Home ಕರಾವಳಿ Archive by category ಪುತ್ತೂರು (Page 11)

ಪುತ್ತೂರು : ಮಹಿಳೆಯ ತಲೆಬುರುಡೆ ಮತ್ತು ಎಲುಬುಗಳು ಪತ್ತೆ

ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ. ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ

ಉಪ್ಪಿನಂಗಡಿ: ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ನಿಧನ

ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಸಹೋದರ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ. ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ತನೆ

ಪುತ್ತೂರು : ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪ ಪೂ ಕಾಲೇಜಿನಲ್ಲಿ ನಡೆದ ‘ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25’ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಿಖಿಲ್ ಬಿ. ಕೆ ಇವರು ಪ್ರಥಮ

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ಕಬಡ್ಡಿ ತಂಡ ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ

ಪುತ್ತೂರು: ತಿರುಮಲ ಹೋಂಡಾ ಶೋರೂಂನಲ್ಲಿ ವಿಶೇಷ ಆಫರ್

ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದ ತಿರುಮಲ ಹೋಂಡಾ ಶೋರೂಂನಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಪುತ್ತೂರು, ಕಬಕ, ಕಡಬ, ಸುಳ್ಯ, ಉಪ್ಪಿನಂಗಡಿ ಶೋರೂಂಗಳಲ್ಲಿ ದ್ವಿಚಕ್ರ ವಾಹನಗಳಿಗೆ 700 ಅಧಿಕ ಸಿಬಿಲ್ ಶೇಕಡಾ 100ರಷ್ಟು ಧನ ಸಹಾಯ ನೀಡುತ್ತಿದ್ದಾರೆ. 6.66%ರಷ್ಟು ಬಡ್ಡಿ ದರ, ಸ್ಥಳದಲ್ಲೇ 14 ಸಾವಿರ ರೂಪಾಯಿ ವರೆಗೆ ಕ್ಯಾಶ್ ಬ್ಯಾಕ್ ಪಡೆಯುವ ಅವಕಾಶವಿದೆ. 60 ತಿಂಗಳ ಇಎಮ್‌ಐ ಸೌಲಭ್ಯವಿದೆ. ಈ ಎಲ್ಲಾ

ಪುತ್ತೂರು: ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ರೆ ಬಿಜೆಪಿಯಿಂದ ಬೃಹತ್ ಹೋರಾಟ: ಸಂಸದ ಕೋಟ

ಪುತ್ತೂರು: ರಾಜ್ಯದಲ್ಲಿ  12ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‌ಗಳೆಂದು ಗುರುತಿಸಲಾಗಿದ್ದು, ಇವುಗಳನ್ನು ರದ್ದು ಮಾಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಗೊತ್ತಾಗಿದೆ. ಇದರ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು. ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ  ಪುತ್ತೂರಿಗೆ ಬಂದಿದ್ದ

ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತ್ಯು

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಪುತ್ತೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಪುತ್ತೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮ ಬಿಳಿ ಅಂಗಿಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಿಯಲ್ಲಿ ಈಗ ಬಿಳಿ ಎಲ್ಲಿದೆ ಎಂದು ಹುಡುಕಬೇಕಿದೆ. ಬರೀ ಕಪ್ಪು  ಚುಕ್ಕೆಗಳೇ ತುಂಬಿವೆ ಎಂದು ಸಂಸದ ಕ್ಯಾö. ಬ್ರಿಜೇಶ್ ಚೌಟ ಆಪಾದಿಸಿದರು. ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ ಅವರು, ದಲಿತ ಭೂಮಿಯನ್ನು ನುಂಗಿದ ಸಿದ್ದರಾಮಯ್ಯ ಅವರು ಅದನ್ನು ತಮ್ಮ ಪತ್ನಿಯ

ಪುತ್ತೂರು ವಿಧಾನಸಭಾ ಕ್ಷೇತ್ರ ಬ್ಲಾಕ್ ಅಧ್ಯಕ್ಷರುಗಳ ನೇಮಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ರೈ ಅವರ