ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನವೆಂಬರ್ 25 ಮತ್ತು 26ರಂದು ನಡೆಯಲಿರುವ ಕಂಬಳ ಕ್ರೀಡೆಗಾಗಿ ಕೋಣಗಳನ್ನು ಅದ್ದೂರಿ ಮೆರವಣಿಗೆ ಮೂಲಕ ಕರೆದೊಯ್ಯುವ ಕಾರ್ಯಕ್ರಮ ಉಪ್ಪಿನಂಗಡಿಯಿಂದ ಇಂದು ಆರಂಭಗೊಂಡಿದೆ. ಉಪ್ಪಿನಂಗಡಿಯ ಜೂನಿಯರ್ ಕಾಲೇಜು ಮೈದಾನದಿಂದ ನಿರ್ಗಮನ ಕಾರ್ಯಕ್ರಮ ನಡೆಯಿತು. ಸುಮಾರು 150 ಜೋಡಿ ಕೋಣಗಳನ್ನು ಕರಾವಳಿಯ ನಾನಾ ಭಾಗಗಳಿಂದ ಉಪ್ಪಿನಂಗಡಿಗೆ ಕರೆತಂದು
ಪುತ್ತೂರು: ರಾಜ್ಯದ 216 ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದೆ. 36 ಲಕ್ಷ ಹೆಕ್ಟೇರ್ ಕೃಷಿ ಮತ್ತು 3 ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬರಗಾಲದ ಛಾಯೆ ಆವರಿಸಿದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು 33 ಸಾವಿರ ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಇಷ್ಟೆಲ್ಲ ಆಗಿದ್ದರೂ ಸಿದ್ದರಾಮಯ್ಯ ಸರಕಾರ ಕೇವಲ 320 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಸರಕಾರ ಒಂದು ವಾರದಲ್ಲಿ ಕನಿಷ್ಠ 10 ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯ
ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ತಿಳಿಸಿದ್ದಾರೆ. ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ. ಸದ್ಯ ಅಪಘಾತದ ವಿಚಾರಕ್ಕೆ ಹತ್ಯೆಯಾಗಿದೆ ಎಂಬುದು ಸದ್ಯದ ತನಿಖೆಯಿಂದ ಹೊರ
ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಮುಂಜಾನೆ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.
ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ
ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ನೆಹರೂ
ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಚೋಮ ಅವರು ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು – ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದರು. ಬಳಿಕ
ಪುತ್ತೂರು: ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್, ದ.ಕ.ಜಿಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ವಿವಿಧ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ವೇದಿಕೆ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಪುತ್ತೂರಿನ ರೈಲ್ವೇ
ಅಕ್ಕಿ ಕಾಳಿನಲ್ಲಿ ಬರೆಯುವ ಸೂಕ್ಷ್ಮ ಕಲೆಯನ್ನು ಕರಗತ ಮಾಡಿಕೊಡಿರುವ ಕಲಾ ಸಾಧಕ, ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ಮೈಕ್ರೋ ಪರಮೇಶ್ ಅವರು ನಾಡಗೀತೆಯನ್ನು ಅಕ್ಕಿ ಕಾಳಿನಲ್ಲಿ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. 120 ನಿಮಿಷದಲ್ಲಿ 136 ಅಕ್ಕಿ ಕಾಳನ್ನು ಬಳಸಿಕೊಂಡು ನಾಡಗೀತೆ ಜೈ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ ಪದ್ಯವನ್ನು ಬರೆದು ಈ ಸಾಧನೆ ಮಾಡಿದ್ದಾರೆ. ಅತೀ ಕಡಿಮೆ ಅವಧಿಯಲ್ಲಿ ಕನಿಷ್ಠ ಅಕ್ಕಿ ಕಾಳಿನಲ್ಲಿ ನಾಡಗೀತೆ
ಪುತ್ತೂರು: ಬಡಗನ್ನೂರು ಗ್ರಾಮದ ಕ್ಯೂಲ ದ ಹಳೆಯ ಮನೆಯೊಂದರ ಅಟ್ಟದಲ್ಲಿದ್ದ ಅಡಿಕೆ ತುಂಬಿದ ಗೋಣಿಗಳನ್ನು ಕಳವು ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ, (20) ಹಾಗೂ ಜಯಚಂದ್ರ, (21) ಮತ್ತು ನಿಡ್ಪಳ್ಳಿ ಗ್ರಾಮದ ನಿವಾಸಿಗಳಾದ ಅಶೋಕ, (24) ಮತ್ತು ಪುನೀತ್ (20) ಬಂಧಿತರು ಕ್ಯೋಲ ಸಮೀಪದ ನವೀನ್ ರೈ ಎಂಬವರ ಹಳೆಯ ಮನೆಯ



























