Home ಕರಾವಳಿ Archive by category ಪುತ್ತೂರು (Page 24)

ಕುಕ್ಕೆ ಸುಬ್ರಹ್ಮಣ್ಯ: ದೇವರ ನೌಕಾವಿಹಾರ, ಅವಭೃತೋತ್ಸವ

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಸಂಪನ್ನವಾಯಿತು.  ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿದಿವಿಧಾನ

ಕಡಬ:ರಬ್ಬರ್ ತೋಟದ ಕಾರ್ಮಿಕರನ್ನು ಬೆನ್ನಟ್ಟಿದ ಕಾಡಾನೆಗಳು: ಮೂವರಿಗೆ ಗಾಯ

ಕಡಬ: ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ. ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ

ಕಡಬ: ಅಪಘಾತದಲ್ಲಿ ಶಾಲಾ ಬಾಲಕ ಸ್ಥಳದಲ್ಲೇ ಮೃತ್ಯು

ಕಡಬ:ಕಳಾರ ಸಮೀಪ ಡಿ.15 ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ.ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ ಗಾಯದೊಂದಿಗೆ

ಕಡಬ: ಲೋಕಾಯುಕ್ತ ಜನಸಂಪರ್ಕ ಸಭೆ

ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಲೋಕಾಯುಕ್ತ ಮಂಗಳೂರು ವಿಭಾಗದ ಎಸ್‍ಪಿ ಸೈಮನ್ ಮಾತನಾಡಿ ಕಡಬ ತಾಲೂಕಿನಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡದೆ ಅಧಿಕಾರ ನಡೆಸದಿದ್ದರೆ. ಸರಕಾರಿ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ವಿನಕಾರಣ ತೊಂದರೆ ನೀಡಿದಲ್ಲಿ

ಪುತ್ತೂರು: ಅಯೋಧ್ಯೆಯ ಅಕ್ಷತೆ, ಉಪವಸತಿ ಕೇಂದ್ರದಲ್ಲಿ ವಿತರಣೆ

ಪುತ್ತೂರು: ಶ್ರೀ ರಾಮಜನ್ಮಭೂಮಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು. ಪುತ್ತೂರಿನ 45 ಉಪವಸತಿ ಕೇಂದ್ರದ ಪ್ರಮುಖರಿಗೆ ಪವಿತ್ರ ಅಕ್ಷತೆಯನ್ನು ಗುರುಪುರ ವಜ್ರದೇಹಿ ಮಠದ ರಾಜಶೇಖರನಂದ ಸ್ವಾಮಿಜೀಯವರು ವಿತರಿಸಿದರು.ಪುತ್ತೂರು ನಗರದಿಂದ 45 ಉಪವಸತಿ ಕೇಂದ್ರಗಳ ಪ್ರಮುಖರಿಗೆ ರಾಜಶೇಖರಾನಂದ ಸ್ವಾಮಿಜಿಯವರು ಅಕ್ಷತೆ

ಪುತ್ತೂರು : ಅಪಹರಣಕ್ಕೊಳಗಾದ ಯುವಕ ಕೊಲೆ ಶಂಕೆ

ಪುತ್ತೂರಿನಲ್ಲಿ ನಡೆದ ಯುವಕ ಹನುಮಂತ ಅಪಹರಣ ಪ್ರಕರಣದ ಬಗ್ಗೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ.ಪುತ್ತೂರಿನ ಕುಂಬ್ರ ಎಂಬಲ್ಲಿ ಜೆಸಿಬಿ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ನಿವಾಸಿ ಹನುಮಂತ (25) ಅವರನ್ನು ಮೂವರು ಅಪಹರಿಸಿ ಕೊಲೆ ಮಾಡಿ ಮೃತ ದೇಹವನ್ನು ಆಗುಂಬೆ ಘಾಟ್ ನಲ್ಲಿ ಎಸೆದಿದ್ದಾರೆ ಎಂಬ ಮಾಹಿತಿ ಬಂದಿದ್ದು, ಈ ಬಗ್ಗೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಅಲ್ಲದೆ ಮೃತ ದೇಹ ಎಸೆದಿರುವುದಾಗಿ ಹೇಳಲಾದ ಆಗುಂಬೆ

ಪುತ್ತೂರಿನ ಜೋಸ್ ಆಲುಕಾಸ್ ಗೆ ಐದನೇ ವರ್ಷದ ಸಂಭ್ರಮ

ಜೋಸ್ ಆಲುಕಾಸ್… ಚಿನ್ನಾಭರಣ ಸಂಸ್ಥೆಗಳ ಪೈಕಿ ಹೆಸರುವಾಸಿಯಾಗಿರುವ ಪ್ರತಿಷ್ಟಿತ ಅಂತರಾಷ್ಟ್ರೀಯ ಚಿನ್ನಾಭರಣ ಮಳಿಗೆ.. ಪುತ್ತೂರಿನ ಕೆಎಸ್ ಆರ್ ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸ್ತಾ ಇರೋ ಈ ಸಂಸ್ಥೆ ಈಗಾಗಲೇ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದು ಇದೀಗ ಸಂಸ್ಥೆಗೆ 5ವರ್ಷಗಳ ಸಂಭ್ರಮಾಚರಣೆ.‌ ಹಾಗಾಗಿ ಮಳಿಗೆಯಲ್ಲಿ ಡಿ.2ರಿಂದ ಸುವರ್ಣ ವರ್ಷ @5 ವಾರ್ಷಿಕ ಆಚರಣೆಗಳು ಪ್ರಾರಂಭವಾಗಲಿದೆ.. ಈ ಸಂಭ್ರಮಾಚರಣೆಯ ಪ್ರಯುಕ್ತ ರೂ. 50000

ಡಿ.3ರಂದು ಪುತ್ತೂರಿನಲ್ಲಿ ‘ನಾರಿ ಶಕ್ತಿ ಸಂಗಮ’

ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಸಹಯೋಗದಲ್ಲಿ ‘ನಾರೀ ಶಕ್ತಿ ಸಂಗಮ’ ಇದೇ ಡಿಸೆಂಬರ್ 3ರಂದು ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಮಹಿಳಾ ಸಮನ್ವಯದ ಸಂಚಾಲಕಿ ರೂಪಲೇಖ ಹೇಳಿದ್ರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವ್ರು, ‘ನಾರಿ ಶಕ್ತಿ ಸಂಗಮ’ ಸಮ್ಮೇಳನವನ್ನ ಮುಖ್ಯವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಲಾಗಿದೆ. ಸುಮಾರು 1000

ಪುತ್ತೂರು: ಕೆದಂಬಾಡಿಯಲ್ಲಿ ಆರಂಭಿಸಲುದ್ದೇಶಿಸಿದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಮತ್ತೆ ಗ್ರಹಣ..!!

ಪುತ್ತೂರು ಕಡಬ ಮತ್ತು ಸುಳ್ಯ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳ ನಿರ್ವಹಣೆ ಸಮಸ್ಯೆಗೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋಳೋಡಿ ಎಂಬಲ್ಲಿ ಆರಂಭಿಸಲುದ್ದೇಶಿಸಿರುವ 5 ಟನ್ ಸಾಮರ್ಥ್ಯದ ಸಮಗ್ರ ಒಣ ತ್ಯಾಜ್ಯ ನಿರ್ವಹಣಾ ಘಟಕ (ಎಂಆರ್‍ಎಫ್) ಬಹುತೇಕ ಕಾಮಗಾರಿ 6 ತಿಂಗಳ ಹಿಂದೆಯೇ ಪೂರ್ಣಗೊಂಡಿದ್ದರೂ, ಕೊನೆ ಹಂತದ ವ್ಯವಸ್ಥೆಗೆ ಗ್ರಹಣ ಆವರಿಸಿದೆ.

ಪುತ್ತೂರು: ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ವಿದ್ಯಾರ್ಥಿನಿ ಆತ್ಮಹತ್ಯೆ

ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲವಾದ ಬೇಸರದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಪುತ್ತೂರಿನ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಮೃತಪಟ್ಟವರು. ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್‌ನಲ್ಲಿ