Home ಕರಾವಳಿ Archive by category ಪುತ್ತೂರು (Page 3)

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ  ದನ ಸಾಗಾಟದ ಕಾರು ಡಿಕ್ಕಿ, ವ್ಯಕ್ತಿ ಮೃತ್ಯು-ಆಸ್ಪತ್ರೆಯ ಎದುರು ಪ್ರತಿಭಟನೆ-ಇಬ್ಬರು ಪೊಲೀಸ್ ವಶಕ್ಕೆ

ಕಡಬ: ಅಕ್ರಮ ದನ ಸಾಗಾಟದ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣವಾದ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ

ಕಡಬ ತಾ.ಪಂ.ಗೆ ಲೋಕಾಯುಕ್ತ ಪೊಲೀಸ್ ದಾಳಿ

ಕಡಬ ತಾಲೂಕು ಪಂಚಾಯತ್‌ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯತ್‌ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು, ಅಲ್ಲಿಗೆ ಸಂಬಂಧಿಸಿದ ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ. ಜಯಣ್ಣ

SSLC ವಾರ್ಷಿಕ ಪರೀಕ್ಷೆ: ಪುತ್ತೂರು, ಕಡಬದಲ್ಲಿ ಪ್ರಥಮ ದಿನ 42 ವಿದ್ಯಾರ್ಥಿಗಳು ಗೈರು

ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಪ್ರಥಮ ದಿನವಾದ

ಪುತ್ತೂರು : ಅಂತರ್ ರಾಜ್ಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ಕಳೆದ ಒಂದೂವರೆ ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮಹಿಳೆಯನ್ನು ಬಂಧಿಸಿ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ವಿಟ್ಲ: ಎರಡು ಅಂಗಡಿಗಳಿಗೆ ಕನ್ನ

ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ವಿಟ್ಲ ಪೊಲೀಸ್

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.

ಪುತ್ತೂರು : ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ ಅವರ ಆರೋಗ್ಯದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಏರು ಪೇರು ಉಂಟಾಗಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ನಿಧನ ಹೊಂದಿರುವುದಾಗಿ ಅವರ ಆಪ್ತ ವಲಯದವರು ತಿಳಿಸಿದ್ದಾರೆ.ನಿನ್ನೆ ರಾ ತ್ರಿಯವರೆಗೂ ಕ್ರಿಯಾಶೀಲರಾಗಿ ವಿವಿಧ ಚಟುವಟಿಕೆಗಳಲ್ಲಿ

ಪುತ್ತೂರು: ಕರ್ನಾಟಕ ಪೊಲೀಸ್ ರನ್: ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ

ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ-ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಪುತ್ತೂರು: ರಾಜ್ಯಾದ್ಯಂತ ನಡೆದ ಹಿಂದೂ ವಿರೋಧಿ ಕೃತ್ಯವನ್ನು ವಿರೋಧಿಸಿ ಪುತ್ತೂರಿನಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ದರ್ಬೆ ವೃತ್ತದ ಬಳಿ ಜಮಾವಣೆಗೊಂಡ ಸಮಿತಿ ಕಾರ್ಯಕರ್ತರು ದರ್ಬೆ ವೃತ್ತದ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸರು ಮುಂದಾದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ

ಅಪಘಾತಗೊಂಡ ಯುವಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ ಪ್ರಸಾದ್(27) ಮೃತಪಟ್ಟ ಯುವಕ. ನಗರದ ಬೈಪಾಸ್‌ನಲ್ಲಿರುವ ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ