ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು. ಹಲ್ಲೆ ಕೃತ್ಯದ ಬಗ್ಗೆ ಮೆಸ್ಕಾಂ ಕಚೇರಿಗಳು
ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವ ಮೂಲಕ ಪುತ್ತೂರು ತಾಲೂಕಿನ ಇಂಜಿನಿಯರಿಂಗ್ ಪದವೀಧರ ಕೃಷಿಕರೊಬ್ಬರ ಪ್ರಯೋಗ ಯಶಸ್ವಿಯಾಗಿದೆ. ಭೂಮಿಯನ್ನು ರಾಸಾಯನಿಕ ಮುಕ್ತವಾಗಿಸುವಲ್ಲಿ ಪರಿಣಾಮಕಾರಿ ಪ್ರಯೋಗಗಳು ಅಲ್ಲಲ್ಲಿ ರೈತರಿಂದಲೇ ನಡೆಯುತ್ತಿದ್ದು, ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರು ನಿವಾಸಿ ಜಯಗುರು ಆಚಾರ್ ಸೆಗಣಿ ಹುಡಿ ಗೊಬ್ಬರದ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ರಾಸಾಯನಿಕ ಗೊಬ್ಬರಕ್ಕೆ ಗುಡ್‍ಬೈ ಹೇಳಿ
ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯೊಬ್ಬರು ಕಳೆದ ಹದಿಮೂರು ವರ್ಷಗಳಿಂದ ಗಮನಸೆಳೆಯುತ್ತಿದ್ದಾರೆ. ವಿಶೇಷವಾದ ಪ್ರೇತದ ವೇಷದ ಮೂಲಕ
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಉಂಟಾದ ಘಟನೆ ಸಂಭವಿಸಿದೆ. ಹಳೆನೂಜಿ ಬಾಬು ಗೌಡರ ಮಗ ಹೊನ್ನಪ್ಪ ಗೌಡ ಎಂಬವರು ವಾಸ್ತವ್ಯವಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಘಟನೆಯಲ್ಲಿ ಕೊಠಡಿಯ ಪೀಠೋಪಕರಣ, ವಸ್ತುಗಳು ಬೆಂಕಿ ತಗುಲಿ ಹಾನಿಗೊಳಗಾಗಿದೆ. ಕೊಠಡಿಯಲ್ಲಿದ್ದ ಮೂರು ಕ್ವೀಂಟಾಲ್ ಗೂ ಅಧಿಕ ರಬ್ಬರ್, ಒಂದು ಸಾವಿರ ತೆಂಗು, ಅಡಿಕೆ, ಕರಿ ಮೆಣಸು, ಪೈಪ್, ಇತರೆ ಸಾಮಾಗ್ರಿಗಳು
ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್‌ನಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತಪಟ್ಟ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ
ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುತ್ತೂರು ರಾಜ್ಯ ಅಬಕಾರಿ
ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ(22) ಎಂದು ಗುರುತಿಸಲಾಗಿದೆ.ನಿಶ್ಮಿತಾ ರವರು ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಅ.11 ರಂದು
ಪುತ್ತೂರಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು ಗುರುತಿಸಲಾಗಿದೆ. ಅಝೀಝ್ ಅವರು ಇಂದು ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು
ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್


















