Home ಕರಾವಳಿ Archive by category ಪುತ್ತೂರು (Page 14)

ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ,ಆರೋಗ್ಯ ರಕ್ಷಾ ಸಮಿತಿ ಸಭೆ

ಪುತ್ತೂರು: ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು, ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು  ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರೋಗ್ಯ

ಬನ್ನೂರು: ಧರೆಕುಸಿತಕ್ಕೊಳಗಾದ ಪ್ರದೇಶಕ್ಕೆ ಶಾಸಕರ ಭೇಟಿ: ಗರಿಷ್ಠ ಪರಿಹಾರ ನೀಡುವಂತೆ ಸೂಚನೆ

ಪುತ್ತೂರು;ಧರೆ ಕುಸಿದು ಮನೆಗೆ ಹಾನಿಯದ ಬನ್ನೂರು ಜೈನರ ಗುರಿಗೆ ಶಾಸಕರಾದ ಅಶೋಕ್ ರ‍್ಯಯವರು ಸನಿವಾರ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮನೆ ಮಾಲಿಕ ಅಬ್ದುಲ್ ಮಜೀದ್‌ರವರು ನಡೆದ ಘಟನೆಯ ಬಗ್ಗೆ ಶಾಸಕರಲ್ಲಿ ವಿವರಿಸಿದರು. ಮನೆಯ ಗೋಡೆಗೆ ಧರೆ ಜರಿದು ಬಿದ್ದು ಮಕ್ಕಳು ಮಣ್ಣಿನಡಿಯಲ್ಲಿ ಬಿದ್ದರೂ ಪವಾಡ ಸದೃಶಪಾರಾಗಿದ್ದು ಮನೆ ಗೋಡೆ ಮತ್ತು ಮಾಡು ಸಂಪೂರ್ಣ ಜಖಂಗೊಂಡಿದೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ಶಾಸಕರಲ್ಲಿ

ವಿಟ್ಲ: ಎಲ್.ಎನ್.ಕೂಡೂರು ಇನ್ನಿಲ್ಲ

ವಿಟ್ಲ : ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು(67) ಅವರು ಜೂ.30ರಂದು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು.

ಬನ್ನೂರು : ಧರೆ ಕುಸಿತ ಮನೆಗೆ ಹಾನಿ

ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಾಸಕರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕರು ಬೆಂಗಳೂರಿನಲ್ಲಿದ್ದು ಘಟನಾ ಸ್ಥಳಕೆ ಶಾಸಕರ ಕಚೇರಿ ಸಿಬಂದಿಗಳು ಭೇಟಿ ನೀಡಿದ್ದು ಕುಟುಂಬಕ್ಕೆ ಕರೆಮಾಡಿದ ಶಾಸಕರು ಸಾಂತ್ವನ ಹೇಳಿದ್ದು ಸರಕಾರದಿಂದ ತಕ್ಷಣ ಪರಿಹಾರದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಒತ್ತಡ ರಹಿತ ಬದುಕನ್ನು ನಡೆಸಬಹುದು ಎಂದರು. ಕಾರ್ಯಕ್ರಮದ

ಉಪ್ಪಿನಂಗಡಿಯ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ

ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ. ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮೊದಲಿಗೆ ಫ್ಯಾನ್ಸಿ ಅಂಗಡಿಯಿಂದ ಹೊಗೆ ಕಾಣಿಸಿಕೊಂಡಿತ್ತು ಬಳಿಕ ಬೆಂಕಿ ವ್ಯಾಪಿಸಿತ್ತು ಎಂದು ಸ್ಥಳೀಯರು

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಅವರು ” ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ” ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ

ಉಡುಪಿಯ ಪುತ್ತೂರಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಎಂಬುವರೇ ಬಂಧಿತ ಅರೋಪಿಗಳು. ಉಡುಪಿಯ ಪುತ್ತೂರಿನಲ್ಲಿ ಜೂನ್ 15 ರ ರಾತ್ರಿ ಈ ಘಟನೆ ನಡೆದಿತ್ತು. ಶಬರಿ ಎಂಬಾತನಿಗೆ ಸೆಲೂನ್ ನೌಕರ ಚರಣ್ ಬೈದಿದ್ದ. ಇದೇ ವಿಚಾರವಾಗಿ ಮಾತುಕತೆಗೆ ಕರೆದು ಕೊಲೆ ಯತ್ನ ನಡೆಸಲಾಗಿತ್ತು. ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದ ಪ್ರವೀಣ್ ಮತ್ತು ತಂಡ ಚರಣ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ತಲವಾರು ಬೀಸಿದ್ದರು. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಸಂಗಡಿಗರು ಬೈಕ್ ಬಿಟ್ಟು

ಸರಕಾರದಿಂದ ನಾಮನಿರ್ದೇಶನಗೊಂಡ ವಿವಿಧ ಸಮಿತಿಗಳ ಸದಸ್ಯರಿಗೆ ಮಾಹಿತಿ ಕಾರ್ಯಗಾರ

ಸರಕಾರದಿಂದ ನಾಮನಿರ್ದೇಶನಗೊಂಡ ವಿವಿಧ ಸಮಿತಿಗಳ ಸದಸ್ಯರಿಗೆ ಮಾಹಿತಿ ಕಾರ್ಯಗಾರವು ಪುತ್ತೂರು ಶಾಸಕರ ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಕಾರ್ಯಗಾರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ಜನರ ಸೇವೆ ಮಾಡುವ ಉದ್ದೇಶದಿಂದ ಸರಕಾರದಿಂದ ವಿವಿಧ ಸಮಿತಿಗಳ ರಚನೆ ಮಾಡಲಾಗಿದ್ದು, ಸಮಿತಿಯ ಪ್ರತಿಯೊಬ್ಬ ಸದಸ್ಯರೂ ತಮ್ಮ ಸಮಿತಿಯ ಕಾರ್ಯವೈಖರಿಯನ್ನು ತಿಳಿದುಕೊಂಡು ಕೆಲಸ ಮಾಡಬೇಕು ಎಂದರು. ಸರಕಾರದಿಂದ ನಾಮ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬ್ರಿಜೇಶ್ ಚೌಟ ಭೇಟಿ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ