ಪುತ್ತೂರು: ಭಾರತವನ್ನು ಜಗತ್ತಿಗೇ ನಾಯಕತ್ವ ಸ್ಥಾನದಲ್ಲಿ ನಿಲ್ಲಿಸಿರುವ ನರೇಂದ್ರ ಮೋದಿಯವರ ವಿಚಾರದಲ್ಲಿ ಮೈಮರೆವು ಬೇಡ. ನಮ್ಮ ಗುರಿ, ಉದ್ದೇಶ, ಸಂಕಲ್ಪ, ಶ್ರಮ ಮೋದಿಯವರನ್ನು ಮತ್ತಷ್ಟು ವರ್ಷಗಳ ಕಾಲ ಪ್ರಧಾನಿಯಾಗಿಸುವುದೇ ಆಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಮಾಜಿ ಅಧ್ಯಕ್ಷರುಗಳಾದ ವಿಜಯ ಕುಮಾರ್ ಸೊರಕೆ, ಜಯಂತ್ ನಡುಬೈಲು, ಕೆ.ಪಿ. ದಿವಾಕರ್, ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಶ್ರೀಮತಿ ವಿಮಲಾ ಸುರೇಶ್, ಕಾರ್ಯದರ್ಶಿ ಚಿದಾನಂದ ಸುವರ್ಣ,
ಪ್ರಮುಖ ಸ್ಥಾನಮಾನಗಳನ್ನು ನೀಡುವ ವೇಳೆ ಮುಸ್ಲಿಂ ಸಮುದಾಯವನ್ನು ಅವಗಣಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ಶನಿವಾರ ಜರಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಕ್ಷದಲ್ಲಿ ತಮ್ಮ ಸಮುದಾಯದ ಮುಖಂಡರನ್ನು ಅವಗಣಿಸಲಾಗಿದೆ ಎಂದು ಸಭೆ ಆರಂಭವಾಗುವ ಮುನ್ನ ಜಿಲ್ಲಾ ಮುಖಂಡರ ಜತೆ ಮುಸ್ಲಿಂ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ಆ ವೇಳೆ ಸಭಾಂಗಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ
ಕಡಬ: ಅಕ್ರಮ ದನ ಸಾಗಾಟದ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣವಾದ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು ಢಿಕ್ಕಿ
ಕಡಬ ತಾಲೂಕು ಪಂಚಾಯತ್‌ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯತ್‌ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು, ಅಲ್ಲಿಗೆ ಸಂಬಂಧಿಸಿದ ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ. ಜಯಣ್ಣ
ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಪ್ರಥಮ ದಿನವಾದ
ಕಳೆದ ಒಂದೂವರೆ ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮಹಿಳೆಯನ್ನು ಬಂಧಿಸಿ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು
ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ವಿಟ್ಲ ಪೊಲೀಸ್
ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.




























