Home ಕರಾವಳಿ Archive by category ಪುತ್ತೂರು

ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್ ರೈರವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈರವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ”(REINVENTING KARNA: AN EXPLORATION OF SELECT RETELLINGS OF THE MAHABHARATA) ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ

ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ – ಬ್ಯಾಗ್ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು (ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ಸಹಯೋಗದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಕಡಬದ ಅಮೃತ ಸರೋವರದ ದಡದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷರಾದ ಕರುಣಾಕರ ಗೋಗಟೆ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಕಟ್ಟೆಮಾರ್ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಸಿನಿಮಾ ಕಟ್ಟೆಮಾರ್. ಜನವರಿ ೨೩ರಂದು ಕರಾವಳಿಯಾದ್ಯಂತ ಸಿನಿಮಾ ಬಿಡುಗಡೆಗೊಳಲ್ಲಿದೆ. ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್, ಹಾಡುಗಳಿಂದ ಸಖತ್ ಕುತೂಹಲ ಹುಟ್ಟಿಸಿದೆ. ಕೋಸ್ಟಲ್‌ವುಡ್‌ನಲ್ಲಿ ವಿಭಿನ್ನ ಬಗೆಯ ಕಥೆಯನ್ನು ಹೇಳಲು

ಅಸಹಾಯಕ ಕುಟುಂಬಕ್ಕೆ ಸೂರು: ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯ ಮಾನವೀಯ ಕಾರ್ಯಕ್ಕೆ ಶ್ಲಾಘನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಹಲವು ವರ್ಷಗಳಿಂದ ಟಾರ್ಪಲ್

ಗ್ರಾಮ ಪಂಚಾಯತ್‌ಗಳಿಗೆ ಅಧಿಕಾರ, ಅನುದಾನ ಮತ್ತು ಸಿಬ್ಬಂದಿ ಒದಗಿಸಿದರೆ ಮಾತ್ರ ಸಂವಿಧಾನಾತ್ಮಕ ವಿಕೇಂದ್ರೀಕರಣ: ಎಂಎಲ್‌ಸಿ ಕಿಶೋರ್ ಕುಮಾರ್

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಮಾನ್ಯ ಉಪಾಧ್ಯಕ್ಷರಾದ ಶ್ರೀ ಡಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನ ಕುಮಾರ ಪಾರ್ಕ್‌ನ ಗಾಂಧಿ ಭವನದಲ್ಲಿ ಆಯೋಜಿಸಲಾದ “ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಸಂವಿಧಾನ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾನೂನಿನ ಆಶಯದಂತೆ ಕಾರ್ಯನಿರ್ವಹಿಸಲು ಅನುಕೂಲವಾಗುವ ವಾತಾವರಣ ಸೃಷ್ಟಿಸುವುದು” ಎಂಬ ವಿಷಯದ ಕುರಿತು ನಡೆದ ಮಹತ್ವದ ಸಭೆಯಲ್ಲಿ, ವಿಧಾನ

ಕೊಕ್ಕಡ: ಹಳ್ಳಿಗೇರಿಯಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ : ಕೊಕ್ಕಡ ಗ್ರಾಮದ ಹಳ್ಳಿಗೇರಿ ಎಂಬಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜ.2 ರಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರ ಅಜಯ್ ಕುಮಾರ್(39) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟದ ಬಳಿಕ ವಾಸದ ಮನೆಯಲ್ಲಿ ಇದ್ದ ಅಜಯ್, ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತ ಅಜಯ್ ಅವರು

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಭವ್ಯ ಹುಟ್ಟೂರ ಗೌರವಾರ್ಪಣೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಶೀರೂರು ಮಠದ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿದ್ದು, ಮುಂದಿನ ಎರಡು ವರ್ಷಗಳ ಕಾಲ ಶ್ರೀ ಕೃಷ್ಣ ದೇವರ ಪೂಜಾ ದೀಕ್ಷೆಯನ್ನು ಸ್ವೀಕರಿಸಲಿದ್ದಾರೆ. ಈ ಮಹತ್ತರ ಜವಾಬ್ದಾರಿಯ ಅಂಗವಾಗಿ ಶ್ರೀಪಾದರು ಕೈಗೊಂಡಿರುವ ದೇಶ–ಗ್ರಾಮ ಪರ್ಯಟನೆಯ ಭಾಗವಾಗಿ ಜ.1ರಂದು ತಮ್ಮ ಪೂರ್ವಾಶ್ರಮದ ಹುಟ್ಟೂರಾದ ನಿಡ್ಲೆ ಗ್ರಾಮಕ್ಕೆ ಆಗಮಿಸಿದರು. ಶ್ರೀಪಾದರ

ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, ಮರ ಹಾಗೂ ಚಾಲಕ ವಶಕ್ಕೆ

ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರ ಸಾಗಾಟದ ವಿರುದ್ಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದು, ಮಂಗಳವಾರ ರಾತ್ರಿ ನಡೆಸಿದ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ–75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಪ್ರದೇಶದಲ್ಲಿ ಅಕ್ರಮವಾಗಿ ವಿವಿಧ ಕಾಡು ಜಾತಿಯ ಮರಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದೆ. ಉಪ್ಪಿನಂಗಡಿ ಅರಣ್ಯ ವಲಯದ ಅಧಿಕಾರಿಗಳ ತಂಡ ರಾತ್ರಿ ಗಸ್ತು ಕಾರ್ಯಾಚರಣೆ

ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್. ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಆಯ್ಕೆ

ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲೋಕೇಶ್ ಬಿ.ಎನ್., ಕಾರ್ಯದರ್ಶಿಯಾಗಿ ಸುಧಾಕರ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರವೀಣ್ ರಾಜ್ ಕೊಯಿಲ ಅವರು ಅವಿರೋಧವಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿಜಯ

ಪುತ್ತೂರಿನಲ್ಲಿ ಡಿ.20 ರಂದು ‘ಕಲಾರ್ಣವ-2025’ ಗಡಿ-ಸಂಸ್ಕೃತಿ ಉತ್ಸವ

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿಸೆಂಬರ್‌ 20 ರಂದು ಸಂಜೆ 4.30 ಗಂಟೆಯಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸಂಜೆ