ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ.
ಉಪ್ಪಿನಂಗಡಿ : ಅ 2 : ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ( ಅ .2) ಸಂಜೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್ ಶರ್ಮಾ(32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡವರು . ಅಪಘಾತವೂ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರು ಹಾಸನ ಜಿಲ್ಲೆಯ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಎರಡು ದಿನದ ಬಳಿಕ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಪ್ರಕರಣದಲ್ಲಿ ನಗರ ಪೆÇಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಉಡುಪಿ ಉದ್ಯಾವರ ಸಮೀಪ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಜುಲೈ 28ರಂದು
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಮತ್ತು ಹಾರಿಸ್(42ವ) ರವರು ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಜು.28 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಪೆÇಲೀಸರು ಆರೋಪಿಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್
ಪುತ್ತೂರು:ಜಿಲ್ಲೆಯಲ್ಲಿ ಮೂರು ಹತ್ಯೆಗಳಾಗಿದ್ದು, ಈ ಮೂವರ ಮನೆಗೆ ತೆರಳಿ ಸಾಂತ್ವನ ಹೇಳಬೇಕಾಗಿದ್ದ, ಪರಿಹಾರ ನೀಡಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿಗಳ ಪಕ್ಷಪಾತ ಧೋರಣೆಯನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿರುವಾಗಲೇ ಸುರತ್ಕಲ್‍ನಲ್ಲಿ ಫಾಝಲ್ ಹತ್ಯೆಯಾಗಿದೆ. ಅಲ್ಲದೆ ಬೆಳ್ಳಾರೆಯಲ್ಲಿ ಮೃತ ಪ್ರವೀಣ್
ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿ ನೀಡಿರುವ ಕಾಳಿ ಸ್ವಾಮಿ ವರ್ತನೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅವರು ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮಂದೊಂದಿಗೆ ಮಾತನಾಡಿದರು. ಇಂತಹ ಹೇಳಿಕೆ ನೀಡುವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಅಡುಗೆ ಅನಿಲದಿಂದಾಗಿ ಸಂಭವಿಸಬಹುದಾದ ಭಾರಿ ಬೆಂಕಿ ದುರಂತವೊಂದು ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಘಟನೆ ಆ.1 ರ ನಸುಕಿನ ಜಾವ ನಡೆದಿದೆ. ಯೋಗೀಶ್ ರೈ ಮಾಲಕತ್ವದ ಜ್ಯೂಸ್ ಸೆಂಟರ್ ನೊಳಗೆ 3 ಗಂಟೆ ರಾತ್ರಿ ಸುಮಾರಿಗೆ ಬೆಂಕಿಯ ಜ್ವಾಲೆ ಅಂಗಡಿಯ ಸೊತ್ತುಗಳಿಗೆ ಹತ್ತಿ ಕೊಂಡಿತ್ತು. ಇದೇ ವೇಳೆ ರಾತ್ರಿ ಬಸ್ ನಿಲ್ಧಾಣದ ಪಾಯಿಂಟ್
ಪುತ್ತೂರು ಗೆಜ್ಜೆ ಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆ ಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತುಈ ಸಂದರ್ಭದಲ್ಲಿ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ ಪ್ರವೀಣ ರವರ ಕೆಲಸ-ಕಾರ್ಯಗಳ ಬಗ್ಗೆ ಗುಣಗಾನ
ಪುತ್ತೂರು :ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರವೀಣ್ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ಸಹಾಯಧನದ ಚೆಕ್ ವಿತರಿಸಿದರು. ಕುಮಾರಸ್ವಾಮಿ ಅವರು ಮನೆಯವರಿಗೆ 5 ಲಕ್ಷ ರೂ ಚೆಕ್ ವಿತರಿಸಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಎಂ.ಎಲ್.ಸಿ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಪುತ್ತೂರು ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ,
ಪುತ್ತೂರು :ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್

























