ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.
ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯಓಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡು ವಿತರಣೆ ಮಾಡುತ್ತಿದ್ದು ಬಿಜೆಪಿಗರ ಮನೆಗಳಿಗೂ ಕಾರ್ಡು ವಿತರಿಸಿ ಯಾವುದೇ ತಾರತಮ್ಯ ಮಾಡಬೇಡಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ
ಚುನಾವಣಾ ಸಂದರ್ಭದಲ್ಲಿ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವುದು ಮಾಮೂಲಿಯಾಗಿದೆ. ಆದರೆ ಈಗಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಕಾರ್ಯ ವೈಖರಿ ಜನರಿಗೆ ಬೇಸತ್ತು ಹೋಗಿದೆ. ಕುಮಾರ ಸ್ವಾಮಿಯ ಪಂಚರತ್ನ ಯೋಜನೆ ಜನರಿಗೆ ಭರವಸೆ ಮೂಡಿದೆ ಇದರಿಂದಾಗಿ ಬೇರೆ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಒಲವು ತೋರಿದ್ದರೆ. ಈ ಹಿನ್ನೆಲೆ ಪುತ್ತೂರು ವಿಧಾನಸಭಾ ಕ್ಷೇತ್ರದ ಚಿಕ್ಕಮೂಡ್ನೂರ್ ವಾರ್ಡ್‍ನ ತಾರಿಗುಡ್ಡೆಯಲ್ಲಿ ಜೆಡಿಎಸ್ ವಿಧಾನಸಭಾ
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ವಿವಿಧೆಡೆ ಮತಯಾಚನೆ ಮಾಡಿದರು. ಸಾರ್ವಜನಿಕ ಸಭೆ ಮತ್ತು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮತದಾರದಲ್ಲಿ ವಿನಂತಿಸಿದರು. ಅಶೋಕ್ ಕುಮಾರ್ ರೈ ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ
ದೇಶದ ಪ್ರಧಾನಿ ನರೇಂದ್ ಮೋದಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡುವ ಮುಖಾಂತರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದರು. ಪುತ್ತೂರಿನ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಿದರು. ಕೇಂದ್ರದ ಮೋದಿ ಸರಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಮಹಿಳೆಯರ
ಪುತ್ತೂರು; ದೇಶದಲ್ಲಿರುವ ಲೋಕತಂತ್ರ ವ್ಯವಸ್ಥೆಯಲ್ಲಿ ಯಾರು ಯಾವ ಪಕ್ಷವನ್ನೂ ಸೇರಬಹುದು. ಆದರೆ ಬಿಜೆಪಿಗೆ ಎದುರಾಳಿಗಳು ಯಾರೆಂಬುವುದು ಲೆಕ್ಕವಲ್ಲ. ಜನರ ವಿಶ್ವಾಸವೇ ನಮ್ಮ ಶಕ್ತಿಯಾಗಿದೆ. ಪಕ್ಷ ಸಿದ್ಧಾಂತಕ್ಕೆ ಬದ್ಧರಾದವರು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಹೇಳಿದರು. ಅವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಜನಾರೋಗ್ಯ ಕಾಪಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.
ಪುತ್ತೂರು: ನಾನು ಬಿಜೆಪಿ, ಸಂಘ ಪರಿವಾರ ಮತ್ತು ಅದರ ಸಿದ್ಧಾಂತಕ್ಕಾಗಿ ವರ್ಷಾನುಗಟ್ಟಲೆ ಕೆಲಸ ಮಾಡಿದ್ದೇನೆ. ಅದೇ ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ಇವತ್ತು ನನ್ನ ವಿರುದ್ಧ ತೀರಾ ಕೇವಲವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಸಂಘದ ಸಂಸ್ಕಾರದಲ್ಲಿ ಬೆಳೆದವರ ಬಾಯಿಂದ ಇಂಥ ಮಾತುಗಳೇ ಎಂದು ನನಗೆ ಆಶ್ಚರ್ಯವಾಗುತ್ತಿದೆ. ಈ ಎಲ್ಲ ಆರೋಪಗಳಿಗೆ ನಾನೇನು ಉತ್ತರ ಹೇಳುವುದಿಲ್ಲ. ಆರೋಪ ಮಾಡುವವರು ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬರಲಿ. ಅಲ್ಲಿ ಆಣೆ
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.




























