ಪುತ್ತೂರು: ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಅವರು ಎ.7 ರಂದು ಸ್ವಗೃಹದಲ್ಲಿ ನಿಧನರಾದರು. ದೇವಪ್ಪ ನೋಂಡಾ(74ವರ್ಷ)ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಪುತ್ತೂರಿನ ಮಿನಿ ವಿಧಾನ ಸೌಧದಲ್ಲಿರುವ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜ್ಜೀವನ್‍ರಾಮ್ ಅವರ 116ನೇ ಜನ್ಮ ದಿನಾಚರಣೆಯನ್ನು ನಡೆಸಲಾಯಿತು. ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಾಬು ಜಗಜ್ಜೀವನ್‍ರಾಮ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ ಬಾಬು ಜಗಜ್ಜೀವನ್‍ರಾಮ್ ಅವರು ದೇಶದ
ಪುತ್ತೂರು ತಾಲ್ಲೂಕು ಉಪ್ಪಿನಂಗಡಿ ಇಲ್ಲಿನ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್ , ಆರ್ ಕೆ ಜ್ಯುವೆಲ್ಲರ್ ಸೇರಿದಂತೆ ಹಲವು ಅಂಗಡಿಗಳಿವೆ. ಸ್ಥಳೀಯರು ಹಾಗೂ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕೆಲಸ ನಡೆದಿದೆ
ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೊದಲು ಕನಸು ಕಂಡವರೇ ನಾವು ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ್ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿದ್ದು, ಕಾಲೇಜು ಹೋರಾಟ ಅಭಿಯಾನ ಕಾಂಗ್ರೆಸ್ನ ಟೂಲ್ ಕಿಟ್ ಎಂದು ಆಪಾದಿಸಿದ್ದಾರೆ. ಒಂದು ವೇಳೆ ಬಿಜೆಪಿ ಮೆಡಿಕಲ್ ಕಾಲೇಜಿಗೆ ಮೊದಲು ಕನಸು ಕಂಡಿದ್ದು ನಿಜವೇ ಆಗಿದ್ದರೆ ಪುತ್ತೂರು ಶಾಸಕರು ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ `ಸೀಫುಡ್
ಕಡಬ ಖಾಸಗಿ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೋಡಿಂಬಾಳ ಗುಂಡಿಮಜಲು ನಿವಾಸಿ ಪರಿಕ್ಷಾ ಮುನ್ನಾ ದಿನವೇ ನಾಪತ್ತೆಯಾಗಿದ್ದು, ಗುರುವಾರ ಕೋಡಿಂಬಾಳ ಸಮೀಪದ ಕುಮಾರಾಧಾರ ನದಿಯ ನಾಕೂರ ಗಯದಲ್ಲಿ ಬಾಲಕನ ಶವ ಪತ್ತೆಯಾಗಿದೆ.ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಮಂಜುನಾಥ ಶೆಟ್ಟಿ ಅವರ ಪತ್ರ ಅದ್ವೆತ್ ಶೆಟ್ಟಿ ಮೃತಪಟ್ಟ ಬಾಲಕ, ಈತ ಕಡಬ ಖಾಸಗಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದು, ಕಲಿಕೆಯಲ್ಲಿ ಸ್ವಲ್ಪ ಹಿಂದೆ ಇದ್ದ, ಇದೇ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣ(ವ.50) ಎಂಬ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು
ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನೊಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ
ಪುತ್ತೂರು: ಪುತ್ತೂರು ನಗರದ ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು. ರೈಲ್ವೇ ಮೇಲ್ಸೇತುವೆಯ ಬಳಿ ತೆಂಗಿನ ಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪಥ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ
ಪುತ್ತೂರು: ಜಿಲ್ಲೆಯ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ಸು ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಮಾನ್ಯತೆಯನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದ ಪುತ್ತೂರು ಬಸ್ಸು ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ಬಸ್ಸು ನಿಲ್ದಾಣ ನಾಮಕರಣ
ಪುತ್ತೂರು: ಮಾ. 26 : ಪುತ್ತೂರಿನ ಜನರ ಬಹು ವರ್ಷದ ಕಾಲದ ಬೇಡಿಕೆಯಾದ ಎಪಿಎಂಸಿ ರಸ್ತೆಯಲ್ಲಿ 14 ಕೋಟಿ ವೆಚ್ಚದಲ್ಲಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣಗೊಂಡಿದೆ. ಇದರ ಲೋಕಾರ್ಪಣಾ ಕಾರ್ಯಕ್ರಮವು ಮಾರ್ಚ್ 26ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಶಾಸಕ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್. ಅಂಗಾರ, ರೈಲ್ವೆ ಮತ್ತು ಎಪಿಎಂಸಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. 4




























