Home ಕರಾವಳಿ Archive by category ಪುತ್ತೂರು (Page 33)

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ಧ : ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು. ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‍ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು

ಫಸಲ್ ಭಿಮಾ, ಬೆಳೆ ವಿಮಾ ಯೋಜನೆಯ ಕುರಿತು ಪುತ್ತೂರು ಶಾಸಕರಿಂದ ಜನತೆಗೆ ತಪ್ಪು ಮಾಹಿತಿ : ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ ಪೆರಿಯತ್ತೋಡಿ, ನಿತೀಶ್ ಶಾಂತಿವನ, ಉಪ್ಪಿನಂಗಡಿ ಸಿ.ಎ.ಬ್ಯಾಂಕ್

ಕಡಬ : ಬೃಹತ್ ಗಾತ್ರದ ಕಾಡುಕೋಣದ ಮೃತದೇಹ ಪತ್ತೆ

ಬೃಹತ್ ಗಾತ್ರದ ಕಾಡುಕೋಣದ ಮೃತದೇಹವು ಕಡಬ ಸಮೀಪದ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ. ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವು ಕಂಡುಬಂದಿದ್ದು, ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆಯವರು ಕಾಡುಕೋಣದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

ಫಸಲು ಭೀಮಾ ಯೋಜನೆಗೆ ಅಡಿಕೆ ಮತ್ತು ಕಾಳುಮೆಣಸು ಸೇರ್ಪಡೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಈ ಬಗ್ಗೆ ರೈತರು ನನ್ನ ಗಮನಕ್ಕೆ ತಂದಾಗ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮಂತ್ರಿ ಮಲ್ಲಿಕಾರ್ಜುನ ಇವರನ್ನು ಭೇಟಿಯಾಗಿ ನಿನ್ನೆ ನಡೆದ ಕ್ಯಾಬಿನೆಟ್ ನಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಫಸಲು ಭೀಮಾ ಯೋಜನೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಆರೋಪಿಗಳಿಗೆ ಜೂನ್30ರ ಒಳಗೆ ಶರಣಾಗಲು ಗಡುವು

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‍ಐಎ ಅಧಿಕಾರಿಗಳು ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ. ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಮುಟ್ಟುಗೋಲು ಮಾಡಲಾಗುವುದೆಂದು ಅನೌನ್ಸ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಎನ್‍ಐಎ ನ್ಯಾಯಾಲಯದ

ಕಡಬ : 40ಕೆಜಿ ತೂಕದ ಆಡನ್ನೇ ನುಂಗಲು ಯತ್ನಿಸಿದ ಹೆಬ್ಬಾವು

ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವೊಂದು ಆಡೊಂದನ್ನು ನುಂಗಲು, ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ. ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 40 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು, ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು. ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇ ಗೌಡರವರು 14ನೇ ಶತಮಾನದಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಅವರ ದೂರ ದೃಷ್ಠಿಯ ಕಲ್ಪಣೆಗಳು ಮಹತ್ವವಾಗಿದ್ದು 21ನೇ ಶತಮಾನದಲ್ಲಿಯೂ

ಕೊಲ್ಲಪದವು: ಗೋಫಾರ್ಮ್ ಕಟ್ಟಡ ನಿರ್ಮಾಣಕ್ಕೆ ಕಾನೂನು ಬದ್ಧ ಪರವಾನಿಗೆ : ರದ್ದುಗೊಳಿಸಲು ಅವಕಾಶ ಇಲ್ಲ: ರಾಮಕೃಷ್ಣ ಮೂಡಂಬೈಲು

ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಪುಣಚ ಗ್ರಾಮ ಪಂಚಾಯತ್ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದೆ. ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ ಎಂದು ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ತಿಳಿಸಿದ್ದಾರೆ. ಅವರು ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಪರವಾನಿಗೆ ನೀಡಿದ ವಿಚಾರವನ್ನು ಸಮರ್ಥಿಸಿ ಕೊಂಡರು. ಇದು ಹಸೈನಾರ್ ಮಾದುಮೂಲೆ ಎಂಬವರಿಗೆ

ಯುವಕರಿಂದ ಸಮಾಜ ಕಟ್ಟುವ ಕೆಲಸವಾಗಲಿ: ಸ್ಪೀಕರ್ ಯು.ಟಿ. ಖಾದರ್

ಪುತ್ತೂರು: ಯುವಕರು ಸಮಾಜ ಕಟ್ಟಬೇಕು ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯ ಉತ್ತಮ ನಡೆಯೊಂದಿಗೆ ಮುಂದುವರಿದಲ್ಲಿ

ಕಡಬ : ಅನಾರೋಗ್ಯದಿಂದ ಯುವಕ ನಿಧನ

ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ.