ಉಪ್ಪಳ: ಕಲಾವಿದ, ನಿರ್ದೇಶಕ, ಪ್ರಸ್ತುತ ಅಧ್ಯಾಪಕರಾಗಿರುವ ಮೂಲತಃ ಉಪ್ಪಳ ಐಲ ನಿವಾಸಿಯೂ ಇದೀಗ ಮಂಗಳೂರು ಬಿಕರ್ಣಕಟ್ಟೆಯಲ್ಲಿ ವಾಸಿಸುತಿದ್ದ ನವೀನ್ ಚಂದ್ರ ಐಲ (54) ಹೃದಯಾಘಾತಗೊಂಡು ರಾತ್ರಿ ಸ್ವ-ಗೃಹದಲ್ಲಿ ನಿಧನರಾದರು. ಉಪ್ಪಳ, ಐಲ ಬೋವಿ ಶಾಲಾ ಬಳಿಯ ಶ್ರೀ ಗುತ್ಯಮ್ಮ ಭಗವತೀ ಕ್ಷೇತ್ರ ಸಮೀಪ ನಿವಾಸಿಯಾಗಿರುವ ದಿ.ಕಣ್ಣ ಪೂಜಾರಿ – ದಿ. ಲಕ್ಷ್ಮಿ ದಂಪತಿ
ಉಪ್ಪಳದ ಶ್ರೀ ಭಗವತೀ ಕ್ಷೇತ್ರದಲ್ಲಿ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಿತು. ಉಪ್ಪಳದ ಶ್ರೀ ಭಗವತೀ ಕ್ಷೇತ್ರ ಪುನರ್ ನಿರ್ಮಾಣಗೊಳ್ಳುತ್ತಿದೆ. ಶ್ರೀ ದೇವಳ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ ನೆರವೇರಿತು. ನಂತರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮುಂಬೈ ಉದ್ಯಮಿ ಹೇರಂಭ ಇಂಡಸ್ಟ್ರೀಸ್‍ನ ಸದಾಶಿವ
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿಯ 8 ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಪ್ಲಾಸ್ಟಿಕ್ ನಿಕ್ಷೇಪ ಕೇಂದ್ರ ಉಪಯೋಗ ಶೂನ್ಯವಾಗಿ ಸುಮಾರು 2 ವರ್ಷ ಕಳೆದರೂ ಯಾರೂ ಇತ್ತ ಕಡೆ ಗಮನ ಹರಿಸುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ. ಮಾಲಿನ್ಯ ನಿಕ್ಷೇಪ ಕೇಂದ್ರದಲ್ಲಿ ಶೇಖರಿಸಿಡಬೇಕಾದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ನಿಕ್ಷೇಪ ಕೇಂದ್ರದ ಹೊರಗಡೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಾಕುತ್ತಿರುವುದು ಸ್ಥಳೀಯರಲ್ಲಿ ಆತಂಕವನ್ನು ಹೆಚ್ಚಿಸಿದೆ. ನಿಕ್ಷೇಪ ಕೇಂದ್ರದ ಹೊರಗಡೆ
ಬಿಲ್ಲವ ಸೇವಾ ಸಂಘ(ರಿ ) ಕರಂದಕ್ಕಾಡ್ ಕಾಸರಗೋಡು, ಇದರ ಆಶ್ರಯದಲ್ಲಿ 169ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಶ್ರೀ ನಾರಾಯಣ ಗುರು ಸಭಾ ಮಂಟಪದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸಭೆಯಲ್ಲಿ ಶ್ರೀ ಕೇಶವ ಎ ಅಧ್ಯಕ್ಷತೆ ವಹಿಸಿದರು, ಹಿರಿಯ ವ್ಯಕ್ತಿತ್ವ ವಾದ ಸಂತನಡ್ಕ ತರವಾಡಿನ, ಬಾಡೂರ್ ಜಟಾದಾರಿ ದೈವದ ಪೂಜಾರಿಯಾದ ಕರಿಯಪ್ಪ ಪೂಜಾರಿ ಅವರನ್ನು ಫಲ ಪುಷ್ಪಗಳನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಅದೇ ರೀತಿ ರಮಾನಂದ ಬಂಗೇರ, ಕೊರಗಪ್ಪ ಪೂಜಾರಿ, ಬಾಬು
ಮಂಜೇಶ್ವರ : ಮಂಜೇಶ್ವರ ರೇಂಜ್ ಮದ್ರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್‍ನ ಆಶ್ರಯದಲ್ಲಿ ಬಿ ಸ್ಮಾರ್ಟ್ ಲೀಡರ್ಸ್ ಅಕಾಡೆಮಿ ಸಮ್ಮಿಲನ ಮಚ್ಚಂಪ್ಪಾಡಿ ಮದ್ರಸದಲ್ಲಿ ನಡೆಯಿತು. ಪಿ. ಎಚ್.ಅಬ್ದುಲ್ ಹಮೀದ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಅಬ್ದುಲ್ ಬಾಸಿತ್ ಹುದವಿ ಪ್ರಾರ್ಥನೆಗೈದರು. ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಕಾಸರಗೋಡು ಜಿಲ್ಲಾ ಮುಶಾವರ ಸದಸ್ಯ ಅಬ್ದುಲ್ ಮಜೀದ್ ದಾರಿಮಿ ಪಯ್ಯಕ್ಕಿ ಸಭೆಯನ್ನು ಉದ್ಘಾಟಿಸಿದರು. ಅಬ್ದುಲ್ ಅಝೀಝ್ ಹಾಜಿ ಮಚ್ಚಂಪಾಡಿ
ದೇಶದ ಐಕ್ಯತೆಯನ್ನು ಒಂದೇ ಸೂರಿನಡಿಯಲ್ಲಿ ತರುವ ಭಾರತದ ಅಭಿಮಾನದ ಆಚರಣೆಯಾದ 77 ನೇ ಸ್ವಾತಂತ್ರ್ಯೋತ್ಸವವನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಶತಮಾನೋತ್ಸವವನ್ನು ಆಚರಿಸುತ್ತಿರುವ ಕುಳೂರು ಶಾಲೆಯಲ್ಲಿ ಈ ವರ್ಷದ ಸ್ವಾತಂತ್ರ್ಯೋತ್ಸವವು ಸ್ಮರಣೀಯವಾಯಿತು. ಆಕರ್ಷಕ ಮೆರವಣಿಗೆಯೊಂದಿಗೆ ಆರಂಭವಾದ ಕಾರ್ಯಕ್ರಮವು ಬಳಿಕ ಶಾಲಾ ಶತಮಾನೋತ್ಸವ ಸಮಿತಿಯವರು ಕೊಡುಗೆ ನೀಡಿದ ನೂತನ ಧ್ವಜಸ್ತಂಭದ ಲೋಕಾರ್ಪಣೆ
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮುಗಿದ ನಂತರ ನಷ್ಟವಾಗುತ್ತಿರುವ ಆಟೋರಿಕ್ಷಾ, ಟ್ಯಾಕ್ಸಿ ನಿಲ್ದಾಣ ಹಾಗೂ ಬಸ್ ನಿರೀಕ್ಷಣಾ ಕೇಂದ್ರಗಳನ್ನು ಬದಲಾಯಿಸಲು ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ಕಾಸರಗೋಡು ಜಿಲ್ಲಾ ಮೋಟಾರು ಮತ್ತು ಇಂಜಿನಿಯರಿಂಗ್ ಕಾರ್ಮಿಕರ ಸಂಘ ಎಐಟಿಯುಸಿ ಜಿಲ್ಲಾ ಸಮಿತಿ ಅಧಿಕಾರಿಗಳನ್ನು ಒತ್ತಾಯಿಸಿದೆ. ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಕೆ.ವಿ.ಕೃಷ್ಣನ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಮುಸ್ತಫಾ ಕಡಂಬಾರ್ ಅಧ್ಯಕ್ಷತೆ
ಮಂಜೇಶ್ವರ: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆಸಂತಸವನ್ನು ವ್ಯಕ್ತಪಡಿಸಿ ಮೀಂಜ ಮತ್ತು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ಸುಂಕದಕಟ್ಟೆಯಿಂದ ಹೊರಟ ಮೆರವಣಿಗೆ ಮಜೀರ್ ಪಳ್ಳದಲ್ಲಿ ಸಮಾಪ್ತಿಗೊಂಡಿತು. ಸಂಭ್ರಮಾಚರಣೆಯಲ್ಲಿ ಮೀಂಜ ಮಂಡಲಾಧ್ಯಕ್ಷ ಶ್ರೀ ಇಕ್ಬಾಲ್ ಕಳಿಯೂರು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ಸ್ ಅಧ್ಯಕ್ಷ ಪಿ.
ಮಂಜೇಶ್ವರ : ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ಹಾಗೂ ಪೋಷಣೆ ಸಿಕ್ಕರೆ ಮಕ್ಕಳು ನ್ನಷ್ಟು ಉನ್ನತ ಮಟ್ಟಕ್ಕೆ ಏರುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆ ಬಿ.ಎಸ್ ನಗರದ ಭಿನ್ನ ಚೇತನರಾಗಿರುವ ಕೆ.ನಾಸರ್ ಹಾಗೂ ಜುಬೈದ ದಂಪತಿಗಳ ಪುತ್ರ ಅಬೂಬಕ್ಕರ್ ಮಕ್ಸೂದ್. ಉದ್ಯಾವರ ಅಲ್ ಸಖಾಫ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕ ತನ್ನ ಕೈ ಚಳಕದಿಂದ ಈಗಾಗಲೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿತ್ರಕಲೆಯಲ್ಲಿ ಅದ್ಭುತ ಸಾಧನೆಯನ್ನು ಮಾಡಿದ್ದಾನೆ. ಇಷ್ಟು
ಮಂಜೇಶ್ವರ : ರ್‍ಯಾಗಿಂಗ್ ಎನ್ನುವುದು ಮಾನವ ಹಕ್ಕುಗಳ ದುರುಪಯೋಗದ ವ್ಯವಸ್ಥಿತ ರೂಪವಾಗಿದೆ. ವಿಪರೀತ ಕಿರುಕುಳ ನೀಡುವುದರ ಜೊತೆಗೆ ಮನಸ್ಸಿನಲ್ಲಿ ಭಯವನ್ನು ಸೃಷ್ಟಿ ಮಾಡುತ್ತಿರುವ ರ್ಯಾಗಿಂಗ್ ತಡೆಯಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗುತ್ತಿರುವ ಮಧ್ಯೆಯೇ ಬೇಕೂರು ಕುಂಬಳೆ ಹೈಯರ್ ಸೆಕಂಡರಿ ಶಾಲೆಯಲ್ಲಿ ಪ್ಲಸ್ ವನ್ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಯನ್ನು ಬಸ್ಸು ನಿಲ್ದಾಣದಲ್ಲಿ ಹಿಗ್ಗಾ ಮಗ್ಗಾ ಥಳಿಸಿ ಹಲ್ಲೆ ಗೈದು ಗಾಯಗೊಳಿಸಲಾಗಿದೆ. ಪೆರ್ಮುದೆ




























