Home ಕರಾವಳಿ Archive by category ಪುತ್ತೂರು (Page 23)

ಪುತ್ತೂರು: ಪಂಜಳ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮುಂಡೂರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ನಡೆದ ಬಾಲ ಮೇಳದಲ್ಲಿ ಮಾತನಾಡಿದರು.ಪುಟ್ಟ ಮಕ್ಕಳಿಗೆ ಪೌಷ್ಠಿಕ

ಪೆರ್ನಾಜೆ: ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2023 -24

ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು “ಪೆರ್ನಾಜೆ ಪ್ರತಿಭಾ ಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಈ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು

ಪುತ್ತೂರು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲೆಯ ವೈಗಾ ಎಂ ರಾಷ್ಟ್ರಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ವೈಗಾ ಎಂ ಪ್ರಥಮ ಸ್ಥಾನವನ್ನು ಪಡೆದುರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ದರ್ಬೆ ಸುದರ್ಶನ್ ಎಂಟರ್ಪ್ರೈಸಸ್ ನ ಮಾಲಕರಾದ ಮನೋಜ್ ಟಿ ವಿ ಹಾಗೂ ಸಂಧ್ಯಾ ಎಂ ಇವರ ಪುತ್ರಿ.

ಪುತ್ತೂರು: ಹಿಂದೂ ವಿರೋಧಿ ಹೇಳಿಕೆಗೆ ವಿಹಿಂಪ ಖಂಡನೆ

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣವಾಗಿ, ಶ್ರೀರಾಮನ ಪ್ರತಿಷ್ಠಾಪನೆ ನಡೆಯಲಿರುವ ಸಂದರ್ಭದಲ್ಲಿ ಹಿಂದುಗಳು ಒಗ್ಗಟ್ಟಾಗಿ ಭಕ್ತಿಭಾವದಿಂದ ನಡೆದುಕೊಳ್ಳುವ ಕಾರ್ಯವಾಗುತ್ತಿದೆ. ಇದನ್ನು ನೋಡಿ ಹತಾಶೆಯ ಭಾವನೆಯಿಂದ ರಾಜ್ಯ ಸರ್ಕಾರದ ಪ್ರಮುಖರು ಹಿಂದು ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು, ಇದನ್ನು ವಿಶ್ವ ಹಿಂದು ಪರಿಷತ್ ಹಾಗೂ ಇತರ ಸಂಘ ಪರಿವಾರದ ಎಲ್ಲಾ ಸಂಘಟನೆಗಳು ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ

ಪುತ್ತೂರು: ಜ.6ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್

ಪುತ್ತೂರು: ದ.ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಮತ್ತು ಪುತ್ತೂರು ತಾಲೂಕು ವಾಲಿಬಾಲ್ ಸಂಸ್ಥೆ ಹಾಗೂ ಸುದಾನ ವಸತಿಯುತ ಶಾಲೆ ಆಶ್ರಯದಲ್ಲಿ 14,17,19 ವಯೋಮಾನದ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿ ಬಾಲ್ ಚಾಂಪಿಯನ್ ಶಿಪ್ 2023 ಜ.6ರಂದು ಬೆಳಗ್ಗೆ 9ಗಂಟೆಗೆ ಸುದಾನ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಬಿ.ಎಸ್. ಸತೀಶ್ ಕುಮಾರ್ ಹೇಳಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಸವಣೂರು ವಿದ್ಯಾಸಂಸ್ಥೆಯ ಸಂಚಾಲಕ

ಪುತ್ತೂರು: ಗುತ್ತಿಗೆದಾರ ವಿಜಯ್ ಕುಮಾರ್  ಆತ್ಮಹತ್ಯೆ

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ

ಪುತ್ತೂರು: ಕಾಡು ರಕ್ಷಣೆಯಲ್ಲಿ ಅರಣ್ಯ ಇಲಾಖೆ ಸೇನಾನಿಗಳ ಕೊಡುಗೆ ಅಪಾರ: ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್ ಮರಿಯಪ್ಪ

ಪುತ್ತೂರು; ಮಾನವನ ಮೂಲಭೂತ ವ್ಯವಸ್ಥೆಗೆ ಪೂರಕವಾಗಿರುವ ಕಾಡು ರಕ್ಷಣೆಯಲ್ಲಿ ಅರಣ್ಯ ಇಲಾಖೆಯ ತಳಹಂತದ ಸೇನಾನಿಗಳು ಜೀವಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಶೇ.೨೩ರಷ್ಟಿರುವ ಭೌಗೋಳಿಕಾ ಚೌಕಟ್ಟಿನಲ್ಲಿರುವ, ಎಲ್ಲದಕ್ಕೂ ಮೂಲವಾಗಿರುವ ಕಾಡನ್ನು ಕಾಪಾಡುವ ಜತೆಗೆ ಜೀವಜಗತ್ತಿನ ರಕ್ಷಣೆ ಮಾಡುತ್ತಿರುವ ಏಕೈಕ ಇಲಾಖೆ ಅರಣ್ಯ ಇಲಾಖೆ ಎಂದು  ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್ ಮರಿಯಪ್ಪ ಅಭಿಪ್ರಾಯ ಪಟ್ಟರು. ಕರ್ನಾಟಕ ರಾಜ್ಯ ಗಸ್ತು

ಪುತ್ತೂರು: ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್‌ಸಕ್ಯೂಟ್ ಅವಘಡ

ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತವೊಂದು ತಪ್ಪಿದೆ. ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ

ಪುತ್ತೂರು: ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ, ತೋಟ ನಾಶ

ಪುತ್ತೂರು : ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ ಮಾಡಿದ್ದು, ಅಪಾರ ನಷ್ಟ ಸಂಭಸಿದೆ ತೋಟದಲ್ಲಿದ್ದ ಅಡಿಕೆ,ಬಾಳೆ,ತೆಂಗು ಗಿಡಗಳು ನಾಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು ಜನತೆ ಅದರಲ್ಲೂ ಕೃಷಿಕರು ಆನೆ ದಾಳಿಯಿಂದ ಕಂಗಲಾಗಿದ್ದಾರೆ. ಪುತ್ತೂರಿನ ಪೆರ್ನಾಜೆ ಎಂಬಲ್ಲಿ ಬುಧವಾರ ತಡರಾತ್ರಿ ಕಾಡಾನೆ ಯೋಟಕ್ಕೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ಗಿಡ ಮರಗಳನ್ನು ನಾಶ ಮಾಡಿದೆ.

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆ

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ.ಡಾಂಬರ್ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್ ಕಾರ್ಯಕ್ಕೆ ಸಾಮಾಜಿಕ ತಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ತೇಜಸ್ ತಾನು ಹಾವನ್ನು ರಕ್ಷಿಸುವ ಕಾರ್ಯಾಚರಣೆಯ ವಿಡಿಯೋವನ್ನು ತಮ್ಮ ಗೆಳೆಯರೊಂದಿಗೂ ಹಂಚಿಕೊಂಡಿದ್ದಾರೆ. ಉರಿ ಬಿಸಿಲಿನಲ್ಲಿ