ಮಕ್ಕಳಿಗೆ ಶಿಕ್ಷಣ ಜೊತೆಗೆ ಸಂಸ್ಕಾರ ಕೊಟ್ಟು ಬದುಕುವುದು ಹೇಗೆ ಎಂದು ಅವರಿಗೆ ಕಲಿಸಿಕೊಟ್ಟಾಗ ಆ ಮಕ್ಕಳು ಮುಂದೆ ಜೀವನದಲ್ಲಿ ಜಯಗಳಿಸುತ್ತಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ ಭಟ್ ಹೇಳಿದರು. ಅವರು ಕಡಬದ ಕೇವಳ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಪ್ರಾರಂಭವಾದ ಆಂಗ್ಲ ಮಾಧ್ಯಮ ವಿಭಾಗದ ತರಗತಿಗಳ ಉದ್ಘಾಟನೆ
ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕರು ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯಚಟುವಟಿಕೆಯ ಬಗ್ಗೆ ಅಧ್ಯಕ್ಷರು ಶಾಸಕರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷರುಗಳಾದ ಅಜಮಾಡ ರಮೇಶ್ ಕುಟ್ಟಪ್ಪ, ಭವಾನಿ
ಪುತ್ತೂರು : ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಾರ್ವಜನಿಕರಿಂದ ಯಾವುದೇ ದೂರುಗಳಿಲ್ಲದ ರೀತಿಯಲ್ಲಿ ಅಸ್ಪತ್ರೆಯನ್ನು ಸಜ್ಜುಗೊಳಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಇಲೈಟ್, ಅಮೆರಿಕಾ ಫ್ಲೋರಿಡಾ ರೋಟರಿ ಕ್ಲಬ್ ನ್ಯೂ
ಪುತ್ತೂರು: ಆಶ್ರಯ ಮನೆಯ ಆಸೆಯಲ್ಲಿ, ಇದ್ದ ಮನೆಯನ್ನೂ ಕೆಡವಿ ಬೀದಿಗೆ ಬಿದ್ದ ಬಡ ಕುಟುಂಬವೊಂದು ಪುತ್ತೂರು ತಾಲೂಕಿನ ಮುಂಡೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕಡ್ಯಾ ಎಂಬಲ್ಲಿದೆ. ಮನೆ ಇಲ್ಲದ ಕಾರಣ ಕಳೆದ ಮೂರು ತಿಂಗಳಿನಿಂದ ಈ ಕುಟುಂಬ ಪ್ಲಾಸ್ಟಿಕ್ ಹೊದಿಕೆಯ ಗುಡಿಸಲಲ್ಲೇ ಬದುಕಬೇಕಾದ ಅನಿವಾರ್ಯ ಸ್ಥಿತಿಯಲ್ಲಿದೆ. ಕಡ್ಯ ಗ್ರಾಮದ ಮೋನಪ್ಪ ಎಂಬವರ ಕುಟುಂಬ ಆಶ್ರಯ ಮನೆಗಾಗಿ ಕಳೆದ ವರ್ಷ ಗ್ರಾಮ ಪಂಚಾಯತ್‍ಗೆ ಅರ್ಜಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಮೋನಪ್ಪ
ಪುತ್ತೂರು ತಾಲ್ಲೂಕು ಶಾಂತಿಗೋಡಿನ ನವಚೇತನ ಹಿರಿಯ ನಾಗರೀಕರ ಸಮುಚ್ಛಯದ ಸಹಯೋಗದಲ್ಲಿ ಬಹುಮುಖ ಪ್ರತಿಭೆಯ ದಿ. ಡಾ. ಬಡೆಕ್ಕಿಲ ಶ್ರೀಧರ ಭಟ್ ಅವರ ಪುಸ್ತಕದ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮವು ನವಚೇತನ ಹಿರಿಯ ನಾಗರೀಕರ ಸಮುಚ್ಛಯದಲ್ಲಿ ನಡೆಯಿತು. ಪುಸ್ತಕ ಅನಾವರಣ ಮಾಡಿದ ಮುಂಬಯಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ವಸಂತ ಕುಮಾರ್ ತಾಳ್ತಜೆ ಮಾತನಾಡಿ, ಡಾ. ಬಡೆಕ್ಕಿಲ ಶ್ರೀಧರ್ ಭಟ್ ಅವರದ್ದು ವೃತ್ತಿಯಲ್ಲಿ ವಿಜ್ಞಾನ ಕ್ಷೇತ್ರವಾದರೂ
ಪುತ್ತೂರು : ಮಣಿಪುರ ರಾಜ್ಯದಲ್ಲಿ ಮೀಸಲಾತಿ ಗಲಭೆ ಸೃಷ್ಠಿಸಿ ಚರ್ಚ್ ಮತ್ತು ಕ್ರಿಶ್ಚಿಯನರ ಮೇಲೆ ಮೇಲೆ ನಡೆಸಲಾಗಿರುವ ದಾಳಿಯನ್ನು ಖಂಡಿಸಿ ಮತ್ತು ಮಣಿಪುರದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಂತೆ ಆಗ್ರಹಿಸಿ ಪುತ್ತೂರಿನ ಆಡಳಿತ ಸೌಧದ ಎದುರು ಸಿಐಟಿಯು ಬೆಂಬಲಿತ ತಾಲ್ಲೂಕು ಬೀಡಿ ಕೆಲಸಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಗೌರವಾಧ್ಯಕ್ಷರಾದ ಕಾರ್ಮಿಕ ಮುಂದಾಳು
ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದೆ. ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ. ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್‍ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕ ಆಶೋಕ್ ಕುಮಾರ್ ರೈ ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಪುತ್ತೂರಿಗೆ ಉಪವಿಭಾಗಕ್ಕೆ ಎಸ್‍ಪಿ ಕಚೇರಿಯನ್ನು
ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಈಗಾಗಲೇ ಕಡಬದಲ್ಲಿ ಮೂರು ಮೆಷಿನ್ ಇದ್ದು ಸರಿಯಾಗಿ
ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ
ಕಡಬ: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ. ರೆಂಜಿಲಾಡಿಯ ನಿಡ್ಮೇರು ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ (18) ಮೃತ ವಿದ್ಯಾರ್ಥಿನಿ. ಮೃತ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ




























