Home ಕರಾವಳಿ Archive by category ಪುತ್ತೂರು (Page 13)

ಪುತ್ತೂರು: ಸರ್ವೆ ಗೌರಿ ಹೊಳೆ ಬಳಿ ನಾಪತ್ತೆಯಾಗಿದ್ದ ಸನ್ಮಿತ್‌ ಮೃತದೇಹ ಪತ್ತೆ

ಪುತ್ತೂರು: ಸರ್ವೆ ಗೌರಿ ಹೊಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್‌ (21) ಮೃತದೇಹ ಪತ್ತೆಯಾಗಿದೆ.ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್‌ ಕಾಣೆಯಾಗಿದ್ದು, ಆತನ ಸ್ಕೂಟರ್‌ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು.

ಎಣ್ಮೂರು ಕೋಟಿ ದರ್ಶನ ಪಾತ್ರಿ ಗಿರೀಶ್ ಕುಟುಂಬಕ್ಕೆ ಧನ ಸಹಾಯದ ಚೆಕ್ ವಿತರಣೆ

ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇ‌ರ್ ಬಾಬು ಪೂಜಾರಿ ಅವರ ಪುತ್ರ ಗಿರೀಶ್ ಮೃತಪಟ್ಟಿದ್ದು, ಮೃತರ ಮನೆಗೆ ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಳ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್, ಉಪಾಧ್ಯಕ್ಷ ಹರೀಶ್ ಡಿ ಸಾಲಿಯಾನ್,ಕಾರ್ಯದರ್ಶಿ ಗಂಗಾಧರ ಪೂಜಾರಿ ಚೆಳ್ಯಾರ್ , ಜತೆ ಕಾರ್ಯದರ್ಶಿ ಗಣೇಶ್ ಪೂಜಾರಿ ಮೂಡು ಪೆರರ,ಪದಾಧಿಕಾರಿಗಳಾದ ಕುಮಾರ್ ಪೂಜಾರಿ ಇರುವೈಲ್, ದಾಮೋದರ ಪೂಜಾರಿ ಸಿದ್ದಕಟ್ಟೆ,

ಉಪ್ಪಿನಂಗಡಿ: ಕೆ ಎಸ್‌ ಆರ್‌ ಟಿಸಿ ಐರಾವತ ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ದುರಂತ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್‌ಗೆ ಬೆಂಕಿ ಹಿಡಿದ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದ್ದು, ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ

ಪುತ್ತೂರು: ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ !

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಷಯ ತಿಳಿದು

ಜನರು ಮಾರಕ ಕಾಯಿಲೆಗೆ ಬಲಿಯಾಗುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ:ಬಿ.ಎಂ. ಭಟ್

ಮಳೆಗಾಲದಲ್ಲಿ ಕೊಳಚೆ ಪ್ರದೇಶದ ಸ್ವಚ್ಚತೆ, ವೈರಸ್ ಉತ್ಪತ್ತಿ ಆಗುವ ಪ್ರದೇಶಗಳ ಗುರುತಿಸಿ ಕ್ರಿಮಿನಾಶಕ ಸಿಂಪಡಿಸುವುದು ಸೇರಿದಂತೆ ಜನರ ಆರೋಗ್ಯ ರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಯಾವುದೇ ರೋಗ ಹರಡದಂತೆ ರಕ್ಷಣೆ ಒದಗಿಸಬೇಕಾದ್ದು ಸರಕಾರದ, ಆರೋಗ್ಯ ಇಲಾಖೆಯ ಕರ್ತವ್ಯವಾಗಿದೆ. ಆದರೆ ಆರೋಗ್ಯ ಇಲಾಖೆ ಏನು ಮಾಡುತ್ತಿದೆ ಜನ ಡೆಂಗ್ಯೂ ಮೊದಲಾದ ಮಾರಕ ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದು ಸಿಪಿಐಎಂ ಮುಖಂಡ ಬಿ.ಎಂ.ಭಟ್ ತೀಕ್ಷ್ಣವಾಗಿ

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ – ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ

ಪುತ್ತೂರಿನ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ,ಕೆ ಸೀತಾರಾಮ ರೈ ಸವಣೂರು ಮಾಹಿತಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]