ಪುತ್ತೂರು:ಕಳೆದ ಎರಡು ದಿನಗಳಿಂದ ಪುತ್ತೂರಿನ ಬಸ್ ನಿಲ್ದಾಣ ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಆಶ್ರಯವಿಲ್ಲದೆ ತಂಗುತ್ತಿದ್ದ ಒಂಟಿ ಮಹಿಳೆಯೊಬ್ಬರನ್ನು ರೋಟರಿ ಕ್ಲಬ್ ಪುತ್ತೂರು ಯುವದ ಮಾನವೀಯ ಕಾರ್ಯಚಟುವಟಿಕೆಯ ಮೂಲಕ ರಕ್ಷಿಸಿ, ಸೂಕ್ತ ಪುನರ್ವಸತಿ ಕಲ್ಪಿಸಿದ ಘಟನೆ ಸಮಾಜಕ್ಕೆ ಆಶಾಕಿರಣವಾಗಿ ಪರಿಣಮಿಸಿದೆ. ರೋಟರಿ ಕ್ಲಬ್ ಪುತ್ತೂರು ಯುವದ ಮಾಜಿ
ಪುತ್ತೂರು: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್‌ಪುಟ್ ಮತ್ತು 100 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಜಯಪ್ರಕಾಶ್ ಮರೀಲ್ ಮತ್ತು ಉಷಾರಾಣಿ ದಂಪತಿಯ ಪುತ್ರ. ಇವರು ರಾಮಕ್ಷತ್ರಿಯ ಸೇವಾ ಸಂಘ ಪುತ್ತೂರಿನ ಸದಸ್ಯ ಹಾಗೂ ರಾಮಕ್ಷತ್ರಿಯ ಯುವ ವೃoದದ ಸದಸ್ಯರು ಆಗಿರುತ್ತಾರೆ.
ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವAತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ಗು.ಇಷ್ಟು ವರ್ಷ ಯಾರಿಂದಲೂ ಆ ಭಾಗದ ರಸ್ತೆ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಶಾಸಕರು ಮುತುವರ್ಜಿ
ಪುತ್ತೂರು:ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತಿಬ್ಬರಿಗೆ ಅವಕಾಶ ನೀಡಲಾಗಿದೆ. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ನಾಗೇಶ್ ಟಿ.ಎಸ್ ಮತ್ತು ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿರುವ ಮಚ್ಚಿಮಲೆ ವಿರೂಪಾಕ್ಷ ಭಟ್ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ನೇಮಕ ಮಾಡಿದ್ದಾರೆ. ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿದ್ದ ಸುನಿಲ್ ದಡ್ಡು ಅವರು ಗ್ರಾಮಾಂತರ ಮಂಡಲದ ಪ್ರಧಾನ
ರೈತರಿಗೆ ಬೆಲೆ ವಿಮೆ ಹಣ ಜಮಾ ಕಡಿಮೆ ಪಾವತಿಯ ಕುರಿತು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಹಾಗೂ ಸುಳ್ಯ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರ ಸಭೆ ನಡೆಸಿ, ತೋಟಗಾರಿಕಾ ಇಲಾಖೆಯ ನಿರ್ಲಕ್ಷದಿಂದ ರೈತರಿಗೆ ಆದ ಅನ್ಯಾಯದ ಕುರಿತು ಗ್ರಾಮ ಮಟ್ಟದಿಂದ ಸಂಗ್ರಹಿಸಿದ ಮಾಹಿತಿಯನ್ನು, ಬೆಳಗಾವಿ ಅಧಿವೇಶನದಲ್ಲಿ ರೈತರ ಬೆಲೆ ವಿಮೆ ಪಾವತಿ ವಿಳಂಬ ಹಾಗೂ ತಾರತಮ್ಯದ ವಿರುದ್ಧ
ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI), ಡೈರೆಕ್ಟೊರೇಟ್ ಆಫ್ ಎಜುಕೇಶನ್, GNCT ಆಫ್ ಡೆಲ್ಲಿ ಇದರ ಆಶ್ರಯದಲ್ಲಿದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ನ 30 ರಿಂದ ಡಿ 5 ರವರೆಗೆ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ 2025 – 26 ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ 100ಮೀ ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯಕ್ಕೆ ಒಳಗಾಗಿ ಡಿಸೆಂಬರ್ 4ರಂದು ಸ್ವಗೃಹದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಶಿಕ್ಷಣ ಮುಗಿಸಿದ ನಂತರ ಪುತ್ತೂರಿನಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಅಧ್ಯಯನ ಮಾಡುತ್ತಿದ್ದ ಚೈತನ್ಯ ಅವರು ಬಿಳಿನೆಲೆ ಮಹಿಳಾ ಭಜನಾ ತಂಡದ ಸಕ್ರಿಯ ಸದಸ್ಯೆಯಾಗಿದ್ದರು.
ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು. ಇದೀಗ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ರವರು ಭೇಟಿ ನೀಡಿ ಪ್ರಸನ್ನ ಕುಮಾರ್ ಮಾರ್ತಾ ರಿಗೆ ಸಾಂತ್ವನ ಹೇಳಿದ್ದಾರೆ.ಸಂದರ್ಭದಲ್ಲಿ
ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು. ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ ಸಂಸ್ಥೆಯು ಜೇನನ್ನು ಬ್ರಾಂಡ್ ಮಾಡಿ ನಗರ ಮಾರುಕಟ್ಟೆಗೆ ತಲುಪಿಸುತ್ತಿದ್ದು, ಇದರಿಂದ ರೈತರಿಗೆ ಭಾರಿ




























