂಜಾನೆ ಮಜೀರ್ಪಳ್ಳದಲ್ಲಿ ಕುಖ್ಯಾತ ಕಳ್ಳರ ತಂಡವೊಂದನ್ನು ಸೆರೆ ಹಿಡಿಯಲಾಗಿದೆ. ಪೆಟ್ರೋಲಿಂಗ್ ನಡೆಸುತ್ತಿರುವ ಮಧ್ಯೆ ಕಾರೊಂದನ್ನು ತಡೆದು ತಪಾಸಣೆ ನಡೆಸುತ್ತಿರುವ ಮಧ್ಯೆ ಕಳ್ಳರ ತಂಡ ಸೆರೆಯಾಗಿದೆ.ಉಳ್ಳಾಲದ ಫೈಸಲ್, ತುಮಕೂರಿನ ಸಯ್ಯದ್ ಅಮಾನ್ ಎಂಬಿವರನ್ನು ಸೆರೆ ಹಿಡಿಯಲಾಗಿದೆ. ಇವರಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಪರಾರಿಯಾದವರಿಗೆ ಶೋಧ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಮಂಜೇಶ್ವರ : ತೋಡಿಗೆ ಮಗುಚಿದ ಶಾಲಾ ವಾಹನ – ಹಲವರಿಗೆ ಗಾಯ

ಮಂಜೇಶ್ವರ : ಶಾಲಾ ವಿದ್ಯಾರ್ಥಿ ಹಾಗೂ ಅದ್ಯಾಪಿಕೆಯರನ್ನು ಹೇರಿ ಕೊಂಡು ಹೋಗುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದು 6 ವಿದ್ಯಾರ್ಥಿಗಳು ಹಾಗೂ ಒಬ್ಬಳು ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಮಂಜೇಶ್ವರ ಪಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ವಾಹನ ಶಾಲಾ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕೊಂಡೊಯ್ಯುತ್ತಿರುವ ಮಧ್ಯೆ ಶನಿವಾರ ಸಂಜೆ ಆರ್ವಾರ್ – ಅಂಬುತ್ತಡಿ ರಸ್ತೆಯ ಸೇತುವೆ ಸಮೀಪ ಚಾಲಕನ ನಿಯಂತ್ರಣ

ಖಾಲಿಯ ರಫೀಕ್ ಕೊಲೆ ಪ್ರಕರಣ: ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಜೇಶ್ವರ : ಉಪ್ಪಳ ಹಿದಾಯತ್ ನಗರದಲ್ಲಿ 2017ರ ಫೆಬ್ರವರಿ 14ರಂದು ನಡೆದ ಶಾಲಿಯ ರಫೀಕ್‌ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಪಿತ್ತಿದೆ. ಅಂದಿನ ದಿನ ಹಿದಾಯತ್ ನಗರದ ಕ್ಲಬ್‌ವೊಂದರಲ್ಲಿ 1ರಿಂದ 9ನೇ ಆರೋಪಿಗಳು ಒಟ್ಟಾಗಿ ಒಳಸಂಚು ರೂಪಿಸಿಕೊಂಡು, ಟಿಪ್ಪರ್ ಲಾರಿ ಬಳಸಿ ರಫೀಕ್ ಮತ್ತು ಅವನ ಸ್ನೇಹಿತರು ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಪೆಟ್ರೋಲ್ ಪಂಪ್

ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾದ ಮಂಜೇಶ್ವರ ಸ್ನೇಹಾಲಯ

ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಗಿದ್ದು, ಕಳೆದ ಹತ್ತು ವರ್ಷದ ಹಿಂದೆ ಕಾಣೆಯಾಗಿದ್ದ ಪ್ರವೀಣ್ ಪುನಃ ಹೆತ್ತವರ ಮಡಿಲು ಸೇರಿದ ಘಟನೆ ಸ್ನೇಹಾಲಯದಲ್ಲಿ ನಡೆಯಿತು. ಮಂಗಳೂರಿನ ಅತ್ತಾವರದ ಕೆ.ಮ್.ಸಿ ಆಸ್ಪತ್ರೆಯ ಬಳಿಯಿಂದ ಸ್ನೇಹಾಲಯದ ಸಹೋದರ ಜೋಸೆಫ್ ಕ್ರಾಸ್ತಾರಾವರು ಪ್ರವೀಣನನ್ನು ರಕ್ಷಿಸಿ ಸ್ನೇಹಾಲಯಕ್ಕೆ ದಾಖಲಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಆತ ಸ್ನೇಹಾಲಯದಲ್ಲಿ ಎಲ್ಲರ ಪ್ರೀತಿ ಪಾತ್ರನಾಗಿದ್ದ, ಆತನ ನಿಜ ಹೆಸರು ತಿಳಿಯದ

ಮಂಜೇಶ್ವರದ ಹೆದ್ದಾರಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ ಅವ್ಯವಹಾರ ಆರೋಪ

ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಗೆ ಅಡ್ಡಲಾಗಿ ಇತ್ತೀಚೆಗೆ ಸ್ಥಾಪಿತವಾಗಿದ್ದ ವಿದ್ಯುತ್ ಕಂಬ ಅಳವಡಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯರಿಂದ ವ್ಯಾಪಕ ಆರೋಪಗಳು ಕೇಳಿ ಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಈ ಪೋಸ್ಟ್‌ಗಳನ್ನು ಕಾಂಕ್ರೀಟೀಕರಣಗೊಳಿಸಿ ಅಳವಡಿಸಲಾಗುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರಿಗೆ ಭರವಸೆ ನೀಡಿದ್ದರು. ಆದರೆ ಸೋಮವಾರ ಸಂಜೆ ಏಳು ಗಂಟೆ ಸುಮಾರಿಗೆ ತಲಪಾಡಿಯಿಂದ ಉದ್ಯಾವರ ತನಕ

2023-24ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ

ಮೇ 9ರಂದು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.