Home ಕರಾವಳಿ Archive by category ಪುತ್ತೂರು (Page 53)

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮಮ ಪರಿವಾರ ಸಭೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಮಮ’ ಪರಿವಾರದ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ನಡೆಯಿತು.ಮುಳಿಯ ಕೇಶವಪ್ರಸಾದ್ ಅವರು ಮಾತನಾಡಿ ದೇವಳದಿಂದ 5 ಅಂಶಗಳ ಕಾರ್ಯಕ್ರಮಗಳ ಯೋಜನೆ ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ಮುರ ರೈಲ್ವೇ ಹಳಿ

ಮುರ ರೈಲ್ವೇ ಹಳಿ ಚರಂಡಿಯಲ್ಲಿ ಮೃತ ದೇಹ ಪತ್ತೆ

ಪುತ್ತೂರು: ಮುರ ರೈಲ್ವೇ ಸೇತುವೆ ಬಳಿಯ ಹಳಿ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆ ಡಿ.23 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಚರಂಡಿಯಲ್ಲಿ ಕೆಳಮುಖವಾಗಿ ಬಿದ್ದ ಕಾರಣ ಗುರುತು ಪತ್ತೆಯಾಗಿಲ್ಲ.. ರೈಲ್ವೇ ಪೆÇೀಲಿಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೇ ಎಂದು ಹೇಳಲಾಗಿದೆ. ಇದನ್ನೂ ಓದಿ: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ನಿಧನ – Guruvappa Bayar

ನೆಲ್ಯಾಡಿ: ಬಸ್ ಪಲ್ಟಿ – 15 ಮಂದಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊರಮೇರು ಎಂಬಲ್ಲಿ ಮಂಡ್ಯದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಡಿ.19 ರಂದು ಬೆಳಗ್ಗೆ 3:30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಏಳು ಜನರನ್ನು ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಗೆ ಹಾಗೂ ಎಂಟು ಜನರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೂರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ, ಪೋಲಿಸ್

ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ

ಕಡಬ: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ ಇದರ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕಡಬ ವಲಯ

ಕಡಬದಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ಶುಭಾರಂಭ

ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ ಡಾ. ಸಿಎ ಶಾಸ್ತ್ರಿ ಯವರು ದೇವರ ಕೃಪೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಮಾಲಕ ರಮೇಶ್ ಪಾದರೆ ಎಲ್ಲರ ಸಹಕಾರ ಕೋರಿದರು. ಸಂಸ್ಥೆಯ ಮಾಲಕರ ಧರ್ಮಪತ್ನಿಯಾದ ಶ್ರುತಿ ಟಿ

ಭಾರತ ಜೋಡೋ ಯಾತ್ರೆ ನೂರು ದಿನ ಪೂರ್ಣಗೊಂಡ ಹಿನ್ನೆಲೆ ಪುತ್ತೂರಿನಲ್ಲಿ ಸಂಭ್ರಮಾಚರಣೆ

ಪುತ್ತೂರು: ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೊಡೋ ಯಾತ್ರೆಯು ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿಯಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಂದು ದೇಶಕ್ಕಾಗಿ ಮಹಾತ್ಮ ಗಾಂಧಿ ಅವರು ಪಾದಯಾತ್ರೆ ನಡೆಸಿ ಜನರಿಗೆ ಜಾಗೃತಿ ಮೂಡಿಸಿದ್ದರು. ಇಂದು

ಟ್ರಾಕ್ಟರ್‍ಗೆ ಕಂಟೈನರ್ ಲಾರಿ ಢಿಕ್ಕಿ ; ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರು

ಉಪ್ಪಿನಂಗಡಿ: ಓವರ್‍ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಟ್ರಾಕ್ಟರ್‍ನ ಹಿಂಬದಿಯ ಟ್ರಾಲಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ್ದು, ಘಟನೆಯಿಂದ ಅದೃಷ್ಟವಶಾತ್ ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಅದೇ ಮಾರ್ಗವಾಗಿ

ಕಡಬ ಪ.ಪಂ. ವ್ಯಾಪ್ತಿಗೆ ನಗರೋತ್ಥಾನ ಯೋಜನೆಯಡಿ ವಿಶೇಷ ಅನುದಾನ

ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90 ಕೋಟಿ ರೂ. ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಬಳಿಕ ಕಡಬ ಸಿ.ಎ.ಬ್ಯಾಂಕ್ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ದೇಶ ಮತ್ತು ರಾಜ್ಯವನ್ನು ಆಳಿದ ಕಾಂಗ್ರೆಸ್ ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ದಿ

ಜೋಡುಕರೆ ಕಂಬಳ ಸಮಿತಿಯ ತಕರಾರು ಅರ್ಜಿ ವಿಚಾರಣೆ ಪೂರ್ಣ

ಪುತ್ತೂರು: ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಸಲ್ಲಿಸಿರುವ ಅರ್ಜಿ ಮತ್ತು ಪ್ರಾಣಿದಯಾ ಸಂಘದವರ ಅರ್ಜಿಗೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮತ್ತಿತರರು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿದೆ. ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ. ಆದ್ದರಿಂದ

ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಬೆಳ್ಳಿಹಬ್ಬ ಮಹೋತ್ಸವ

ರಿಕ್ಷಾ ಚಾಲಕರು ಸಮಾಜದ ಮುಖ್ಯವಾಹಿನಿಯಲ್ಲಿರುವವರುನಾವು ರಿಕ್ಷಾ ಚಾಲಕರೆಂಬ ಕೀಳರಿಮೆ ಬೇಡ. ಜೀವನದಲ್ಲಿ ಮುಂದೆ ಬರಬೇಕಾದರೆ, ಯಶಸ್ಸು ಕಾಣಬೇಕಾದರೆ ದುಶ್ಚಟಗಳಿಂದ ದೂರವಿರಬೇಕು. ನಾವು ನಮ್ಮ ವೃತ್ತಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದಾಗ ತನ್ನಿಂದ ತಾನಾಗಿ ಸಮಾಜದ ಗೌರವ ಪ್ರಾಪ್ತಿಯಾಗುತ್ತದೆ. ಗುಣಕ್ಕೆ ಮತ್ತು ವೃತ್ತಿಗೆ ಎಂದೂ ಬಡತನವಿಲ್ಲ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ಹೇಳಿದರು. ಪುತ್ತೂರಿನ