ನಿಮ್ಮ ಕನಸ್ಸು ನನಸ್ಸಾಗುವ ಸುವರ್ಣವಕಾಶ ಬಂದೇ ಬಿಟ್ಟಿದೆ. ಕಡಿಮೆ ಕಂತಿನಲ್ಲಿ ನಿಮ್ಮ ಕನಸುಗಳು ಈಡೇರಲಿದೆ. ಈಗಾಗಲೇ ಅನೇಕ ಗ್ರಾಹಕರನ್ನು ಹೊಂದಿರುವ ಆಶೀರ್ವಾದ ಸಂಸ್ಥೆ ಕೇವಲ ಒಂದು ಸಾವಿರಕ್ಕೆ ಎರಡು ಮನೆಗಳನ್ನು ನೀಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ, ಇದರ ಜೊತೆಗೆ ಪ್ರತಿ ತಿಂಗಳು 10 ಜನರಿಗೆ ಚಿನ್ನದ ಗಿಫ್ಟನ್ನು ಪಡೆಯುವ ಅವಕಾಶವನ್ನು ಕಲ್ಪಿಸಿದ್ದಾರೆ.
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ
ಕೆಎಸ್‌ಆರ್‌ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ನೀಡದ ಸತಾಯಿಸುತ್ತಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಪುತ್ತೂರು, ಸುಳ್ಯ, ಮಡಿಕೇರಿ ಡಿಪೋಗಳ ಬಸ್ ಚಾಲಕರು ಬಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಬಸ್ ಚಾಲಕರು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಪರದಾಡಿದ ಘಟನೆಯೂ ನಡೆಯಿತು. ಕೆಎಸ್‌ಆರ್‌ಟಿಸಿ ಬಸ್‌ಗೆ ಕಾಂಟ್ರಾಕ್ಟ್ ಬೇಸ್‌ನಲ್ಲಿ ಚಾಲಕರನ್ನು ನೇಮಕ ಮಾಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್‌ಗಳು ಹೆಚ್ಚು ಸಂಚಾರ ನಡೆಸುತ್ತವೆ. ಇದೀಗ ಆ ಬಸ್
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ
ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಕಾರಣ ಪುತ್ತೂರು ವಾರ್ಡ್ ಸಂಖ್ಯೆ 13ರ ಸದಸ್ಯೆ ಶಶಿಕಲಾ ಸಿ.ಎಸ್ ಮತ್ತು ವಾರ್ಡ್ ಸಂಖ್ಯೆ ಚಿಕ್ಕಮುನ್ನೂರು 1ರ ಲೀಲಾವತಿ ಅವರಿಗೆ ಮಾತ್ರ ಅವಕಾಶವಿತ್ತು. ಬಿಜೆಪಿ ಪಕ್ಷದಿಂದ ಲೀಲಾವತಿ ಅಣ್ಣು ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಲು ಸೂಚನೆಯಂತೆ ಅವರು ಅಧ್ಯಕ್ಷ ಸ್ಥಾನ
ಪುತ್ತೂರಿನ ದರ್ಬೆಯಲ್ಲಿರುವ ಆಶೀರ್ವಾದ ಎಂಟರ್‌ಪ್ರೈಸೆಸ್ ನ 2.0ದ ಶುಭಾರಂಭ ಹಾಗೂ ಲೋಗೋ ಅನಾವರಣ ಮತ್ತು ೧೬೦ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವು ಅಗಸ್ಟ್ 25ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಆಶೀರ್ವಾದ ಎಂಟರ್‌ಪ್ರೈಸಸ್ 2.0 ಶುಭಾರಂಭಗೊಳ್ಳಲಿದೆ. ಈ ಹಿಂದೆ ವಿನೂತನ ಹಾಗೂ ವಿಶೇಷ ಬಹುಮಾನಗಳನ್ನು ಗ್ರಾಹಕರಿಗೆ ನೀಡುತ್ತಿದ್ದ ಆಶೀರ್ವಾದ ಎಂಟರ್ ಪ್ರೈಸಸ್ ಇದೀಗ ಮತ್ತೆ ಜನತೆಗಾಗಿ ವಿನೂತನ ಯೋಜನೆಗಳನ್ನು ಹೊತ್ತು ತಂದಿದೆ.ಪುತ್ತೂರಿನ ಬೈಪಾಸ್ ರಸ್ತೆಯ
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ನಸುಕಿನ ಜಾವ ಗುಡ್ಡ ಕುಸಿದ ಘಟನೆ ನಡೆದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಈಗಾಗಲೇ ನಗರಸಭೆ ಅಧಿಕಾರಿಗಳು, ಪೊಲೀಸರು ಸ್ಥಳದಲ್ಲಿ ಮಣ್ಣನ್ನು
ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಕರ್ನಾಟಕ ರಾಜ್ಯ ತುಳು ಅಕಾಡೆಮಿಯಿಂದ ಗೌರವ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷರಾದ ತಾರನಾಥ ಗಟ್ಟಿ ಕಾಪಿಕ್ಕಾಡ್ ರವರು ಶಾಸಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು
ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗಾರಿಕಾ ಕಂಪನಿಗಳನ್ನು ಸರಕಾರದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸುವಂತೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಬೃಹತ್ ಕೈಗಾರಿಕಾ ಮಂತ್ರಿ ಎಂ ಬಿ ಪಾಟೀಲ್ ಅವರಿಗೆ ಬೇಡಿಕೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸರಕಾರದ ಪಶುಸಂಗೋಪನ ಸಚಿವರಾದ k ವೆಂಕಟೇಶ್ ಅವರನ್ನು ಭೇಟಿಯಾಗಿ ಕೊಯಿಲಾ ಪಶು ವೈದ್ಯಕೀಯ ಕಾಲೇಜು ಶೀಘ್ರವಾಗಿ ಆರಂಭಿಸುವಂತೆ ಮತ್ತು ಸುಳ್ಯ ಕೊಡಿಯಾಲಬೈಲಿನಲ್ಲಿ ಖಾಸಗಿ




























