Home ಕರಾವಳಿ Archive by category ಪುತ್ತೂರು (Page 7)

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ.ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ)

ಕೂರತ್ ತಂಜಳ್ ಉರೂಸ್ ಅನ್ನದಾನ… ನಿರೀಕ್ಷೆಗೂ ಮೀರಿ ಹರಿದು ಬರುತ್ತಿರುವ ಜನಸಾಗರ

ಪುತ್ತೂರು: ಖುರತುಸ್ಸಾದಾತ್ ಕೂರತ್ ತಂಜಳ್ ಉರೂಸ್ ಪ್ರಯುಕ್ತ ಜೂ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಾರ್ವಜನಿಕ ಅನ್ನದಾನ ವಿತರಣೆ ನಡೆಯುತ್ತಿದ್ದು ರಾಜ್ಯದ ವಿವಿಧ ಕಡೆಗಳಿಂದ ಮತ್ತು ಕೇರಳದಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅನ್ನದಾನ ಸ್ವೀಕರಿಸುತ್ತಿದ್ದಾರೆ.ಬೆಳಗ್ಗಿನಿಂದಲೇ ಕೂರತ್‌ನಲ್ಲಿ ಜನರು ಕಿಕ್ಕಿರಿದು ಸೇರಿದ್ದು, ಮದ್ಯಾಹ್ನದ ವೇಳೆಯಂತೂ ಸವಣೂರುವರೆಗೂ ಟ್ರಾಫಿಕ್ ಜಾಂ ಉಂಟಾಗಿತ್ತು. ಸ್ವಯಂ ಸೇವಕರು ಮತ್ತು ಪೊಲೀಸರು ಟ್ರಾಫಿಕ್ ಕಂಟ್ರೋಲ್

ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ

ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಶ್ರೀ ಈಶ್ವರ ಭಟ್ ರವರು

ವಿದ್ಯಾಮಾತಾ ದಲ್ಲಿ SSC GD ಮತ್ತು ಅಗ್ನಿಪಥ್ ಗೆ ದೈಹಿಕ ಸದೃಢತೆಯ ಉಚಿತ ತರಬೇತಿ ಪ್ರಾರಂಭ

ಸರಕಾರಿ ನೇಮಕಾತಿಗಳು ಅದರಲ್ಲೂ ಅಗ್ನಿಪಥ್ ಮತ್ತು SSC GD ಸೇರಿದಂತೆ ಸಶಸ್ತ್ರ ಪಡೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಸದ್ಯ SSC GD ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬರುವ ದೈಹಿಕ ಸದೃಢತೆಯ ಪರೀಕ್ಷೆಗೆ (physical fitness) ತಯಾರಾಗುತ್ತಿರುವವರಿಗೆ ಮತ್ತು ಅಗ್ನಿಪಥ್ ನೇಮಕಾತಿಗೆ ಮೈದಾನ ತರಬೇತಿಯನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ ಅತ್ಯುತ್ತಮ ತರಬೇತಿಯ ಮೂಲಕ 26 ಯುವಕರು

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಸುರತ್ಕಲ್ ಮೂಲದ ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ ಮನೆಯಲ್ಲಿ ರೇಷ್ಮಾ

ಪುತ್ತೂರಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಗಾನಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆಯಲ್ಲಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಯ ಗರಿ

ಪೆರ್ನಾಜೆ:ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ).ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತುರಲ್ಲಿ ಜೂನ್ 15 ರಂದು ಗಣ್ಯರ ಸಮ್ಮುಖದಲ್ಲಿ ನಡೆಯಲಿರುವುದು. ಆ ವೇದಿಕೆಯಲ್ಲಿ ವಿಶಿಷ್ಟ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಗೆ, ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳನ್ನು

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಂಸ್ಥೆಯ ಆವರಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭೂಮಿಯ ಮೇಲಿನ ಜೀವ ವೈವಿಧ್ಯವನ್ನು ರಕ್ಷಿಸಲು ಪರಿಸರ ಪರಿಪೂರ್ಣವಾಗಿ ನಿರ್ಮಾಣಗೊಂಡಿದೆ; ಇಂದು ಮನುಷ್ಯನ ಸ್ವಾರ್ಥ, ದುರಾಸೆಯಿಂದಾಗಿ ಪರಿಸರ ಅಸಮತೋಲನಗೊಂಡಿದೆ. ಜೀವವೈವಿಧ್ಯವನ್ನು ಸಸ್ಯ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಕಡಬ: ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಸಮೀಪದ ಹಳೆನೇರೆಂಕಿ ಗ್ರಾಮದ ನೇರೆಂಕಿ ಎಂಬಲ್ಲಿ ತೋಟವೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ಜೂ.10ರಂದು ದಾಳಿ ನಡೆಸಿದ್ದಾರೆ.ಘಟನಾ ಸ್ಥಳದಿಂದ ವಾಹನ, ಕೋಳಿ ಹಾಗೂ ನಗದು ವಶಪಡಿಸಿಕೊಂಡಿದಲ್ಲದೆ, ಅಕ್ರಮ ಕೋಳಿ ಅಂಕದ ಪ್ರಮುಖ ರೂವಾರಿ ಸಹಿತ ವೇಳೆ ಮೂವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ನೇರೆಂಕಿ ನಿವಾಸಿ ಮೋಹನ್ ದಾಸ್ ರೈ (48 ವ),ಪೆರಾಬೆ ಗ್ರಾಮದ ಬೇಲ್ವಾಡಿ ನಿವಾಸಿ ರಾಧಕೃಷ್ಣ, (51 ವ) ಆಲಂಕಾರು

ಕಡಬ: ಮಳೆ ಬಂದು ವಾರ ಕಳೆದರೂ ರಸ್ತೆ ಸಂಪರ್ಕ ಇಲ್ಲದೆ ಜನತೆಯ ಪರದಾಟ

ಕಡಬ: ಕಡಬ ತಾಲೂಕು ಆಲಂಕಾರು ಗ್ರಾಮದ ಕಕ್ವೆ ಎಂಬಲ್ಲಿ ಮೇ 30ರಂದು ಸುರಿದ ಧಾರಕಾರ ಮಳೆಗೆ ರಸ್ತೆ ಕೊಚ್ಚಿ ಹೋಗಿ10 ಮನೆಗಳ  ಬಾಹ್ಯ ಸಂಪರ್ಕ ಕಳೆದುಕೊಂಡಿದೆ.  ಘಟನೆ ನಡೆದು ವಾರ ಕಳೆದರೂ ಸಮಸ್ಯೆ ಪರಿಹಾರವಾಗದೆ  ಜನ ಪರದಾಡುತ್ತಿದ್ದಾರೆ.                                     ಮೇ 30ರಂದು ಸಾಯಂಕಾಲದಿಂದ ತಡರಾತ್ರಿಯವರೆಗೆ ತಾಲೂಕಿನ ಕುಂತೂರು, ಆಲಂಕಾರು, ಸವಣೂರು, ಕೊಯಿಲ, ರಾಮಕುಂಜ, ಕಾಣಿಯೂರು ಮೊದಲಾದೆಡೆ ಎಡಬಿಡದೆ ಧಾರಕಾರ ಮಳೆಯಾಗಿತ್ತು. ಪರಿಣಾಮ ಬಹುತೇಕ

ಪುತ್ತೂರು: ಎವಿಜಿ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ಯೋಧರಿಗೆ ಅಭಿನಂದನೆ

ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಲಾಯಿತು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕಿಯಾದ ಶ್ರೀಮತಿ ಸಿಂಧು .ವಿ.ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪರಿಸರದ ಮಹತ್ವವನ್ನು ತಿಳಿಸಿದರು. ನಮ್ಮ ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿ ಹಾಗೂ ಜಾಗತಿಕ ತಾಪಮಾನ ಏರುವುದಕ್ಕೆ ಇರುವ ಅನೇಕ ಕಾರಣಗಳನ್ನು