ತನ್ನ ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಆರೋಪದ ಮೇಲೆ ಪುತ್ತೂರು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿವ್ಯಪ್ರಭಾ ಅವರ ವಿರುದ್ದ ಅವರ ಅಳಿಯ ನವೀನ್ ಗೌಡ ಅವರು ದೂರು ನೀಡಿದ್ದು, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ
ಪುತ್ತೂರು ಫೆ 5 : ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 15 ರಂದು ನಡೆದಿದೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ನಿವಾಸಿ ದಿ. ಈಶ್ವರ ಗೌಡ ರವರ ಪುತ್ರ ಜತ್ತಪ್ಪ ಗೌಡ ( 68 ವ) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತದ ಕುಡಿತದ ಚಟ ಹೊಂದಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ ಜತ್ತಪ್ಪ ಗೌಡರವರು ಸಂಜೆ 6.30ರ ಸುಮಾರಿಗೆ ಮನೆಯಲ್ಲಿದ್ದ ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಪುತ್ತೂರಿನ
ಕಡಬ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಹಲವು ವರ್ಷಗಳ ಬೇಡಿಕೆಯಾಗಿರುವ ಸರಕಾರಿ ಪದವಿ ಕಾಲೇಜು ಆರಂಭಿಸದೇ ಹೋದರೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಗಳ ಸಹಕಾರದೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಪದವಿ ಕಾಲೇಜು ಹೋರಾಟ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ರೈ ಕರ್ಮಾಯಿ ಅವರು ಎಚ್ಚರಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಡಬ ಪರಿಸರದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಲಭಿಸಬೇಕೆಂಬ
ಪುತ್ತೂರು: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ನಿಡ್ಪಳ್ಳಿ ನಿವಾಸಿ ದಿ. ಶ್ರೀಧರ ಭಟ್ ಎಂಬವರ ಪುತ್ರ ಮುರಳಿ ಕೃಷ್ಣ ಭಟ್ ( 35) ಮೃತಪಟ್ಟವರು. ಇವರು ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಹಿಂಪ ಅಧ್ಯಕ್ಷರಾಗಿದ್ದರು. ಸಂಟ್ಯಾರು-ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.
ಕಡಬ: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 14 ರಿಂದ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ರತ್ನಾಜೀ ಅವರು ತಿಳಿಸಿದರು. ಅವರು ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಫೆ. 14 ರಂದು ಸಂಜೆ 4 ಗಂಟೆಗೆ ಜರಗಲಿರುವ ಸಭಾ
ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಾಪು ಪಂಚಾಯತ್ ನ ಉಪ ಚುನಾವಣೆ ಗೆ ಭಾಜಪಾ ಕಡೆಯಿಂದ ಯತೀಶ್ ಡಿ.ಬಿ ನಾಮಪತ್ರ ಸಲ್ಲಿಕೆ
ಆರ್ಯಾಪು ಚುನಾವಣೆ ಅಧಿಕಾರಿ ತ್ರಿವೇಣಿ ರಾವ್ ರವರಿಗೆ ನಾಮಪತ್ರ ಸಲ್ಲಿಸಿದರು… ಈ ಸಂದರ್ಭದಲ್ಲಿ ಭಾಜಪಾ ದ.ಕ ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಭಾಜಪಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ಭಾಜಪಾ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ನಿತೀಶ್ ಕುಮಾರ್ ಶಾಂತಿವನ,ಆರ್ಯಾಪು ಪಂಚಾಯತ್ ಅಧ್ಯಕ್ಷರಾದ ಸರಸ್ವತಿ ಮೇಗಿನ ಪಂಜ,ಜಿಲ್ಲಾ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಿದರು. ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದ ಅಮಿತ್ ಶಾ ಅವರು ನಂತರ ಸಂದರ್ಶಕರ ಪುಸ್ತಕದಲ್ಲಿ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ
ಪುತ್ತೂರು : ಕ್ಯಾಂಪ್ಕೋ ಲಿಮಿಟೆಡ್, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ 5ನೇ ಬೃಹತ್ ಕೃಷಿ ಯಂತ್ರಮೇಳ ಮತ್ತು ಕನಸಿನ ಮನೆ ಉದ್ಘಾಟನಾ ಸಮಾರಂಭಕ್ಕೆ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕೃಷಿಯಂತ್ರ ಮೇಳವನ್ನು ದೀಪ
ಕಡಬ: ಐತ್ತೂರು ಗ್ರಾ.ಪಂ.ನ ಅಧ್ಯಕ್ಷಯಾಗಿದ್ದ ಶ್ಯಾಮಲಾ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಪದಚ್ಯುತಿಗೊಳಿಸಿದ ಬಿಜೆಪಿಯ ಮಹಿಳಾ ವಿರೋಧಿ ಕುಟಿಲ ರಾಜಕಾರಣ ನಾಚಿಕೆಗೇಡು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿದ್ದ ತನ್ನ ಅಪರೇಶನ್ ಕಮಲ ಕಾರ್ಯಾಚರಣೆಯನ್ನು ಗ್ರಾಮ ಮಟ್ಟಕ್ಕೂ ಇಳಿಸಿರುವ ಬಿಜೆಪಿ ಪಕ್ಷವು ಕಾಂಗ್ರೆಸ್ ಬೆಂಬಲಿತರನ್ನು
ಪುತ್ತೂರು : ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಿ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ ಸಮಾವೇಶ ನಡೆಯಲಿರುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗುರುವಾರ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಹಾಗೂ ಬರುವವರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಅನುಗ್ರಹಿಸಲು




























