ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ, ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ ಪರಿಣಾಮವಾಗಿ ಕೆರೆಯ ಬದಿಯಲ್ಲಿರುವ ರಸ್ತೆ
ಪುತ್ತೂರು: ಪ್ರಸ್ತುತ ದೇಶದಾದ್ಯಂತ ಚಲಾವಣೆಯಲ್ಲಿರುವ 10 ರೂ. ಮೌಲ್ಯದ ಕಾಯಿನ್ ಆರ್‍ಬಿಐ ಸಂಯೋಜಿತ ಅಧಿಕೃತ ಚಲಾವಣೆಯಾಗಿದ್ದು, ಯಾರೂ ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ದೈನಂದಿನ ಹಣಕಾಸು ವ್ಯವಹಾರದಲ್ಲಿ ಬಳಸಬೇಕು ಎಂದು ಪುತ್ತೂರು ವರ್ತಕ ಸಂಘದ ಅಧ್ಯಕ್ಷ ಜೋ ಡಿಸೋಜ ಹಾಗೂ ಕೆನರಾ ಬ್ಯಾಂಕ್ ಪುತ್ತೂರು ವಿಭಾಗೀಯ ಮ್ಯಾನೇಜರ್ ನರೇಂದ್ರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.10 ರೂ. ಕಾಯಿನ್ ಚಲಾವಣೆಯಲ್ಲಿ ಇಲ್ಲ ಎಂಬ ಕುರಿತು ಸಾರ್ವಜನಿಕ ವಲಯದಲ್ಲಿ
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲ ತಿಂಗಳುಗಳ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆ ನಡೆದಿತ್ತು. ಆಗ ದೈವಜ್ಞರು ಸೂಚಿಸಿದ ವಿವಿಧ ಪರಿಹಾರ ಕಾರ್ಯಕ್ರಮಗಳು ಆ.26ರ ಬೆಳಗ್ಗೆ ಗಂಟೆ 9 ರಿಂದ ದೇಗುಲದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ವೇ ಮೂ ರವೀಶ ತಂತ್ರಿ, ಕುಂಟಾರುರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರಗಲಿರುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ. ಮಾಧ್ಯಮದೊಂದಿಗೆ
ಶ್ರೀಗಣೇಶೋತ್ಸವದ ಪ್ರಯುಕ್ತ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯು ನಡೆಸುವ ಚಿತ್ರಕಲೆ ಹಾಗೂ ಕರಕುಶಲ ಕಲೆಯ ಪ್ರದರ್ಶನ ಹಮ್ಮಿಕೊಂಡಿದೆ. ಆಗಸ್ಟ್ 27 ಮತ್ತು 28 ರಂದು ಬೆಳಗ್ಗೆ 10.00 ಗಂಟೆಯಿಂದ ಸಾಯಂಕಾಲ 6.00 ಗಂಟೆಯ ತನಕ ಕಾವೆರಿ ಕಾಂಪ್ಲೆಕ್ಸ್,ಕಲ್ಲಾರೆ, ಮುಖ್ಯರಸ್ತೆ, ಪುತ್ತೂರು, ಇದರಲ್ಲಿ ಗಣೇಶನ ನಾನಾ ರೀತಿ ಯ ಕರಕುಶಲ ಕಲೆ, ಕ್ಲೇ ಮೊಡೆಲಿಂಗ್ ಚಿತ್ರಕಲೆಗಳು ಇವೆ. ಇದನ್ನು ಸಂಸ್ಥೆಯ ವಿದ್ಯಾರ್ಥಿಗಳು ಮಾಡಿದ ಚಿತ್ರಕಲೆ ಹಾಗೂ ಕ್ಲೇ ಮೊಡೆಲಿಂಗ್
ಪುತ್ತೂರು ಮತ್ತು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ಪುತ್ತೂರು – ದರ್ಬೆಯಿಂದ ವಿಟ್ಲದ ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭ ವಿಟ್ಲದಲ್ಲಿ ನಡೆಯಿತು.ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ ಅವರು ಸಮಾರೋಪ ಭಾಷಣ ಮಾಡಿ, ಮಾತನಾಡಿ .ದೇಶವನ್ನು ಭಾಷೆ, ಜಾತಿ ಹೆಸರಿನಲ್ಲಿ ಒಡೆಯುವ ಕೆಲಸವಾಗುತ್ತಿದೆ.ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ
ಪುತ್ತೂರು : ಪುತ್ತೂರು ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಆ 19 ರಂದು ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ ಅವರನ್ನು ನೇಮಕ ಮಾಡಲಾಗಿದೆ. 2020ರ ಸೆಪ್ಟಂಬರ್ ತಿಂಗಳಿನಲ್ಲಿ ಡಾ.ಗಾನಾ ಪಿ.ಕುಮಾರ್ ಅವರು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ
ಪುತ್ತೂರು: ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ವ್ಯಕ್ತಿಯಾಗಿರದೆ ರಾಷ್ಟ್ರಕ್ಕೆ ಶಕ್ತಿಯಾಗಿದ್ದರು. ರಾಜಕೀಯವಾಗಿ ಜನಪ್ರತಿನಿಧಿ, ಕಾರ್ಯಕರ್ತ ಹೇಗಿರಬೇಕು ಎಂಬುದಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟವರು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಅವರು ನುಡಿನಮನ ಸಲ್ಲಿಸಿದರು. ವಾಜಪೇಯಿ ಅವರದ್ದು ಅಪರೂಪದ
ಕೇರಳ ಗಡಿಭಾಗ ತಲಪಾಡಿಯ ಚೆಕ್‍ಪೋಸ್ಟ್ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಲಾಯಿತು ಎಂದು ಎಡಿಜಿಪಿ ಅಲೋಕ್ ಕುಮಾರ್ ವಿವರ ನೀಡಿದರು. ಬಂಧಿತರನ್ನು ಸುಳ್ಯದ ಶಿಹಾಬುದ್ದೀನ್ (33), ರಿಯಾಜ್ ಅಂಕತ್ತಡ್ಕ (27), ಬಶೀರ್ ಎಲಿಮಲೆ (28) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಶಿಹಾಬ್ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಪೂರೈಕೆ ಮಾಡುವ ವೃತ್ತಿಯಲ್ಲಿದ್ದ. ರಿಯಾಜ್ ಎಂಬಾತ ಬೆಳ್ಳಾರೆ ಮತ್ತು ಸುಳ್ಯದಲ್ಲಿ ಚಿಕನ್ ಸಪ್ಲೈ ಕೆಲಸ ಮಾಡುತ್ತಿದ್ದ, ಇನ್ನೋರ್ವ ಬಂಧಿತ
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಲ್ಲಿ ಭಾಗಿಯಾದ ಮೂವರು ಹಂತಕರನ್ನು ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಜು 26 ರಂದು ಸಂಜೆ ಬೆಳ್ಳಾರೆಯ ಮಾಸ್ತಿ ಕಟ್ಟೆ ಬಳಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವೀಣ್ ಅವರನ್ನು ಕಡಿದು ಕೊಲೆ ಮಾಡಿದ್ದರು. ಈ ಬಗ್ಗೆ ಈಗಾಗಾಲೇ ಒಟ್ಟು 7 ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದರು . ಆದರೇ ಹತ್ಯೆಯ ಪ್ರಮುಖ
ಬೆಳ್ಳಾರೆ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಯುತ್ತಿದೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಎನ್.ಐ.ಎ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.




























