ಕುಕ್ಕೆ ಸುಬ್ರಹ್ಮಣ್ಯ: ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇಶದಾಧ್ಯಂತ ಗಮನ ಸೆಳೆದ ಕಾಂತರ ಸಿನಿಮಾದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು
ಕೋಡಿಂಬಾಡಿಯ ಮತದಾನ ಕೇಂದ್ರದಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಮತ ಚಲಾವಣೆ.
ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ.8 ರಂದು ಸಂಜೆ 4 ಗಂಟೆಗೆ ನಡೆದಿದೆ. ಸತೀಶ್ ಅಮ್ಮಣ್ಣಾಯ ಎಂಬವರ ಮಕ್ಕಳಾದ ಹಂಷಿತ (14 ವರ್ಷ) ಮತ್ತು ಅವಂತಿಕಾ (10 ವರ್ಷ) ಎಂದು ಗುರುತಿಸಲಾಗಿದೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ, ಸ್ಥಳೀಯರ ಸಹಕಾರದಿಂದ ಇಬ್ಬರ ಮೃತ ದೇಹ ಪತ್ತೆ ಹಚ್ಚಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತಯಾಚನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಹೆಲಿಕಾಪ್ಟರ್ ಮೂಲಕ ನಗರದ ಹೊರವಲಯದ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ಗೆ ಆಗಮಿಸಿದ್ದಾರೆ. ಅಲ್ಲಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಅಂಚೆ ಕಚೇರಿ ಬಳಿಯಿಂದ ಕೋರ್ಟ್ ರಸ್ತೆಯಾಗಿ ಸಾಗಿ ಕಿಲ್ಲೆ ಮೈದಾನದ ತನಕ ಜಾಥಾ ನಡೆಯಲಿದೆ.
ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾರವರು ಇಂದು ಉಪ್ಪಿನಂಗಡಿ ಪೇಟೆ, ಶಾಂತಿನಗರ,ಸತ್ತಿಕಲ್ಲು, ಪೆರ್ನೆ, ಹಿರೇಬಂಡಾಡಿ, ಅಡೆಕಲ್, ಪೆರಿಯಡ್ಕದಲ್ಲಿ ಸಾರ್ವಜನಿಕ ಭಾಷಣ ನಡೆಸಿ ಭರ್ಜರಿ ಮತ ಪ್ರಚಾರ ನಡೆಸಿದರು. ಪುತ್ತೂರು ತಾಲೂಕಿನಲ್ಲಿ ಉಪ್ಪಿನಂಗಡಿ ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ಅಂತೆಯೇ ವ್ಯಾಪಾರ ವ್ಯವಹಾರದಲ್ಲಿ ಕೇಂದ್ರ ಬಿಂದು ಆಗಿರುವ ಪಟ್ಟಣ ಆದರೆ ಇಲ್ಲಿಗೆ ಯಾವುದೇ ಮೂಲಭೂತ ಸೌಕರ್ಯಗಳು ತಲುಪಿಲ್ಲ ಮುಖ್ಯ ಬಸ್ ನಿಲ್ದಾಣದಲ್ಲಿ ಒಂದು
ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 4 ದಿನ ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರವಾಗಿ ಇಂದು ಈಶ್ವರ ಮಂಗಲದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಾಯಿತು.ಈ ವೇಳೆ ಮುರಳೀಧರ ರೈ ಮಠಂತಬೆಟ್ಟು, ಅಬ್ದುಲ್ ರಹಮಾನ್ ಹಾಜಿ, ಎಂ ಬಿ ವಿಶ್ವನಾಥ ರೈ, ಮಹಮ್ಮದ್ ಬಡಗನ್ನೂರು, ಶ್ರೀ ಪ್ರಸಾದ್ ಪಾಣಾಜೆ, ಕಾವು ಹೇಮನಾಥ ಶೆಟ್ಟಿ, ಕೃಷ್ಣ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಮದ್ಯ ಮುಕ್ತ ಮತದಾನ ದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕುರಿತು ದೊಡ್ಡಕೊಪ್ಪ ಒಕ್ಕೂಟದ ಸದಸ್ಶರಿಗೆ ತಿಳುವಳಿಕೆ ನೀಡಿ ಕರಪತ್ರ ಹಂಚಲಾಯಿತು. ವಿಧಾನ ಸಭಾ ಚುನಾವಣಾ ವೇಳೆ ಮದ್ಯಪಾನದ ಆಮಿಷಕ್ಕೆ ಒಳಗಾಗಿ ಮತದಾನವನ್ನು ಮಾಡುವುದು ಹಾಗೂ ಮದ್ಯ ಪಾನದ ಆಸೆಯನ್ನು ತೋರಿಸಿ ಮತಕೇಳುವುದು ಇವೆರಡೂ ಸಮಾಜ ಘಾತುಕ ಚಟುವಟಿಕೆಗಳೇ ಆಗಿದ್ದು, ಇಂತಹ
ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ ವಿವಿಧ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಅಶೋಕ್ ರೈ ಬಳಿ ಹೇಳಿಕೊಂಡರು. ಕಳೆದ ಹಲವು ವರ್ಷಗಳಿಂದ ನಾವು ಮನೆ ಮಾಡಿಕೊಂಡಿದ್ದು
ಪುತ್ತೂರಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಂದ ನನ್ನ ಬೂತ್, ನಾನು ಅಭ್ಯರ್ಥಿ.. ಒಂದು ವಿಭಿನ್ನ ಪ್ರಯೋಗ ನಡೆಯಲಿದ್ದು, ಪುತ್ತೂರಿನ ವಿಧಾನಸಭಾ ಕ್ಷೇತ್ರzಗಳಿಗೆ ಕಾಂಗ್ರೆಸ್ ನಾಯಕರಿಂದ ಮತ್ತು ಕಾರ್ಯಕರ್ತರಿಂದ ಎಲ್ಲಾ 220 ಬೂತ್ ಗಳಲ್ಲಿಯೂ ಮನೆ ಮನೆಗಳ ಸಂಪರ್ಕಿಸುವ ಮೂಲಕ ಮತಯಾಚನೆ ನಡೆಯಲಿದೆ.
ಪುತ್ತೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವ ವಿರುದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‍ವೆಲ್ ಕಿಡಿ ಕಾರಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಯುವ ವಿಭಾಗ ರಾಷ್ಟ್ರಭಕ್ತ ಬಜರಂಗದಳ ಸಂಘಟನೆಯನ್ನು ನಿಷೇಧಿಸಲು ಪ್ರಸ್ತಾವನೆ ಮಾಡಿರುವುದು ರಾಜ್ಯದ ಹಿಂದುಗಳ




























